ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬೆಂಗಳೂರಿನ ಖಾಸಗಿ ಹೋಟೆಲ್ ನಲ್ಲಿ ಜೆಡಿಎಸ್ ಪಕ್ಷದ ಕೋರ್‌ಕಮಿಟಿ ಅಧ್ಯಕ್ಷ ಜೆ.ಕೆ. ಕೃಷ್ಣಾರೆಡ್ಡಿ ಅವರ ನೇತೃತ್ವದಲ್ಲಿ ಬುಧವಾರ ಜರುಗಿದ ಕೋರ್ ಕಮಿಟಿ ಸಭೆಯಲ್ಲಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಪಾಲ್ಗೊಂಡಿದ್ದರು.
ಸಭೆಯಲ್ಲಿ ಅವರು ಮಾತನಾಡಿ ಪಕ್ಷ ಸಂಘಟನೆ, ಸದಸ್ಯತ್ವ ಅಭಿಯಾನ ಸೇರಿ ಇನ್ನಿತರ ಹಲವು ಪ್ರಮುಖ ವಿಷಯಗಳ ಬಗ್ಗೆ ಸಮಗ್ರವಾಗಿ ಚರ್ಚಿಸಿದರಲ್ಲದೆ ಅನುಷ್ಠಾನ ಮಾಡಲು ಎಲ್ಲರೂ ಬದ್ಧವಾಗಿರಬೇಕೆಂದು ಕರೆ ನೀಡಿದರು. ಪ್ರಮುಖವಾಗಿ ಕೋರ್ ಕಮಿಟಿ ಸದಸ್ಯರು ರಾಜ್ಯದಾದ್ಯಂತ ಪ್ರವಾಸ ಮಾಡಿ ಪಕ್ಷ ಸಂಘಟನೆಗೆ ಒತ್ತು ನೀಡಬೇಕು.
ಗ್ರೇಟರ್ ಬೆಂಗಳೂರು ಪ್ರಾಧಿಕಾರದ ವತಿಯಿಂದ ಐದು ನಗರ ಪಾಲಿಕೆಗಳ ಚುನಾವಣೆ, ರಾಜ್ಯದಾದ್ಯಂತ ಪಕ್ಷ ಸಂಘಟನೆ, ಸ್ಥಳೀಯ ಸಂಸ್ಥೆಗಳ ಚುನಾವಣೆಗೆ ಪೂರ್ವ ಸಿದ್ಧತೆ ಹಾಗೂ ಪಕ್ಷದ ಬಲವರ್ಧನೆ ಕುರಿತು ಸಭೆಯಲ್ಲಿ ಸುದೀರ್ಘವಾಗಿ ಚರ್ಚಿಸಲಾಯಿತು ಎಂದು ನಿಖಿಲ್ ತಿಳಿಸಿದರು.
ಈ ಸಂದರ್ಭದಲ್ಲಿ ಶಾಸಕರು, ಮಾಜಿ ಶಾಸಕರು, ವಿಧಾನಪರಿಷತ್ ಸದಸ್ಯರು, ಕೋರ್ ಕಮಿಟಿ ಸದಸ್ಯರು ಉಪಸ್ಥಿತರಿದ್ದರು.

