Press ID & Credential Portal
Apply / Verify  ➔
LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureTravelingBeauty
Press & Media Credential Portal
✕
1. Apply for Press ID Card
Register official reporter application with Email OTP.
➔
2. Download Approved Badge
Enter Card ID to receive authorization code via email.
3. Verify Reporter ID & Card (View Only)
For Public & Police: Check if card is authentic.
State News

ಜನವರಿಯಲ್ಲಿ ZP-TP ಚುನಾವಣೆ; ಗ್ರಾಮೀಣ ಮಹಿಳೆಯರಿಗೆ ಹೈನುಗಾರಿಕೆಗೆ ಸಬ್ಸಿಡಿ ಪ್ರೋತ್ಸಾಹಧನ!

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಜಿಲ್ಲಾ ಮತ್ತು ತಾಲೂಕು ಪಂಚಾಯತ್ ಚುನಾವಣೆ ದಿನಾಂಕ
, ಗ್ರಾಮೀಣ ಮಹಿಳೆಯರ ಆರ್ಥಿಕ ಸಬಲೀಕರಣ ಹಾಗೂ ವಿವಿಧ ಅಭಿವೃದ್ಧಿ ಕಾಮಗಾರಿಗಳ ಕುರಿತು ಹಲವು ಮಹತ್ವದ ತೀರ್ಮಾನಗಳನ್ನು ಕೈಗೊಳ್ಳಲಾಗಿದೆ. ಸಚಿವ ಈಶ್ವರ್ ಖಂಡ್ರೆ ಅವರು ಸಂಪುಟದ ನಿರ್ಧಾರಗಳ ಕುರಿತು ಮಾಧ್ಯಮಗಳಿಗೆ ಮಾಹಿತಿ ನೀಡಿದ್ದಾರೆ.

೧. ಜನವರಿಯಲ್ಲಿ ZP ಮತ್ತು TP ಚುನಾವಣೆ?
ಚುನಾವಣಾ ಆಯೋಗವು ವಾರ್ಡುವಾರು ಮೀಸಲಾತಿ ಪಟ್ಟಿಗೆ ಒಪ್ಪಿಗೆ ಸೂಚಿಸಿದರೆ
, ಜನವರಿ ಮೊದಲ ವಾರದಲ್ಲಿ ಜಿಲ್ಲಾ ಪಂಚಾಯತ್ (ZP) ಹಾಗೂ ತಾಲೂಕು ಪಂಚಾಯತ್ (TP) ಚುನಾವಣೆ ನಡೆಸಲು ಸರ್ಕಾರ ಸಜ್ಜಾಗಿದೆ.

Advertisement

ಪ್ರಕ್ರಿಯೆ ಹೇಗಿರುತ್ತದೆ?: ರಾಜ್ಯ ಚುನಾವಣಾ ಆಯೋಗಕ್ಕೆ ಈಗಾಗಲೇ ಮೀಸಲಾತಿ ಪಟ್ಟಿಗೆ ಒಪ್ಪಿಗೆ ಕೋರಿ ಮನವಿ ಸಲ್ಲಿಸಲಾಗಿದೆ. ಪರಿಷತ್ ಚುನಾವಣೆ ನೀತಿ ಸಂಹಿತೆ ಹಿನ್ನೆಲೆಯಲ್ಲಿ ಇದು ಕೇಂದ್ರ ಚುನಾವಣಾ ಆಯೋಗಕ್ಕೆ ಹೋಗಿದೆ. ಒಪ್ಪಿಗೆ ದೊರೆತ ಬಳಿಕ ಕರಡು ಅಧಿಸೂಚನೆ ಹೊರಡಿಸಿ, ಸಾರ್ವಜನಿಕ ಆಕ್ಷೇಪಣೆಗಳನ್ನು ಪರಿಗಣಿಸಿ ಡಿಸೆಂಬರ್ ಮಧ್ಯದಲ್ಲಿ ಅಂತಿಮ ಅಧಿಸೂಚನೆ ಪ್ರಕಟಿಸಲಾಗುತ್ತದೆ.

ಗ್ರಾ.ಪಂ. ಚುನಾವಣೆ: ZP, TP ಚುನಾವಣೆ ಮುಗಿದ 15 ದಿನಗಳ ಬಳಿಕ ಗ್ರಾಮ ಪಂಚಾಯಿತಿ ಚುನಾವಣೆ ನಡೆಸಲು ಉದ್ದೇಶಿಸಲಾಗಿದೆ.

೨. ಹೈನುಗಾರಿಕೆಗೆ ಪ್ರೋತ್ಸಾಹಧನ
ಉತ್ತರ ಕರ್ನಾಟಕ ಭಾಗದ ಗ್ರಾಮೀಣ ಮಹಿಳೆಯರ ಆರ್ಥಿಕ ಅಭಿವೃದ್ಧಿಗಾಗಿ ಮಿಶ್ರತಳಿ ಹಸು ಅಥವಾ ಸುಧಾರಿತ ಎಮ್ಮೆ ಖರೀದಿಸಲು ಶೇ. 25ರಷ್ಟು ಸಬ್ಸಿಡಿ ನೀಡುವ ಯೋಜನೆಗೆ ಸಂಪುಟ ಅನುಮೋದನೆ ನೀಡಿದೆ.

