ಗೃಹ ಸಚಿವ ಅಮಿತ್ ಶಾ ಅವರನ್ನು ಭೇಟಿ ಮಾಡಿದ ನಿಖಿಲ್ ಕುಮಾರಸ್ವಾಮಿ

News Desk

ಚಂದ್ರವಳ್ಳಿ ನ್ಯೂಸ್, ನವದೆಹಲಿ:
ಬಿಜೆಪಿ ವರಿಷ್ಠ ನಾಯಕರೂ, ಕೇಂದ್ರ ಸರ್ಕಾರದ ಗೃಹ ಸಚಿವರೂ ಆಗಿರುವ  ಅಮಿತ್ ಶಾ ಅವರನ್ನು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಸಂಸತ್ ಭವನದಲ್ಲಿ ಸೌಹಾರ್ದಯುತವಾಗಿ ಭೇಟಿ ಮಾಡಿದರು.

 ಈ ಸಂದರ್ಭದಲ್ಲಿ ಸ್ಥಳೀಯ ಸಂಸ್ಥೆಗಳ ಚುನಾವಣೆ ಹಾಗೂ ಕರ್ನಾಟಕದಲ್ಲಿ NDA ಮೈತ್ರಿಕೂಟವನ್ನು ಮತ್ತಷ್ಟು ಬಲವರ್ಧನೆ ಮಾಡುವ ದೃಷ್ಟಿಯಿಂದ ಮಾನ್ಯರು ಕೆಲ ಮಹತ್ವದ ಸಲಹೆ ಸೂಚನೆಗಳನ್ನು ನೀಡಿ ಮಾರ್ಗದರ್ಶನ ನೀಡಿದರು.

ಅವರ ಪ್ರೀತಿ, ವಿಶ್ವಾಸ, ವಾತ್ಸಲ್ಯಕ್ಕೆ ನಾನು ಕೃತಜ್ಞನಾಗಿದ್ದೇನೆ ಎಂದು ನಿಖಿಲ್ ಕುಮಾರಸ್ವಾಮಿ ಟ್ವೀಟ್ ಮಾಡಿ ತಿಳಿಸಿದ್ದಾರೆ.

ಅಮಿತ್ ಶಾ ಅವರ ಸಂಘಟನಾ ಚತುರತೆ, ನಾಯಕತ್ವ ಗುಣಗಳು ನನ್ನನ್ನು ಒಳಗೊಂಡಂತೆ ಅಸಂಖ್ಯಾತ ಯುವಜನರಿಗೆ ಪ್ರೇರಣಾದಾಯಕ ಎಂದು ಇದೇ ಸಂದರ್ಭದಲ್ಲಿ ನಿಖಿಲ್ ಸ್ಮರಿಸಿದ್ದಾರೆ.

 

 

- Advertisement -  - Advertisement - 
Share This Article
error: Content is protected !!
";