E-PAPER
26 Nov 2026, 08:50:13 PM|
Gold₹12128/gGold24K ₹12,128/g - 22K ₹11,107/gTap for full details
Press ID & Credential Portal
Apply / Verify  ➔
Advertisement
LIVE TV LocalCrimeNationalInternationalPoliticsBusinessEducationTechnologyEntertainmentSportsHealthFeatureTravelingBeautyRecipes
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
National News

ಯೋಗೇಶ್ ಗೌಡ ಕೊಲೆ ಪ್ರಕರಣ: ಶಾಸಕ ವಿನಯ್ ಕುಲಕರ್ಣಿ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಚಂದ್ರವಳ್ಳಿ ನ್ಯೂಸ್, ನವದೆಹಲಿ:
2016ರ ಧಾರವಾಡ ಬಿಜೆಪಿ ಜಿಲ್ಲಾ ಪಂಚಾಯತ್ ಸದಸ್ಯ ಯೋಗೇಶ್ ಗೌಡ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ
, ಮಾಜಿ ಸಚಿವ ಹಾಗೂ ಕಾಂಗ್ರೆಸ್ ಶಾಸಕ ವಿನಯ್ ಕುಲಕರ್ಣಿ ಅವರಿಗೆ ಸುಪ್ರೀಂ ಕೋರ್ಟ್ ಬುಧವಾರ ಭಾರಿ ಆಘಾತ ನೀಡಿದೆ.  

ನ್ಯಾಯಮೂರ್ತಿ ಪ್ರಶಾಂತ್ ಕುಮಾರ್ ಮಿಶ್ರಾ ಮತ್ತು ನ್ಯಾಯಮೂರ್ತಿ ಚಂದ್ರಶೇಖರ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ವಿನಯ್ ಕುಲಕರ್ಣಿ ಅವರಿಗೆ ಜಾಮೀನು ಮಂಜೂರು ಮಾಡಿ ಶಿಕ್ಷೆಗೆ ತಡೆಯಾಜ್ಞೆ ನೀಡಿದ್ದ ಕರ್ನಾಟಕ ಹೈಕೋರ್ಟ್ ಆದೇಶವನ್ನು ರದ್ದುಪಡಿಸಿದೆ.

ಅಲ್ಲದೆ, ವಿನಯ್ ಕುಲಕರ್ಣಿ ಸೇರಿದಂತೆ ಪ್ರಕರಣದ ಇತರ ಅಪರಾಧಿಗಳು ಮುಂದಿನ ಎರಡು ವಾರಗಳ ಒಳಗಾಗಿ ವಿಚಾರಣಾ ನ್ಯಾಯಾಲಯದ ಮುಂದೆ ಶರಣಾಗುವಂತೆ ಕಟ್ಟುನಿಟ್ಟಿನ ನಿರ್ದೇಶನ ನೀಡಿದೆ.

ಪ್ರಕರಣದ ಹಿನ್ನೆಲೆ:ಕಳೆದ ಏಪ್ರಿಲ್‌ನಲ್ಲಿ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯವು ವಿನಯ್ ಕುಲಕರ್ಣಿ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಬಳಿಕ ಜುಲೈ 31ರಂದು ಹೈಕೋರ್ಟ್ ಈ ಶಿಕ್ಷೆಯನ್ನು ಅಮಾನತಿನಲ್ಲಿಟ್ಟು ಜಾಮೀನು ನೀಡಿತ್ತು. ಇದನ್ನು ಪ್ರಶ್ನಿಸಿ ಸಿಬಿಐ, ರಾಜ್ಯ ಸರ್ಕಾರ ಹಾಗೂ ಮೃತ ಯೋಗೇಶ್ ಗೌಡ ಅವರ ಸಹೋದರ ಗುರುನಾಥ್ ಗೌಡ ಸುಪ್ರೀಂ ಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.  