ಯೋಜನೆಯ ವಿವರ: ಬೆಳಗಾವಿ ಮತ್ತು ಕಲಬುರಗಿ ವಿಭಾಗಗಳ ಒಟ್ಟು 9,600 ಅರ್ಹ ಮಹಿಳಾ ಫಲಾನುಭವಿಗಳಿಗೆ ಈ ಸೌಲಭ್ಯ ಸಿಗಲಿದೆ.

ಅನುದಾನ ಹಂಚಿಕೆ: ಒಟ್ಟು ₹18.00 ಕೋಟಿ ವೆಚ್ಚದಲ್ಲಿ ಬೆಳಗಾವಿ ವಿಭಾಗಕ್ಕೆ ₹9.00 ಕೋಟಿ (4,800 ಫಲಾನುಭವಿಗಳು) ಹಾಗೂ ಕಲಬುರಗಿ ವಿಭಾಗಕ್ಕೆ ₹9.00 ಕೋಟಿ (4,800 ಫಲಾನುಭವಿಗಳು) ಸಮಾನವಾಗಿ ಹಂಚಿಕೆ ಮಾಡಲಾಗಿದೆ. ಪ್ರತಿ ಫಲಾನುಭವಿಗೆ ತಲಾ ₹18,750/- ರಂತೆ ಸರ್ಕಾರದ ಸಹಾಯಧನ ದೊರೆಯಲಿದೆ.

೩. ಫಾರ್ಮ್ 7 ಎಫ್‌ಐಆರ್ ತನಿಖೆ
ಸಾಮೂಹಿಕ ಫಾರ್ಮ್ 7 ಸಲ್ಲಿಕೆ ಕುರಿತು ಸಭೆಯಲ್ಲಿ ಚರ್ಚೆ ನಡೆದಿದ್ದು
, ವಿವಿಧ ಪೊಲೀಸ್ ಠಾಣೆಗಳಲ್ಲಿ ದಾಖಲಾದ ಎಫ್‌ಐಆರ್ ತನಿಖೆಗೆ ಯಾವುದೇ ವಿಶೇಷ ತನಿಖಾ ತಂಡ (SIT) ರಚಿಸದಿರಲು ತೀರ್ಮಾನಿಸಲಾಗಿದೆ. ಕಾನೂನಿನ ಪ್ರಕಾರ ರಾಜ್ಯ ಪೊಲೀಸರೇ ಇದರ ತನಿಖೆ ನಡೆಸಿ ಮುಂದಿನ ಕ್ರಮ ಕೈಗೊಳ್ಳಲಿದ್ದಾರೆ.

೪. ಸಂಪುಟದ ಇತರ ಪ್ರಮುಖ ನಿರ್ಧಾರಗಳು:
ಭೂಸ್ವಾಧೀನ ಕೈಬಿಡುವಿಕೆ: ಶಿವಮೊಗ್ಗ ಜಿಲ್ಲೆ ಹಾಗೂ ತಾಲ್ಲೂಕಿನ ಸಿದ್ಧಿಪುರ ಮತ್ತು ದೇವಕಾತಿಕೊಪ್ಪ ಗ್ರಾಮಗಳ 362.21 ಎಕರೆ ಮತ್ತು ಬೆಂಗಳೂರು ದಕ್ಷಿಣ ಜಿಲ್ಲೆಯ ಹಾರೋಹಳ್ಳಿ ತಾಲೂಕಿನ ಚೀಲೂರು ಗ್ರಾಮದ 1-39 ಎಕರೆ ಜಮೀನನ್ನು
KIADB ಭೂಸ್ವಾಧೀನ ಪ್ರಕ್ರಿಯೆಯಿಂದ ಕೈಬಿಡಲು ಒಪ್ಪಿಗೆ ನೀಡಲಾಗಿದೆ.

ರಸ್ತೆ ಅಭಿವೃದ್ಧಿ: ಅಫ್ಜಲಪುರ ತಾಲೂಕಿನಲ್ಲಿ ₹3791.33 ಲಕ್ಷ ವೆಚ್ಚದ ವಿವಿಧ ರಸ್ತೆ ಅಭಿವೃದ್ಧಿ ಕಾಮಗಾರಿಗಳಿಗೆ ಆಡಳಿತಾತ್ಮಕ ಅನುಮೋದನೆ ದೊರೆತಿದೆ.

