Web Stories
Chandravalli News
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕನ್ನಡದ ಅಸ್ಮಿತೆಗಾಗಿ ಯುವಜನತೆ ಕಾರ್ಯಪ್ರವೃತ್ತರಾಗಬೇಕು

Advertisement
ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡದ ಅಸ್ಮಿತೆಗೆ ಭ್ರಮನಿರಸನವಾಗದಂತೆ ಯುವಜನತೆ ಕಾರ್ಯಪ್ರವೃತ್ತರಾಗಬೇಕಾಗಿದೆ ಎಂದು ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೆಶಕ ಬಿ.ಎಂ.ಗುರುನಾಥ್ ಹೇಳಿದ್ದಾರೆ.
ಚಿತ್ರದುರ್ಗ ನಗರದ ಸ್ಕೌಟ್ ಮತ್ತು ಗೈಡ್ಸ್ ಸಭಾಂಗಣದಲ್ಲಿ ಏರ್ಪಡಿಸಿದ್ದ ಕನ್ನಡ ಹಾಡುಗಳ ಗೀತ ಗಾಯನ ಮತ್ತು ಚಿತ್ರದುರ್ಗ ತಾಲ್ಲೂಕು ಸಾಹಿತ್ಯ ಪರಿಷತ್ತಿನ ಸದಸ್ಯರ ಪದ ಗ್ರಹಣ ಕಾರ್ಯಕ್ರಮದಲ್ಲಿ ಮಾತನಾಡಿದರು. ಕುವೆಂಪು ರವರು ಬರೆದ ನಾಡಗೀತೆಯಲ್ಲಿ ಕನ್ನಡದ ವಿಶಾಲತೆ ಮತ್ತು ಸಮೃದ್ಧತೆಯನ್ನು ವಿಶೇಷವಾಗಿ ವ್ಯಕ್ತಪಡಿಸಿದ್ದಾರೆ. ಇತ್ತೀಚಿನ ದಿನಗಳಲ್ಲಿ ಜಾತಿ
, ಧರ್ಮ ಮತ್ತು ಭಾಷೆಗಳ ನಡುವಿನ ಗೊಂದಲಗಳು ಹೆಚ್ಚಾಗಿವೆ. ೨೫೦೦ ವರ್ಷಗಳ ಇತಿಹಾಸ ಹೊಂದಿರುವ ಕನ್ನಡ ಭಾಷೆಗೆ ಸಮಸ್ಯೆಗಳು ಹೆಚ್ಚಾಗುತ್ತಿವೆ. ಸಮಸ್ಯೆಗಳ ನಿವಾರಣೆಗೆ ಇಂದಿನ ಪೀಳಿಗೆಯ ಯುವಕರು ಕನ್ನಡದ ಬಳಕೆಯನ್ನು ಹೆಚ್ಚು ಮಾಡಬೇಕಾದ ಅನಿವಾರ್ಯತೆ ಇದೆ. ಸಾಮಾಜಿಕ ಜಾಲತಾಣಗಳಿಂದ ವಿಶ್ವದ ಗಾತ್ರ ಕಿರಿದಾಗುತ್ತಿದೆ. ಆದರೆ ಸ್ಥಳೀಯವಾಗಿರುವ ಪ್ರತಿಭೆ, ಸಂಸ್ಕೃತಿ,ಕಲೆಗಳನ್ನು ಕಡೆಗಣಿಸಲಾಗುತ್ತಿದೆ. ಕೋಗಿಲೆ ನಮಗೆ ಹೆವ್ಮ್ಮೆಯ ಪಕ್ಷಿಯಾಗಿದೆ. ಆದರೆ ಸ್ಥಳೀಯವಾಗಿರುವ ಪಕ್ಷಿಗಳನ್ನು ನಿರ್ಲಕ್ಷಿಸಲಾಗುತ್ತಿದೆ. ನಮ್ಮ ದೃಷ್ಟಿ ಕೇವಲ ಗಂಧದ ಮರದ ಕಡೆಗೆ ಇದೆ. ಆದರೆ ಸ್ಥಳೀಯವಾಗಿರುವ ಗಿಡ,ಮರಗಳನ್ನು ಸಂರಕ್ಷಿಸುವುದಕ್ಕೆ ಗಮನ ಹರಿಸಬೇಕಾಗಿದೆ. ವಿಶಾಲ ದೃಷ್ಟಿಯ ನಡುವೆ ನಮ್ಮ ಸುತ್ತಲಿನ ಮತ್ತು ಹತ್ತಿರದ ಪ್ರಪಂಚವನ್ನು ಮರೆಯಬಾರದು ಎಂದರು.

        ಜಿಲ್ಲಾ ಕಸಾಪ ಅಧ್ಯಕ್ಷ ಕೆ.ಎಂ.ಶಿವಸ್ವಾಮಿ ಮಾತನಾಡಿ, ಕನ್ನಡ ಗೀತೆಗಳು ಸಾಹಿತ್ಯದ ವಿಶೇಷ ಪರಂಪರೆಯನ್ನು ಹೊಂದಿವೆ. ಹಿಂದಿನ ತಲೆಮಾರಿನ ಚಿತ್ರಗೀತೆಗಳು ದೃಶ್ಯಕಾವ್ಯಗಳಾಗಿವೆ. ಗಾಯಕರಿಗೆ ಕನ್ನಡ ಭಾಷೆಯ ಮೇಲಿನ ಹಿಡಿತ ಹಾಗೂ ಮಧುರವಾದ ಧ್ವನಿ ಅಗತ್ಯವಾಗಿದೆ. ತಾಲ್ಲೂಕು ಕನ್ನಡ ಸಾಹಿತ್ಯ ಪರಿಷತ್ತು ದೊಡ್ಡ ಪ್ರಮಾಣದ ಕಾರ್ಯಕ್ರಮ ಕೈಗೊಂಡರೆ ಸಹಕಾರ ನೀಡುವುದಾಗಿ ತಿಳಿಸಿದರು.

