ದೇವಾಲಯ ಲೋಕಾರ್ಪಣೆಯಲ್ಲಿ ನಿಖಿಲ್ ಕುಮಾರಸ್ವಾಮಿ ಭಾಗಿ
ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ತುಮಕೂರು ಜಿಲ್ಲೆಯ ಗುಬ್ಬಿ ತಾಲ್ಲೂಕಿನ ಬೆಲವತ್ತ ಗ್ರಾಮದಲ್ಲಿ ಶ್ರೀ ಭದ್ರಕಾಳಮ್ಮ ಶ್ರೀ ವೀರಭದ್ರೇಶ್ವರ ಸ್ವಾಮಿ ಮತ್ತು ಬಿಸಿಲು ಮಾರಮ್ಮದೇವಿಯ ನೂತನ ದೇವಾಲಯದ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡು ತಾಯಿಯ ಆಶೀರ್ವಾದ ಪಡೆದು ನಾಡಿನ ಕಲ್ಯಾಣಕ್ಕಾಗಿ ಪ್ರಾರ್ಥಿಸಿದರು.
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಪರಮಪೂಜ್ಯ ಶ್ರೀ ಡಾ. ನಿಶ್ಚಲಾನಂದನಾಥ ಸ್ವಾಮೀಜಿ ಅವರ ದಿವ್ಯ ಸಾನಿಧ್ಯ ಹಾಗೂ ಆಶೀರ್ವಚನ ನೀಡಿದರು.
ಇದೇ ಸಂದರ್ಭದಲ್ಲಿ ಮುಖಂಡರಾದ ಬಿ.ಎಸ್ ನಾಗರಾಜು, ಬೆಟ್ಟಸ್ವಾಮಿ, ಜಿಲ್ಲಾಧ್ಯಕ್ಷ ಅಂಜಿನಪ್ಪ, ಮಾಜಿ ಎಪಿಎಂಸಿ ಅಧ್ಯಕ್ಷ ಲೊಕೇಶ್ ಅವರು ಸೇರಿದಂತೆ ಶ್ರೀ ವೀರಭದ್ರೇಶ್ವರ ಸ್ವಾಮಿ ಸೇವಾ ಟ್ರಸ್ಟ್ ಸಮಿತಿಯ ಪದಾಧಿಕಾರಿಗಳು ಸೇರಿದಂತೆ ಅನೇಕ ಭಕ್ತಾದಿಗಳು ಉಪಸ್ಥಿತರಿದ್ದರು.

