ಜೆಡಿಎಸ್ ಕಚೇರಿಯಲ್ಲಿ ಸರ್ವೋದಯ ದಿನಾಚರಣೆ-ನಿಖಿಲ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಜೆಡಿಎಸ್ ಪಕ್ಷದ ರಾಜ್ಯ ಕಛೇರಿ ಜೆ.ಪಿ. ಭವನದಲ್ಲಿ ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಹುತಾತ್ಮರಾದ ದಿನದ ಅಂಗವಾಗಿ ಪಕ್ಷದ ವತಿಯಿಂದ ಹಮ್ಮಿಕೊಂಡ “ಸರ್ವೋದಯ ದಿನಾಚರಣೆ ” ಕಾರ್ಯಕ್ರಮದಲ್ಲಿ ಪಾಲ್ಗೊಂಡು, ರಾಷ್ಟ್ರಪಿತ ಮಹಾತ್ಮ ಗಾಂಧಿಜೀ ಅವರ ಭಾವಚಿತ್ರಕ್ಕೆ ಪುಷ್ಪನಮನ ಸಲ್ಲಿಸಲಾಯಿತು ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.

ಸರ್ವೋದಯ ಎಂಬುದು ಗಾಂಧೀಜಿಯವರಿಂದ ಪ್ರೇರಿತವಾದ “ಎಲ್ಲರ ಪ್ರಗತಿ” ಎಂಬ ಅರ್ಥವನ್ನು ಹೊಂದಿರುವ ಪರಿಕಲ್ಪನೆಯಾಗಿದೆ. ಈ ನಿಟ್ಟಿನಲ್ಲಿ ಜಾತ್ಯತೀತ ಮತ್ತು ಸಾಮಾಜಿಕ ನ್ಯಾಯದ ಸಿದ್ಧಾಂತಗಳ ಭಾಗವಾಗಿ ನಮ್ಮ ಪಕ್ಷದ ವತಿಯಿಂದ ಗಾಂಧಿಜೀ ಅವರ ತತ್ವ ಹಾಗೂ ಮಾರ್ಗದರ್ಶನವನ್ನು ನಾವೆಲ್ಲರೂ ಪಾಲಿಸೋಣ ಎಂಬ ಸಂಕಲ್ಪ‌‌ಮಾಡಲಾಯಿತು ಎಂದು ನಿಖಿಲ್ ತಿಳಿಸಿದರು.

- Advertisement - 

ಈ ಕಾರ್ಯಕ್ರಮದಲ್ಲಿ ಮಾಜಿ ಸಚಿವೆ ಲೀಲಾದೇವಿ ಆರ್ ಪ್ರಸಾದ್, ಮಾಜಿ ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಚೌಡರೆಡ್ಡಿ, ಬೆಂಗಳೂರು ನಗರ ಅಧ್ಯಕ್ಷ ರಮೇಶ್ ಗೌಡ ಅವರು ಸೇರಿದಂತೆ ಮುಖಂಡರು ಉಪಸ್ಥಿತರಿದ್ದರು.

 

- Advertisement - 

 

Share This Article
error: Content is protected !!
";