Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
1. Apply for Press ID Card
Register official reporter application with Email OTP.
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
Education News

ಮೇ 4 ರಿಂದ ಉಚಿತ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟ-ಯೋಗೀಶ್ ಸಹ್ಯಾದ್ರಿ

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಕ್ಕಳ ಸಾಹಿತ್ಯ ಪರಿಷತ್
, ತರಳಬಾಳು ಜಗದ್ಗುರು ಶಾಖಾ ಮಠ, ಸಾಣೆಹಳ್ಳಿ ಹಾಗೂ ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು ಇವರ ಸಹಯೋಗದಲ್ಲಿ ರಾಜ್ಯಮಟ್ಟದ ಮಕ್ಕಳ ಸಾಹಿತ್ಯ ಸಂಸ್ಕೃತಿ ಕಮ್ಮಟವು ಮೇ- 4 ರಿಂದ 6 ವರೆಗೆ ಮೂರು ದಿನಗಳು ವಿವಿಧ ವೈವಿಧ್ಯಮಯ ಕಾರ್ಯಕ್ರಮ ಜರುಗಲಿದ್ದು ಅನುಭವಿ ತಜ್ಞರು ಕಮ್ಮಟದ ನೇತೃತ್ವ ವಹಿಸುತ್ತಿದ್ದಾರೆ ಎಂದು ಚಿತ್ರದುರ್ಗ ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ ಅಧ್ಯಕ್ಷ ಯೋಗೀಶ್ ಸಹ್ಯಾದ್ರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಈ ಕಮ್ಮಟದಲ್ಲಿ - ಕವನ ರಚನೆ, ಕಥೆ ಹೇಳುವುದು, ನಾಟಕ, ಚಿತ್ರಕಲೆ, ಹಸೆ ಚಿತ್ತಾರ, ಸಂಗೀತ, ಯಕ್ಷಗಾನ, ಮೂಲ ಜಾನಪದ ನೃತ್ಯ ಕಲೆಗಳ ಬಗ್ಗೆ ಉಚಿತ ತರಬೇತಿ ನೀಡಲಾಗುವುದು. ಊಟ ಹಾಗೂ ವಸತಿ ಸೌಲಭ್ಯವನ್ನು ಉಚಿತವಾಗಿ ನೀಡುತ್ತಿದ್ದು, ಊಟಕ್ಕೆ ತಟ್ಟೆ ಲೋಟ, ಮಲಗಲು ಜಮಖಾನ ತರಬೇಕು ಹಾಗೂ ಪ್ರಯಾಣ ಭತ್ಯೆ ನೀಡುವುದಿಲ್ಲ ಎಂದು ಸಂಘಟಕರು ತಿಳಿಸಿದ್ದಾರೆ.

ಈ ಕಾರ್ಯಕ್ರಮಕ್ಕೆ ಚಿತ್ರದುರ್ಗ ಜಿಲ್ಲೆಯ 25 ವಿದ್ಯಾರ್ಥಿಗಳು ಭಾಗವಹಿಸಲು ಅವಕಾಶವಿರುತ್ತದೆ. ಆಸಕ್ತ ಮಕ್ಕಳು ತಮ್ಮ ಹೆಸರು ನೋಂದಾಯಿಸಿಕೊಳ್ಳಲು ವಿನಂತಿಸಿಕೊಂಡಿದ್ದಾರೆ.

ಆಸಕ್ತ ವಿದ್ಯಾರ್ಥಿಗಳು ನೋಂದಾಯಿಸಿಕೊಳ್ಳಲು ಇವರನ್ನ ಸಂಪರ್ಕಿಸಿ-
ಯೋಗೀಶ್ ಸಹ್ಯಾದ್ರಿ, ಅಧ್ಯಕ್ಷರು, ಜಿಲ್ಲಾ ಮಕ್ಕಳ ಸಾಹಿತ್ಯ ಪರಿಷತ್ತು, 9972240239. ಮಾರುತಿ ನಾಯ್ಕ್, ಪ್ರಧಾನ ಕಾರ್ಯದರ್ಶಿ 99863 36164. ವಿಜಯ್ ಕುಮಾರ್ ಬಿ. ಉಪಾಧ್ಯಕ್ಷರು, 96867 24546. ಹಾಲೇಶ್ ಸಿ.ಜಿ, ಸಂಘಟನಾ ಕಾರ್ಯದರ್ಶಿ 77609 32325. ಮೊದಲು ಕರೆ ಮಾಡಿದವರಿಗೆ ಆದ್ಯತೆ.

Advertisement

Author
Chandravalli News
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಕಸಾಪ ಮಾಜಿ ಜಿಲ್ಲಾಧ್ಯಕ್ಷ, ಶಿಕ್ಷಣತಜ್ಞ ಡಾ. ಕೆ.ಎಂ. ವೀರೇಶ್ ಹೃದಯಾಘಾತದಿಂದ ನಿಧನದುರ್ಗಕ್ಕೆ ಹರಿದು ಬಂದ ಭದ್ರೆ- ಸೆ.24ರಂದು ಮುಖ್ಯಮಂತ್ರಿಗಳಿಂದ ಗಂಗಾಪೂಜೆ,  ಬೃಹತ್ ಸಾರ್ವಜನಿಕ ಸಮಾರಂಭಆರ್.ಎಲ್ ಜಾಲಪ್ಪ ತಾಂತ್ರಿಕ ಮಹಾವಿದ್ಯಾಲಯದಲ್ಲಿ 22ನೇ ಘಟಿಕೋತ್ಸವ ಮತ್ತು ಪದವಿ ಪ್ರದಾನ ಕಾರ್ಯಕ್ರಮನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ ಬೈಕ್ ಸವಾರ ಸಾವುಪ್ರಾಥಮಿಕ ಗ್ರಾಮೀಣ ಕೃಷಿ ಸಹಕಾರ ಸಂಘದ ಸರ್ವ ಸದಸ್ಯರ ವಾರ್ಷಿಕ ಸಭೆ ಹೋರಾಟಗಳಲ್ಲಿ ಕನ್ನಡ ಸಾಹಿತ್ಯ ಪರಿಷತ್ತಿನ ಪ್ರಾತಿನಿಧ್ಯ ಕಡಿಮೆ- ಚಿಕ್ಕಪ್ಪನಹಳ್ಳಿ ಷಣ್ಮುಖಕುಂಚಿಟಿಗ ನೌಕರರ ಸಂಘಕ್ಕೆ ಸದಸ್ಯರಾಗಿ: ಎಸ್.ಕೆ ಲಕ್ಷ್ಮಣ್ಚಳವಳಿ ನೆನಪಾಗಿ ಉಳಿದ ‘ತೆಂಕ-ಬಡಗ’ಅಂತಾರಾಷ್ಟ್ರೀಯ ಶಾಂತಿ ದಿನ – ಮನದ ದ್ವೇಷ ಕರಗಿದಾಗಲೇ ಜಗದ ಶಾಂತಿ ಅರಳುವುದು!ಗಣಪತಿ ಮೆರವಣಿಗೆ ವೇಳೆ ಗಲಾಟೆ 7 ಯುವಕರ ವಿರುದ್ಧ ಸುಮೋಟೋ ಪ್ರಕರಣ ದಾಖಲು