Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಮೆರಿಕದಲ್ಲಿ ವಿಶ್ವ ಒಕ್ಕಲಿಗರ ಸಮ್ಮೇಳನಕ್ಕೆ ನೀವೂ ಬನ್ನಿ

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಅಮೆರಿಕದಲ್ಲಿ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜನೆ ಮಾಡಲಾಗಿದ್ದು ಆಸಕ್ತರೆಲ್ಲರೂ ಆಗಮಿಸುವಂತೆ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜನಾ ಸಮಿತಿ ಅಧ್ಯಕ್ಷ ಧನಂಜಯ್ ಕೆಂಗಯ್ಯ ಕರೆ ನೀಡಿದ್ದಾರೆ.

ಸೋಮವಾರ ಅವರು ಪತ್ರಿಕಾ ಹೇಳಿಕೆ ಬಿಡುಗಡೆ ಮಾಡಿ, ಅಮೆರಿಕದ San Jose ನಗರದಲ್ಲಿ 2025ರ ಜುಲೈ 3, 4 ಮತ್ತು 5 ರಂದು ಅದ್ದೂರಿ ವಿಶ್ವ ಒಕ್ಕಲಿಗರ ಸಮ್ಮೇಳನ ಆಯೋಜಿಸಲಾಗಿದೆ. ಅಮೆರಿಕ ಒಕ್ಕಲಿಗರ ಪರಿಷತ್ತಿನ ಪಶ್ಚಿಮ ಶಾಖೆಯ (VPA-West) ಆಶ್ರಯದಲ್ಲಿ ಅತ್ಯಂತ ಸುಂದರವಾದ ಸ್ಯಾನ್ ಹೋಸೆ ಮೆಕೆನ್ರಿ ಕನ್ವೆನ್ಷನ್ ಸೆಂಟರ್ನಲ್ಲಿ ಸಮ್ಮೇಳನ ಜರುಗಲಿದೆ ಎಂದು ಅವರು ತಿಳಿಸಿದ್ದಾರೆ.

ಜಗತ್ತಿನಾದ್ಯಂತ ವಿಸ್ತರಿಸಿರುವ ಒಕ್ಕಲಿಗ ಸಮುದಾಯವನ್ನು ಒಂದುಗೂಡಿಸುವ ಉದ್ದೇಶ ಹೊಂದಿರುವ ಈ ಸಮ್ಮೇಳನದಲ್ಲಿ, ಸಮುದಾಯದ ಹಿರಿಯ ಸ್ವಾಮೀಜಿಗಳು, ಪ್ರಪಂಚದಾದ್ಯಂತ ಇರುವ ಉದ್ಯಮಿಗಳು, ಕೇಂದ್ರ ಹಾಗೂ ರಾಜ್ಯದ ಸಚಿವರು, ರಾಜಕಾರಣಿಗಳು ಮತ್ತು ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿರುವ ಗಣ್ಯರು ಭಾಗವಹಿಸಲಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಒಕ್ಕಲಿಗರ ಸಾಧನೆ-
ಪರಿಶ್ರಮಗಳ ಕುರುಹಾಗಿ
ಉಳುತ ಸಾಗಿಹೆವು ಜಗವೆಂಬ ಹೊಲವನುಎಂಬ ಶೀರ್ಷಿಕೆಯಡಿ ಸಜ್ಜುಗೊಳ್ಳುತ್ತಿರುವ ಈ ಭವ್ಯ ಸಮ್ಮೇಳನವು ವಿಶ್ವದ ಎಲ್ಲೆಡೆಯಿಂದ ಒಕ್ಕಲಿಗರನ್ನು ಆಕರ್ಷಿಸಲಿದೆ. ಸುಮಾರು 1,000ಕ್ಕೂ ಹೆಚ್ಚು ಜನರನ್ನು ಒಗ್ಗೂಡಲಿಸಲಿದೆ. ಭಾರತ ಮತ್ತು ಅಮೆರಿಕ ದೇಶಗಳಷ್ಟೇ ಅಲ್ಲದೆ, ಯುರೋಪ್, ಆಸ್ಟ್ರೇಲಿಯಾ, ಕೆನಡಾ, ದುಬೈ ಹಾಗೂ ಇನ್ನಿತರ ಭಾಗಗಳಲ್ಲಿರುವ ಒಕ್ಕಲಿಗರು ಈ ಸಮ್ಮೇಳನದಲ್ಲಿ ಭಾಗವಹಿಸಲಿದ್ದಾರೆ ಎಂಬುದು ಈ ಸಮ್ಮೇಳನದ ವಿಶೇಷ ಎಂದು ಅವರು ತಿಳಿಸಿದ್ದಾರೆ.

