Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂಬಾಗಿಲಿನಿಂದ ತಲೆ ತೂರಿಸಿ ಬರುವ ನಾಮಿನೇಷನ್ ರಾಜಕಾರಣಿ ನೀವು

Advertisement
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿ.ಕೆ ಹರಿಪ್ರಸಾದ್ ಅವರೇ, ನಮ್ಮ ಸ್ಥಾನ-ಮಾನಗಳ ಬಗ್ಗೆ ನೀವು ತಲೆಕೆಡಿಸಿಕೊಳ್ಳುವುದು ಬೇಡ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ ವಿಜಯೇಂದ್ರ ತರಾಟೆ ತೆಗೆದುಕೊಂಡಿದ್ದಾರೆ. 

ಭಾರತೀಯ ಜನತಾ ಪಾರ್ಟಿಯಲ್ಲಿ 'ಕಾರ್ಯಕರ್ತ' ಎಂಬುದೇ ಬಹುದೊಡ್ಡ ಹುದ್ದೆ, ಅದಕ್ಕಿಂತ ದೊಡ್ಡ ಸ್ಥಾನಮಾನ ಮತ್ತೊಂದು ಇಲ್ಲ ಎಂದು ಭಾವಿಸುವುದೇ ನಮ್ಮ ಪಕ್ಷ ನಮಗೆ ಕಲಿಸಿಕೊಟ್ಟಿರುವ ಶಿಸ್ತು ಹಾಗೂ ಸಂಸ್ಕಾರ, ಈ ಕಾರಣಕ್ಕಾಗಿಯೇ ನಮಗೆ ದೊರೆಯುವ ಪ್ರತಿಯೊಂದು ಅವಕಾಶಗಳನ್ನು ಜವಾಬ್ದಾರಿ ಎಂದು ಪರಿಗಣಿಸಿ ನಮ್ಮನ್ನು ಆ ನಿಟ್ಟಿನಲ್ಲಿ ಸಮರ್ಪಿಸಿಕೊಳ್ಳುತ್ತೇವೆ ಎಂದು ಹರಿಪ್ರಸಾದ್ ಅವರಿಗೆ ವಿಜಯೇಂದ್ರ ಟಾಂಗ್ ನೀಡಿದ್ದಾರೆ. 


ಪ್ರಧಾನ ಮಂತ್ರಿ ಸ್ಥಾನವನ್ನು ಪ್ರಧಾನ ಸೇವಕ ಎಂದು ಪರಿಗಣಿಸಿ ತಮನ್ನು ದೇಶಕ್ಕಾಗಿ ಸಮರ್ಪಿಸಿಕೊಂಡವರು ಹೆಮ್ಮೆಯ ಪ್ರಧಾನಿ ನರೇಂದ್ರ ಮೋದಿ ಅವರು, ಇದು ನಮ್ಮ ಭಾರತೀಯ ಜನತಾ ಪಾರ್ಟಿಯ ಪರಮ ಧ್ಯೇಯ. ದಯವಿಲ್ಲದ ಧರ್ಮವಾವುದಯ್ಯಾ? ದಯವೇ ಬೇಕು ಸಕಲ ಪ್ರಾಣಿಗಳಲ್ಲಿಯೂ ದಯವೇ ಧರ್ಮದ ಮೂಲವಯ್ಯಾ …..ಎಂಬ ಬಸವಣ್ಣನವರ ತತ್ವವನ್ನು ಆಧರಿಸಿ ಸಕಲ ಜೀವರಾಶಿಗಳಿಗೆಲ್ಲ ನೆರಳು ನೀಡುವ ಸಂಕಲ್ಪ ಹೊತ್ತ ಬೃಹತ್ ರಾಜಕೀಯ ವೃಕ್ಷ ನಮ್ಮ ಭಾರತೀಯ ಜನತಾ ಪಾರ್ಟಿ ಎಂದು ವಿಜಯೇಂದ್ರ ತಿಳಿಸಿದ್ದಾರೆ. 

ಮಂಜಮ್ಮ ಜೋಗತಿಅವರನ್ನು ಗುರುತಿಸಿ ಕರ್ನಾಟಕದ ಸಾಂಸ್ಕೃತಿಕ ಹಿರಿಮೆಯನ್ನು ಪ್ರತಿನಿಧಿಸುವ ಜಾನಪದ ಅಕಾಡೆಮಿಯ ಅಧ್ಯಕ್ಷರನ್ನಾಗಿಸಿ ಪದ್ಮ ಶ್ರೀಪ್ರಶಸ್ತಿ ನೀಡಿ ಗೌರವಿಸಿ ಲಿಂಗತಾರತಮ್ಯವನ್ನು ಮೆಟ್ಟಿನಿಂತು ಒಟ್ಟು ಸಮಾಜದ ಕಲ್ಪನೆಯ ದೇಶ ಕಟ್ಟುವ ಸಂಕಲ್ಪ ಸಾಕ್ಷಿಕರಿಸಿದ ಪಕ್ಷ ನಮ್ಮದು. ಅರ್ಹತೆ ಇರುವ ಪ್ರತಿಯೊಬ್ಬರನ್ನು ಗುರುತಿಸಿ, ಗೌರವಿಸಿ ಜವಾಬ್ದಾರಿ ಸ್ಥಾನಗಳನ್ನು ನೀಡುವ ಆದರ್ಶ ನಾವು ಅಳವಡಿಸಿಕೊಂಡಿದ್ದೇವೆ ಎಂದು ವಿಜಯೇಂದ್ರ ತಿಳಿಸಿದರು.

ಆದಿವಾಸಿ ಬುಡಕಟ್ಟು ಮೂಲದ ದ್ರೌಪದಿ ಮುರ್ಮು ಅವರನ್ನು ರಾಷ್ಟ್ರಾಧ್ಯಕ್ಷ ಹುದ್ದೆಯಲ್ಲಿ ಕೂರಿಸಿ ಸಂವಿಧಾನದ ಆಶಯ ಪ್ರಜಾಪ್ರಭುತ್ವದ ಸುಂದರತೆಯನ್ನು ವಿಶ್ವಕ್ಕೆ ಪಸರಿಸಿದ ಹೆಗ್ಗಳಿಕೆ ನಮ್ಮದು. ಶ್ರೀಮತಿ ನಿರ್ಮಲಾ ಸೀತಾರಾಮನ್ ರವರಂತಹ ಸಮರ್ಥ ವಿತ್ತ ಸಚಿವೆಯನ್ನು ದೇಶಕ್ಕೆ ಕೊಟ್ಟ ಹೆಮ್ಮೆ ನಮ್ಮದು, ಇಂತಹ ಉದಾಹರಣೆಗಳು ಸಾಲು, ಸಾಲು ನಮ್ಮ ಮುಂದಿದೆ, ಭವಿಷ್ಯತ್ತಿನಲ್ಲಿ  ನಾರಿಯರು ,ಅರ್ಧನಾರಿಯರು ಯಾರೇ ಇರಲಿ ಅವರಿಗಾಗಿ ಅವಕಾಶದ ಬಾಗಿಲು ಭಾರತೀಯ ಜನತಾ ಪಾರ್ಟಿಯಲ್ಲಿ ಸದಾ ತೆರೆದಿರುತ್ತದೆ ಎಂದು ಅವರು ತಿಳಿಸಿದ್ದಾರೆ. 

ಹಿಂಬಾಗಿಲಿನಿಂದ ತಲೆ ತೂರಿಸಿ ಬರುವ ನಾಮಿನೇಷನ್ (Nomination) ರಾಜಕಾರಣಿ ಎಂದು ನಿಮ್ಮ ಪಕ್ಷದವರಿಂದಲೇ ಕುಹಕವಾಡಿಸಿಕೊಳ್ಳುವ ನೀವು ಎಂದೂ ಜನರಿಂದ ಆಯ್ಕೆಯಾದವರಲ್ಲ, ನಿಮ್ಮಿಂದ ಸಮುದಾಯದ ಬಗೆಗಿನ ಕಾಳಜಿಯ ಮಾತುಗಳನ್ನು ನಿರೀಕ್ಷಿಸುವುದು ಮೂರ್ಖತನ. ನಾರಿಯರು, ಅರ್ಧ ನಾರಿಯರ ಸಾಮರ್ಥ್ಯದ ಬಗ್ಗೆ ವ್ಯಂಗ್ಯ ವಾಡಿರುವ ನಿಮ್ಮ ನಡೆ ದುಶ್ಯಾಸನ ಸಂಸ್ಕೃತಿಯನ್ನು ನೆನಪಿಸುತ್ತದೆ. ಕಾಂಗ್ರೆಸ್ ಪಕ್ಷ ಎಂದೂ ಧರ್ಮರಾಯನಂತೆ ನಡೆದುಕೊಂಡಿಲ್ಲ, ಅದೇನಿದ್ದರೂ ದುರ್ಯೋಧನ, ದುಶ್ಯಾಸನರನ್ನು ಪೋಷಿಸುವ ದೃತರಾಷ್ಟ್ರನ ಸಂಸ್ಕೃತಿ ಎಂಬುದು ದೇಶಕ್ಕೆ ತಿಳಿದ ವಿಷಯವಾಗಿದೆ ಎಂದು ವಿಜಯೇಂದ್ರ ವಾಗ್ದಾಳಿ ಮಾಡಿದ್ದಾರೆ.

ನೀವು ವ್ಯಂಗ್ಯವಾಡಿ ಅಪಮಾನಿಸಿದ ನಾರಿಯರು, ಅರ್ಧ ನಾರಿಯರು ಭವಿಷ್ಯತ್ತಿನಲ್ಲಿ ಅತ್ಯುನ್ನತ ಸ್ಥಾನಗಳನ್ನು ಅಲಂಕರಿಸುವ ಅವಕಾಶಗಳು ಇರುವುದು ಭಾರತೀಯ ಜನತಾ ಪಾರ್ಟಿಯಲ್ಲಿ ಮಾತ್ರ. ನಿಮ್ಮ ನಾಲಿಗೆಯಿಂದ ಹೊರ ಬಿದ್ದಿರುವ ಮಾತುಗಳು ಮಹಿಳೆಯರು ಹಾಗೂ ಮಂಗಳಮುಖಿಯರಿಗಷ್ಟೇ ಅಪಮಾನಿಸಿಲ್ಲ ಅದು ಭಾರತದ ಸಂಸ್ಕೃತಿಯನ್ನೂ ಅವಹೇಳನ ಮಾಡಿದಂತಾಗಿದೆ.

ಈ ಕೂಡಲೇ ಸ್ತ್ರೀ ಸಮುದಾಯ ಹಾಗೂ ತೃತೀಯ ಲಿಂಗಿ ಸಮುದಾಯಗಳ ಕ್ಷಮೆ ಯಾಚಿಸಿ ಎಂದು ವಿಜಯೇಂದ್ರ ಆಗ್ರಹ ಮಾಡಿದ್ದಾರೆ.

 

 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