ಸಾರಿಗೆ ನಿಗಮಕ್ಕೆ ಹೊಸ ಬಸ್‌ಗಳು: ಒಟ್ಟು ₹304 ಕೋಟಿ ಅಂದಾಜು ವೆಚ್ಚದಲ್ಲಿ ಒಟ್ಟು 800 ಹೊಸ ಬಿ.ಎಸ್-VI ಬಸ್‌ಗಳ ಖರೀದಿ (KSRTC ಗೆ 400 Mofussil, NWKRTC ಗೆ 200 Mofussil ಮತ್ತು BMTC ಗೆ 200 City ಬಸ್‌ಗಳು) ಮಾಡಲಾಗುವುದು.

ಗ್ಯಾರಂಟಿ ಸೇವಾ ಕೇಂದ್ರಗಳು: ಗ್ರೇಟರ್ ಬೆಂಗಳೂರು ಪ್ರಾಧಿಕಾರ ಮತ್ತು 5 ನಗರಪಾಲಿಕೆಗಳ ಸೇವೆಗಳನ್ನು ಸಾರ್ವಜನಿಕರಿಗೆ ತಲುಪಿಸಲು ಪಿಪಿಪಿ ಮಾದರಿಯಲ್ಲಿ 5 ಸಂಯೋಜಿತ ಎಂಡ್-ಟು-ಎಂಡ್ ನಾಗರಿಕ ಸೇವಾ ಕೇಂದ್ರಗಳನ್ನು ಸ್ಥಾಪಿಸಲು ಒಪ್ಪಿಗೆ ಸೂಚಿಸಲಾಗಿದೆ.

 

Author
ಸಿ.ಹೆಂಜಾರಪ್ಪ
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಮುಖ್ಯಮಂತ್ರಿಯವರ ತಾಂತ್ರಿಕ ಸಲಹೆಗಾರರಾಗಿ ನಿವೃತ್ತ ಕಾರ್ಯದರ್ಶಿ ಡಾ. ಕೆ. ಜೈಪ್ರಕಾಶ್ ನೇಮಕಜೆಎನ್‌ಯು ಪ್ರೊಫೆಸರ್ ಹಾಗೂ ಕಾಂಗ್ರೆಸ್ ಸಂಸದರಿಂದ ಲೈಂಗಿಕ ಕಿರುಕುಳ ಆರೋಪ, ಸೇವೆಯಿಂದ ವಜಾಆರ್‌ಬಿಐ ಬಿಗ್ ಶಾಕ್: ರೆಪೋ ದರ ಏರಿಕೆಯಿಂದ ಸಾಲಗಾರರಿಗೆ ಹೆಚ್ಚಳವಾದ ಇಎಂಐ ಬರೆ!ಎಸ್‌ಐಆರ್ ರದ್ದುಪಡಿಸುವಂತೆ ಜನತಾ ನ್ಯಾಯಾಲಯ ಸಮಾವೇಶ: ಮುಖ್ಯ ಚುನಾವಣಾ ಆಯುಕ್ತರ ರಾಜೀನಾಮೆಗೆ ಆಗ್ರಹ10 ಸಚಿವರ ವಿರುದ್ಧ ಸ್ಟಿಂಗ್ ಆಪರೇಷನ್ ಸುಪಾರಿ - ಶಾಸಕ ಗಣಿಗ ರವಿ ಸ್ಫೋಟಕ ಪೆನ್‌ಡ್ರೈವ್ ಬಾಂಬ್!ಸಚಿವರಿಗೆ ಬಲೆ ಬೀಳಿಸಲು ಯತ್ನ: ಸಿಎಂ ಎಚ್ಚರಿಕೆ ನೀಡಿದ್ದಾರೆ ಎಂದ ಸತೀಶ್ ಜಾರಕಿಹೊಳಿಕೇಂದ್ರದೊಂದಿಗೆ ಜಿಎಸ್‌ಟಿ ಸಭೆ: ರಾಜ್ಯದ ಬಾಕಿ ಹಣದ ಕುರಿತು 'ಸಿಹಿ ಸುದ್ದಿ' ನೀಡಿದ ಸಿಎಂ ಡಿ.ಕೆ ಶಿವಕುಮಾರ್ ಸುಳಿವು!ಪ್ರಜ್ವಲ್ ರೇವಣ್ಣ ಜೈಲಿನಲ್ಲಿ ಮೊಬೈಲ್ ಪತ್ತೆ ಪ್ರಕರಣ: ಹಿಂಡಲಗಾ ಜೈಲಿಗೆ ಸ್ಥಳಾಂತರಪ್ರತಿಭಟನೆ ಹೆಸರಲ್ಲಿ ಎಲ್ಲವನ್ನೂ ಬಂದ್ ಮಾಡಲು ಆಗದು: ಕೇಂದ್ರ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಸುಪ್ರೀಂ ಕೋರ್ಟ್ದಾವಣಗೆರೆಯಲ್ಲಿ ಹೈಕೋರ್ಟ್ ಸಂಚಾರಿ ಪೀಠ ಸ್ಥಾಪನೆಗೆ ವಕೀಲರ ಪಟ್ಟು: ಮಧ್ಯಕರ್ನಾಟಕದಲ್ಲಿ ತೀವ್ರಗೊಂಡ ಹೋರಾಟ