ಸಾಂಸ್ಕೃತಿಕ ಉತ್ಸವಕ್ಕೆ ಭಾರತ ಹಾಗೂ ಅಮೆರಿಕದ ಕಲಾವಿದರಿಂದ ಭರ್ಜರಿ ಮನೋರಂಜನೆಯ ಕಾರ್ಯಕ್ರಮಗಳು, ಸವಿಯಾದ ಸಾಂಪ್ರದಾಯಿಕ ಔತಣ, ಬಾಂಧವ್ಯದ ಬೆಸುಗೆಯನ್ನು ಬಲಪಡಿಸುವ ಸ್ನೇಹಕೂಟಗಳು, ಸಂಸ್ಕೃತಿ-ಸಂಪ್ರದಾಯಗಳನ್ನು ಎತ್ತಿ ತೋರಿಸುವ ಭವ್ಯ ಮೆರವಣಿಗೆ, ಮಕ್ಕಳಿಗೆ ಹಾಗೂ ಯುವಜನಾಂಗಕ್ಕೆ ಸ್ಫೂರ್ತಿ-ಸಂತೋಷ ನೀಡುವ ಅನೇಕ ಚಟುವಟಿಕೆಗಳು, ಉದ್ಯಮಶೀಲರಿಗೆ ಉತ್ತೇಜನ ನೀಡುವ ಬ್ಯುಸಿನೆಸ್ ಫೋರಂ, ಸ್ತ್ರೀ ಶಕ್ತಿಗೆ ಪೂರಕವಾದ ಮಹಿಳಾ ವೇದಿಕೆ ಹೀಗೆ ಹತ್ತು ಹಲವಾರು ವಿಭಿನ್ನ ರೀತಿಯ ಕಾರ್ಯಕ್ರಮಗಳ ಯೋಜನೆ ಭರದಿಂದ ಸಾಗಿದೆ ಎಂದು ಅವರು ಮಾಹಿತಿ ನೀಡಿದ್ದಾರೆ.

ಅದ್ಭುತ ತಾಣ, ಅಮೋಘ ಆತಿಥ್ಯ, ಅಪೂರ್ವ ಕಾರ್ಯಕ್ರಮಗಳ ಜೊತೆಗೆ ಎಲ್ಲೆಡೆಯಿಂದ ಬರುವ ತಮ್ಮ ಬಂಧು-ಮಿತ್ರರಿಗೆ ಅಪೂರ್ವ ಸ್ವಾಗತ ಕೋರಲು ಕ್ಯಾಲಿಫೋರ್ನಿಯಾ ಒಕ್ಕಲಿಗರು ಉತ್ಸಾಹದಿಂದ ಕಾಯುತ್ತಿದ್ದಾರೆ ಎಂದರು.

ಮೂರು ದಿನಗಳ ಕಾಲ ನಡೆಯುವ ಸಮ್ಮೇಳನದ ಆಕರ್ಷಣೆಗಳು:
ಉದ್ಯಮ ಸಹಕಾರ ಮತ್ತು ವೈದ್ಯಕೀಯ ಚರ್ಚೆಗಳು.
ಉದ್ಯಮ ವಿಸ್ತರಣೆಗೆ ಸರ್ಕಾರದ ವಿವಿಧ ಯೋಜನೆಗಳ ಪರಿಚಯ ಮತ್ತು ಪ್ರಚಾರ.
ಸಮುದಾಯದ ಕಲಾತ್ಮಕ ಮತ್ತು ಸಾಂಸ್ಕೃತಿಕ ಪರಂಪರೆಯ ಪ್ರದರ್ಶನ. ಪ್ರಗತಿಶೀಲ ಚರ್ಚೆಗಳು ಮತ್ತು ಜಾಗತಿಕ ನೆಟ್‌ವರ್ಕಿಂಗ್ ಅವಕಾಶಗಳು. ಸಾಂಸ್ಕೃತಿಕ ವೈಭವದಿಂದ ಕೂಡಿರುವ ಈ ಸಮ್ಮೇಳನವು, ಸಮುದಾಯದ ಮುಂದಾಳತ್ವವನ್ನು ಹಿರಿಮೆಯನ್ನು ವಿಶ್ವಕ್ಕೆ ಪರಿಚಯಿಸುವ ಮಹತ್ವದ ವೇದಿಕೆಯಾಗಲಿದೆ.

ಅಮೆರಿಕ ಹಾಗೂ ಜಗತ್ತಿನಾದ್ಯಂತ ಇರುವ ಒಕ್ಕಲಿಗ ಸಮುದಾಯದ ಎಲ್ಲಾ ಸದಸ್ಯರು ಈ ಸಮ್ಮೇಳನದಲ್ಲಿ ಪಾಲ್ಗೊಳ್ಳಲು ಆಯೋಜಕರ ಸಮಿತಿ ಆತ್ಮೀಯವಾಗಿ ಆಹ್ವಾನಿಸುತ್ತಿದೆ. ಸಮ್ಮೇಳನದಲ್ಲಿ ಭಾಗವಹಿಸಲು ಆಸಕ್ತರು ಹೆಚ್ಚಿನ ವಿವರಗಳಿಗೆ ಭೇಟಿ ನೀಡಿ https://myvpa.org/ ಮಾಹಿತಿ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಮಾಧ್ಯಮ ಸಂಪರ್ಕ: ಮಂಜುನಾಥ್ 9980765001 ಇವರನ್ನು ಸಂಪರ್ಕಿಸಬಹುದಾಗಿದೆ.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