ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕೋಲಾರ ಜಿಲ್ಲೆಯ ವೇಮಗಲ್-ಕುರುಗಲ್ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಗೆಲುವು ಸಾಧಿಸಿದ ಪಟ್ಟಣ ಪಂಚಾಯಿತಿಯ ನೂತನ ಸದ್ಯಸರು ಭೇಟಿ ಮಾಡಿ ಪರಸ್ಪರ ಶುಭಾಶಯ ಮಿನಿಮಯ ಮಾಡಿಕೊಂಡರು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ಈ ಗೆಲುವಿಗೆ ಶ್ರಮಿಸಿದ NDA ಪಕ್ಷದ ಮುಖಂಡರು ಹಾಗೂ ಕಾರ್ಯಕರ್ತರಿಗೆ ಮತ್ತೊಮ್ಮೆ ನನ್ನ ಹೃತ್ಪೂರ್ವಕ ಅಭಿನಂದನೆಗಳನ್ನು ನಿಖಿಲ್ ತಿಳಿಸಿದರು.
ಇದೇ ಸಂದರ್ಭದಲ್ಲಿ ಮಾಜಿ ಸಚಿವರಾದ ವರ್ತೂರು ಪ್ರಕಾಶ್, ಮುಖಂಡರಾದ ಸಿ ಎಂ.ಆರ್ ಶ್ರೀನಾಥ್ ಸೇರಿದಂತೆ ನೂತನ ಪಟ್ಟಣ ಪಂಚಾಯಿತಿಯ ಸದಸ್ಯರು, ತಾಲ್ಲೂಕಿನ ಪ್ರಮುಖ ಮುಖಂಡರು ಉಪಸ್ಥಿತರಿದ್ದರು.

