ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಜೆಪಿ ನಗರದ ಜೆಡಿಎಸ್ ಕಚೇರಿಯಲ್ಲಿ ಗ್ರೇಟರ್ ಬೆಂಗಳೂರು ಪ್ರಾಧಿಕಾರ ವ್ಯಾಪ್ತಿಯ ಐದು ನಗರಪಾಲಿಕೆಗಳ ಚುನಾವಣೆಗೆ ಸಂಬಂಧಿಸಿದಂತೆ ಕೋರ್ ಕಮಿಟಿ ಅಧ್ಯಕ್ಷ ಜೆ.ಕೆ.ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಜರುಗಿದ ಸಭೆಯಲ್ಲಿ ಜೆಡಿಎಸ್ ಯುವ ಘಟಕ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಭಾಗವಹಿಸಿ, ಪಕ್ಷ ಸಂಘಟನೆ ಹಾಗೂ ಸಂಘಟನಾತ್ಮಕ ವಿಷಯಗಳ ಕುರಿತು ಚರ್ಚಿಸಿದರು.
ಈ ಸಂದರ್ಭದಲ್ಲಿ ವಿಧಾನ ಪರಿಷತ್ ಸದಸ್ಯ ಶರವಣ, ಮಾಜಿ ವಿಧಾನ ಪರಿಷತ್ ಸದಸ್ಯ ತಿಪ್ಪೇಸ್ವಾಮಿ, ಬೆಂಗಳೂರು ಕೇಂದ್ರ ಜಿಲ್ಲಾಧ್ಯಕ್ಷ ಆರ್.ಪ್ರಕಾಶ್, ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಇ. ಕೃಷ್ಣಪ್ಪ, ಬೆಂಗಳೂರು ಪೂರ್ವ ಜಿಲ್ಲಾಧ್ಯಕ್ಷ ನಟರಾಜ್, ಗಂಗಾಧರ್, ಬೆಂಗಳೂರು ಪಶ್ಚಿಮ ಜಿಲ್ಲಾಧ್ಯಕ್ಷ ತಿಮ್ಮೇಗೌಡ, ಬೆಂಗಳೂರು ದಕ್ಷಿಣ ಜಿಲ್ಲಾಧ್ಯಕ್ಷ ಕೃಷ್ಣ. ಹೆಚ್. ಸಿ ಮತ್ತಿತರರು ಉಪಸ್ಥಿತರಿದ್ದರು.