ಧಾರವಾಡದಲ್ಲಿ ಸಂಭ್ರಮ ಹಾಗೂ ಭದ್ರತೆ:ಸುಪ್ರೀಂ ಕೋರ್ಟ್ ತೀರ್ಪು ಹೊರಬರುತ್ತಿದ್ದಂತೆ ಧಾರವಾಡದಲ್ಲಿ ಪ್ರತಿಕ್ರಿಯಿಸಿರುವ ಸಾಮಾಜಿಕ ಹೋರಾಟಗಾರ ಬಸವರಾಜ ಕೊರವರ, ನ್ಯಾಯಾಲಯದ ಆದೇಶವನ್ನು ಸ್ವಾಗತಿಸಿದ್ದಾರೆ. "ರಾಜಕೀಯವಾಗಿ ಎಷ್ಟೇ ಪ್ರಬಲರಾಗಿದ್ದರೂ ಕಾನೂನಿನ ಕುಣಿಕೆಯಿಂದ ತಪ್ಪಿಸಿಕೊಳ್ಳಲು ಸಾಧ್ಯವಿಲ್ಲ ಎಂಬುದಕ್ಕೆ ಈ ತೀರ್ಪು ಸಾಕ್ಷಿ. ನ್ಯಾಯಕ್ಕಾಗಿ ನಮ್ಮ ಕಾನೂನು ಹೋರಾಟ ಮುಂದುವರಿಯಲಿದೆ" ಎಂದು ಅವರು ತಿಳಿಸಿದ್ದಾರೆ.

ತೀರ್ಪಿನ ಹಿನ್ನೆಲೆಯಲ್ಲಿ ಮುನ್ನೆಚ್ಚರಿಕಾ ಕ್ರಮವಾಗಿ ಧಾರವಾಡದಲ್ಲಿರುವ ಬಸವರಾಜ ಕೊರವರ ಅವರ ನಿವಾಸಕ್ಕೆ ಪೊಲೀಸ್ ಭದ್ರತೆ ಒದಗಿಸಲಾಗಿದೆ. ಇದೇ ವೇಳೆ, ವಿನಯ್ ಕುಲಕರ್ಣಿ ಅವರ ಶಾಸಕ ಸ್ಥಾನವನ್ನು ಅನರ್ಹಗೊಳಿಸುವಂತೆ ವಿಧಾನಸಭಾಧ್ಯಕ್ಷರಿಗೆ ಪತ್ರ ಬರೆದು ಒತ್ತಾಯಿಸಲಾಗಿದೆ.  

 

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಚಿತ್ರದುರ್ಗದಲ್ಲಿ ತ್ರಿಮೂರ್ತಿ ದೇಗುಲ ಉದ್ಘಾಟನಾ ಸಮಾರಂಭಕರ್ತವ್ಯ ನಿರತ ಸಂಚಾರ  ಪೊಲೀಸ್ ಸಿಬ್ಬಂದಿ ಮೇಲೆ ಹಲ್ಲೆ ಪ್ರಕರಣ: ನಗರ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್  ದಾಖಲುಪರಿಸರ ಸಂರಕ್ಷಣೆ ರಾಷ್ಟ್ರ ನಿರ್ಮಾಣಕ್ಕೆ ಪೂರಕಪತ್ರಕರ್ತರಿಗಾಗಿ ಉಚಿತ ಆರೋಗ್ಯ ತಪಾಸಣಾ ಶಿಬಿರ*ಹೋರಾಟದ ಆಶಾ...!*ಹಿರಿಯೂರು ಉಪಚುನಾವಣೆಗೆ 'ಕೈ' ರಣತಂತ್ರ: ಉಸ್ತುವಾರಿಯಾಗಿ ಮಧು ಪಾಲೇಗೌಡ ನೇಮಕ ಶಿರಾ ತಾಲ್ಲೂಕಿನ ವಿವಿಧ ಕಾಮಗಾರಿಗಳಿಗೆ 400 ಲಕ್ಷ ಅನುಮೋದನೆ: ವಿಜನಿ ನಿಗಮದಿಂದ ಮಹತ್ವದ ಆದೇಶಬೇಸಿಗೆ ಕುಡಿಯುವ ನೀರಿನ ಭದ್ರತೆಗೆ ಸಿದ್ಧತೆ: ಜಲಾಶಯಗಳ ನೀರಿನ ಸಂಗ್ರಹ ವಿವರ ನೀಡಲು ನಿಗಮಗಳಿಗೆ ಸೂಚನೆಪ್ರತ್ಯೇಕ ಉತ್ತರ ಕರ್ನಾಟಕ ರಾಜ್ಯದ ಕೂಗು ಮತ್ತೆ ಮುನ್ನೆಲೆಗೆ: ಬಾಲಚಂದ್ರ ಜಾರಕಿಹೊಳಿ ಹೇಳಿಕೆಗೆ ಸಚಿವ ಬಾಲಕೃಷ್ಣ ತಿರುಗೇಟುಸುಪ್ರೀಂ ಕೋರ್ಟ್ ಆದೇಶ ಪಾಲನೆಯಾಗದ್ದಕ್ಕೆ ತಮಿಳುನಾಡು ಸರ್ಕಾರದಿಂದ ಬೇಷರತ್ ಕ್ಷಮೆ