ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಮಂಡ್ಯ ಜಿಲ್ಲೆಯ ಕೆ.ಆರ್. ಪೇಟೆ ತಾಲ್ಲೂಕು ಮೂಡನಹಳ್ಳಿ ಗ್ರಾಮದ ರೈತ ಮಂಜೇಗೌಡ ಅವರು ಭೂಸ್ವಾಧೀನವಾಗಿದ್ದ ಜಮೀನಿಗೆ ಸೂಕ್ತ ಪರಿಹಾರ ಸಿಗದಕ್ಕೆ ಮನನೊಂದು
ಮಂಡ್ಯ ಜಿಲ್ಲಾಧಿಕಾರಿ ಕಛೇರಿ ಎದುರು ಬೆಂಕಿ ಹಚ್ಚಿಕೊಂಡು ಆತ್ಮಹತ್ಯೆಗೆ ಯತ್ನಿಸಿದ್ದರು. ಚಿಕಿತ್ಸೆ ಫಲಕಾರಿಯಾಗದೇ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆಯಲ್ಲಿ ಬುಧವಾರ ಕೊನೆಯುಸಿರೆಳೆದ ಹಿನ್ನೆಲೆಯಲ್ಲಿ
ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರ್ ಸ್ವಾಮಿ ಅವರು ಮತ್ತು ಕೆ.ಆರ್.ಪೇಟೆ ವಿಧಾನಸಭಾ ಕ್ಷೇತ್ರದ ಶಾಸಕರಾದ ಹೆಚ್.ಟಿ. ಮಂಜು ಅವರು ಆಸ್ಪತ್ರೆಗೆ ಭೇಟಿ ನೀಡಿ, ಮೃತ ರೈತನ ಅಂತಿಮ ದರ್ಶನ ಪಡೆದು, ಕುಟುಂಬದ ಸದಸ್ಯರಿಗೆ ಸಾಂತ್ವನ ಹೇಳಿದರು.

