ಮುಂದಿನ ವಾರ ದ್ವಿತೀಯ ಪಿಯು ಫಲಿತಾಂಶ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕರ್ನಾಟಕ ದ್ವಿತೀಯ ಪಿಯುಸಿ ಪರೀಕ್ಷೆಯ ಮೌಲ್ಯಮಾಪನ ಪ್ರಕ್ರಿಯೆ ಬಹುತೇಕ ಪೂರ್ಣಗೊಂಡಿದ್ದು ಇದೇ ತಿಂಗಳ ಮುಂದಿನ ವಾರ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.
ದ್ವಿತೀಯ ಪಿಯು ಫಲಿತಾಂಶ ಇದೇ ತಿಂಗಳ ಏಪ್ರಿಲ್
11ರ ಒಳಗಾಗಿ ಫಲಿತಾಂಶ ಪ್ರಕಟವಾಗಲಿದೆ ಎಂದು ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಲಿ ಮೂಲಗಳು ತಿಳಿಸಿವೆ.

ದ್ವಿತೀಯ ಪಿಯುಸಿ ಪರೀಕ್ಷೆ ಮಾರ್ಚ್ 1 ರಿಂದ 20 ರ ವರೆಗೆ ನಡೆದಿತ್ತು. ಸದ್ಯ ಮೌಲ್ಯಪಾಪನ ಪ್ರಕ್ರಿಯೆ ಚಾಲ್ತಿಯಲ್ಲಿದೆ. ಕಳೆದ ವರ್ಷ ಸೆಕೆಂಡ್ ಪಿಯು ಫಲಿತಾಂಶವನ್ನು ಏಪ್ರಿಲ್ 10 ರಂದು ಬಿಡುಗಡೆ ಮಾಡಲಾಗಿತ್ತು. ಈ ವರ್ಷವೂ ಸರಿಸುಮಾರು ಅದೇ ಹೊತ್ತಿಗೆ ಫಲಿತಾಂಶ ಪ್ರಕಟವಾಗುವ ನಿರೀಕ್ಷೆ ಇದೆ.

ವೆಬ್ ಸೈಟ್ ನಲ್ಲಿ ಪಿಯು ಫಲಿತಾಂಶ ನೋಡಿ-
ದ್ವಿತೀಯ ಪಿಯು ಫಲಿತಾಂಶ ಘೋಷಣೆಯಾದ ಕೂಡಲೇ ಇಲಾಖೆಯ ಅಧಿಕೃತ ವೆಬ್​​ಸೈಟ್​​ನಲ್ಲಿಯೂ ಅಪ್​ಲೋಡ್ ಮಾಡಲಾಗುತ್ತದೆ.
karresults.nic.in ಅಥವಾ kseab.karnataka.gov.in ವೆಬ್​ಸೈಟ್​​ಗಳಲ್ಲಿ ಫಲಿತಾಂಶ ನೋಡಬಹುದಾಗಿದೆ.

 

Share This Article
error: Content is protected !!
";