ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ 8ನೇ ಮೈಲಿ ರುಕ್ಮಿಣಿನಗರದಲ್ಲಿ ಆಯೋಜಿಸಲಾಗಿದ್ದ ನಗರದೇವತೆ ಶ್ರೀ ಅಣ್ಣಮ್ಮ ದೇವಿಯ 8ನೇ ವರ್ಷದ ಅದ್ದೂರಿ ವಾರ್ಷಿಕೋತ್ಸವದ ಕಾರ್ಯಕ್ರಮದಲ್ಲಿ ಭಾಗಿಯಾಗಿ ತಾಯಿಯ ಆಶೀರ್ವಾದವನ್ನು ನಟ, ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಡೆದಿದ್ದಾರೆ.
ಇದೇ ಸಂದರ್ಭದಲ್ಲಿ ಮಾಜಿ ಶಾಸಕರಾದ ಮಂಜುನಾಥ್, ದಾಸರಹಳ್ಳಿ ವಿಧಾನ ಸಭಾ ಕ್ಷೇತದ ಜೆಡಿಎಸ್ ಅಧ್ಯಕ್ಷ ಮುನಿಸ್ವಾಮಿ, ಮುಖಂಡರುಗಳಾದ ಮುನೇಗೌಡ, ನರಸಿಂಹ ಮೂರ್ತಿ, ಗೋವಿಂದಯ್ಯ, ಭರತ್, ಗುಂಡಪ್ಪ, ಆನಂದಪ್ಪ ಸೇರಿದಂತೆ ಪ್ರಮುಖ ಮುಖಂಡರು ಜತೆಯಲ್ಲಿದ್ದರು.