ತಾಲ್ಲೂಕು ಕಸಾಪ ಅಧ್ಯಕ್ಷ ವಿ.ಎಲ್.ಪ್ರಶಾಂತ್ ಮಾತನಾಡಿ, ಇದೀಗ ತಾಲ್ಲೂಕು ಘಟಕ ರಚನೆಯಾಗಿದೆ. ದೊಡ್ಡ ಪ್ರಮಾಣದ ಕನ್ನಡ ಕಾರ್ಯಕ್ರಮಕ್ಕೆ ಚಿಂತನೆ ನಡೆಸಲಾಗುತ್ತಿದೆ. ಕನ್ನಡದ ಕಾರ್ಯಕ್ರಮಗಳು ನಿರಂತರವಾಗಿ ಕೈಗೊಳ್ಳಲಾಗುವುದು ಎಂದರು.

 ಡಿಎಆರ್ ಸಿಬ್ಬಂದಿ ಮನು, ನಿವೃತ್ತ ಎಸ್‌ಐ ನರೇಂದ್ರಬಾಬು ಮತ್ತು ಪ್ರಾಣೇಶ್, ವಿಶ್ವನಾಥ್ ಸೇರಿದಂತೆ ೪೫ ಕ್ಕೂ ಹೆಚ್ಚು ಗಾಯಕರು ಕನ್ನಡ ನಾಡು, ನುಡಿಯ ಹಾಡುಗಳನ್ನು ಹಾಡಿದರು. ಜಿಲ್ಲಾ ಪದಾಧಿಕಾರಿಗಳಾದ ಶ್ರೀನಿವಾಸ ಮಳಲಿ, ಸಿ.ಲೋಕೇಶ್, ಕೆ.ಜಿ.ಅಜಯ್ ಕುಮಾರ್, ವಿಶ್ವನಾಥ್ ತಾಲ್ಲೂಕು ಕಾರ್ಯದರ್ಶಿ ಎಂ.ಕೆ.ಹರೀಶ್ ಮತ್ತಿತರರಿದ್ದರು. 
Advertisement
Advertisement

Author
Chandravalli News
Regional Kannada Daily is a leading news paper in (Karnataka state). Which is having large number of circulation in the districts of Chitradurga, Davanagere, Bellary, Vijayanagara, Shimoga, Chikmagalur, Tumkur, Bangalore, Simultaneously published in rural districts of Bangalore
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಸತ್ಯ ಧರ್ಮದ ದೀಪಗಳು ಹೊಳೆದಂತೆ ಅಬ್ದುಲ್ ಜಬ್ಬಾರ್ ಅಮಾನತು ಹಿಂಪಡೆಯುವ ಬಗ್ಗೆ ಚರ್ಚೆ: ಸಚಿವ ಸತೀಶ್ ಜಾರಕಿಹೊಳಿಸಿದ್ದರಾಮಯ್ಯ ಅಸಹಾಯಕರಾಗಿದ್ದಾರೆ; ಸಿಎಂ ವಿರುದ್ಧ ಕೆ.ಎನ್. ರಾಜಣ್ಣ ಅಸಮಾಧಾನದ ಸ್ಫೋಟ!ಶಾಖಾಧಿಕಾರಿ ಹಾಗೂ ಸಿವಿಲ್ ನ್ಯಾಯಾಧೀಶರ ಹುದ್ದೆಗಳಿಗೆ ಅರ್ಜಿ ಆಹ್ವಾನ ಮೂರೇ ನಿಮಿಷದಲ್ಲಿ ಜ್ಯುವೆಲರಿ ಶಾಪ್ ದರೋಡೆ; ಮಾಲೀಕ ಶೌಚಾಲಯಕ್ಕೆ ಹೋದಾಗ ಕೈಚಳಕ ತೋರಿದ ಖದೀಮರು!ಮನೆಯೊಳಗೆ ನುಗ್ಗಿದ ಚಿರತೆ; ಮಂಚದ ಕೆಳಗೆ ಅವಿತಿದ್ದ ಕಿರಾತಕನಿಂದ ವೃದ್ಧೆ ಪಾರು!"ನಮಗೂ ಪ್ರಧಾನಿಗೂ ಹೆಂಡತಿ ಸಮಸ್ಯೆ ಇಲ್ಲ": ಸಂಸತ್ತಿನಲ್ಲಿ ರಾಹುಲ್ ಗಾಂಧಿ ಲಘು ಧಾಟಿಯ ವಾಗ್ದಾಳಿಮುಖಾಮುಖಿ ಡಿಕ್ಕಿ: ಕಾರಿನಲ್ಲಿ ಬೆಂಕಿ ಕಾಣಿಸಿಕೊಂಡು ಒಂದೇ ಕುಟುಂಬದ ಆರು ಮಂದಿ ದುರ್ಮರಣಜಬ್ಬಾರ್ ಅಮಾನತು ಹಿಂಪಡೆಯುವಂತೆ ಜಾರಕಿಹೊಳಿ ಮನವಿ: ಪಕ್ಷದಲ್ಲಿ ಯಾವುದೇ ಗುಂಪುಗಾರಿಕೆ ಇಲ್ಲ-ಶಿವಕುಮಾರ್ ಮಹಿಳಾ ಮೀಸಲಾತಿ ಕಾಯ್ದೆ-2023 ಅಧಿಕೃತ ಜಾರಿ: ಕೇಂದ್ರ ಸರ್ಕಾರದಿಂದ ಅಧಿಸೂಚನೆ ಪ್ರಕಟ