Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಯುವ ಜನಾಂಗ ಭಗವದ್ಗೀತೆ ಅಧ್ಯಯನ ಮಾಡಬೇಕು: ಅಭಿಷೇಕ್ ಚಕ್ರವರ್ತಿ

Advertisement
ಚಂದ್ರವಳ್ಳಿ ನ್ಯೂಸ್, ಚಳ್ಳಕೆರೆ:
ಪ್ರತಿಯೊಬ್ಬ ಯುವಕ ಯುವತಿಯರು ಶ್ರೀಮದ್ ಭಗವದ್ಗೀತೆಯನ್ನು ಅಧ್ಯಯನ ಮಾಡುವ ಮೂಲಕ ಉತ್ತಮ ಚಾರಿತ್ರ್ಯವಂತ ವ್ಯಕ್ತಿತ್ವವನ್ನು ರೂಪಿಸಿಕೊಂಡು ಸದೃಢ ರಾಷ್ಟ್ರವನ್ನು ಕಟ್ಟಬೇಕು ಎಂದು ಚಳ್ಳಕೆರೆಯ ಶ್ರೀಶಾರದಾಶ್ರಮದ ಸ್ವಯಂಸೇವಕ ಅಭಿಷೇಕ್ ಚಕ್ರವರ್ತಿ ತಿಳಿಸಿದರು.


ನಗರದ ವಾಸವಿ ಕಾಲೋನಿಯ ಶ್ರೀಶಾರದಾಶ್ರಮದ ದೇವಸ್ಥಾನದಲ್ಲಿ ಬಾಪೂಜಿ ಆಯುರ್ವೇದ ಕಾಲೇಜಿನ ವಿದ್ಯಾರ್ಥಿಗಳಿಗಾಗಿ ಆಯೋಜಿಸಿದ್ದ "ವ್ಯಕ್ತಿತ್ವ ನಿರ್ಮಾಣಕಾರಿ" ತರಗತಿ ಕಾರ್ಯಕ್ರಮದಲ್ಲಿ ಪಾಲ್ಗೊಂಡ ಅವರು "ಭಾರತದ ಬೆನ್ನೆಲುಬು ಆಧ್ಯಾತ್ಮಿಕತೆ" ಎಂಬ ವಿಷಯವಾಗಿ ವಿಶೇಷ ಉಪನ್ಯಾಸ ನೀಡಿದರು.                        

ಕಾರ್ಯಕ್ರಮದ ಆರಂಭದಲ್ಲಿ ಪ್ರಾರ್ಥನೆ ಮತ್ತು ಭಜನೆಯನ್ನು ಯತೀಶ್ ಎಂ ಸಿದ್ದಾಪುರ ನಡೆಸಿಕೊಟ್ಟರೆ ಮಾತಾಜೀ ತ್ಯಾಗಮಯೀ ಅವರು ವಿದ್ಯಾರ್ಥಿಗಳಿಗೆ ಧ್ಯಾನಾಭ್ಯಾಸ ಮಾಡಿಸಿ ದಿವ್ಯತ್ರಯರಿಗೆ ಮಂಗಳಾರತಿ ನಡೆಸಿಕೊಟ್ಟರು‌. ಕೊನೆಯಲ್ಲಿ ಸಂನ್ಯಾಸಿ ಗೀತೆಯ ಗಾಯನ ನಡೆಯಿತು. 

                     ತರಗತಿಯಲ್ಲಿ ಚೇತನ್, ಲೋಹಿತ್, ಮಾನ್ಯ, ಪುಷ್ಪಲತಾ, ಮಂಜುಳಾ ಉಮೇಶ್ ಸೇರಿದಂತೆ ಸಾಕಷ್ಟು ಸಂಖ್ಯೆಯಲ್ಲಿ ವಿದ್ಯಾರ್ಥಿಗಳು ಪಾಲ್ಗೊಂಡಿದ್ದರು‌.
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