ಮಳೆ ಹಾನಿ ಪರಿಹಾರ ನೀಡಲಿ-ನಿಖಿಲ್ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ಮುಂಗಾರು ಮಳೆಯ ಅತಿವೃಷ್ಟಿಯಿಂದ ಲಕ್ಷಾಂತರ ಹೆಕ್ಟರ್‌ಪ್ರದೇಶದಲ್ಲಿ ರೈತರ ಬೆಳೆ ನಷ್ಟವಾಗಿದ್ದು, ನೆರೆಹಾನಿಯಿಂದ ಜನಸಾಮಾನ್ಯರು ಸಹ ಮನೆಗಳನ್ನು ಕಳೆದುಕೊಂಡು ಸಂಕಷ್ಟ ಅನುಭವಿಸುತ್ತಿದ್ದಾರೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆಗ್ರಹ ಮಾಡಿದ್ದಾರೆ.

ರೈತ ವಿರೋಧಿ ಕಾಂಗ್ರೆಸ್‌ಸರ್ಕಾರ ಹಾಗೂ ಜಿಲ್ಲಾ ಉಸ್ತುವಾರಿ ಮಂತ್ರಿಗಳು ನೆರವಿಗೆ ಧಾವಿಸದೆ, ಪರಿಹಾರಗಳನ್ನು ಒದಗಿಸದೆ ನಿರ್ಲಕ್ಷ್ಯವಹಿಸಿದೆ ಎಂದು ನಿಖಿಲ್ ಆರೋಪಿಸಿದ್ದಾರೆ. 

- Advertisement - 

ನೆರೆ ಸಂತ್ರಸ್ತರ ಸಮಸ್ಯೆಗಳನ್ನು ಆಲಿಸಲು ಜನತಾದಳ ಜಾತ್ಯತೀತ ಪಕ್ಷದ ವತಿಯಿಂದ ರಾಜ್ಯ ಪ್ರವಾಸ ಕೈಗೊಳ್ಳಲಾಗಿದ್ದು, ಬೆಳೆ ಹಾನಿ, ಮನೆ ಕುಸಿತ ಪ್ರದೇಶಗಳಿಗೆ ಭೇಟಿ ನೀಡಿ ವಸ್ತು ಸ್ಥಿತಿ ವರದಿಯನ್ನು ರಾಜ್ಯ ಸರ್ಕಾರಕ್ಕೆ ನೀಡಲಿದ್ದೇವೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ತಿಳಿಸಿದರು.

 

- Advertisement - 

 

Share This Article
error: Content is protected !!
";