ಡ್ರಗ್ಸ್ ದಂಧೆಕೋರರ ಬೆಂಬಲಕ್ಕೆ ನಿಂತ ರಾಜ್ಯ ಸರ್ಕಾರ-ನಿಖಿಲ್

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಾಜ್ಯದಲ್ಲಿ ನಡೆಯಿತ್ತಿರುವ ಡ್ರಗ್ಸ್ ದಂಧೆಗೆ ರಾಜ್ಯ ಕಾಂಗ್ರೆಸ್ ಸರ್ಕಾರ ಡ್ರಗ್ಸ್ ದಂಧೆಕೋರರನ್ನ ಬೆಂಬಲಿಸುತ್ತಿದೆ ಎಂದು ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಆರೋಪಿಸಿದರು.

ಕಳೆದ ಜುಲೈನಲ್ಲಿ ಮೈಸೂರಿನಲ್ಲಿ ಡ್ರಗ್ಸ್‌ತಯಾರಿಕಾ ಘಟಕ ಪತ್ತೆ ಹಚ್ಚಿ, ಸುಮಾರು 390 ಕೋಟಿ ರೂ. ಮೌಲ್ಯದ 192 ಕೆ.ಜಿ. ಮೆಫೆಡ್ರೋನ್ ಡ್ರಗ್ಸ್ ವಶಪಡಿಸಿಕೊಂಡಿದ್ದ ಮಹಾರಾಷ್ಟ್ರ ಪೊಲೀಸರು ಬೆಂಗಳೂರಿನ 3 ಡ್ರಗ್ಸ್‌ಫ್ಯಾಕ್ಟರಿ ಮೇಲೆ ನಡೆಸಿ 56 ಕೋಟಿ ರು. ಮೌಲ್ಯದ ಡ್ರಗ್ಸ್‌ವಶಪಡಿಸಿಕೊಂಡಿದ್ದಾರೆ.

- Advertisement - 

ರಾಜ್ಯದಲ್ಲಿ ಎಗ್ಗಿಲ್ಲದೆ ನಡೆಯುತ್ತಿರುವ ಡ್ರಗ್ಸ್ ದಂಧೆಗೆ ಕಡಿವಾಣ ಹಾಕುವಲ್ಲಿ ಕರ್ನಾಟಕ ಪೊಲೀಸ್ ಇಲಾಖೆ ಸಂಪೂರ್ಣ ವಿಫಲವಾಗಿದೆ. ಈ  ದಂಧೆಕೋರರನ್ನು ಪತ್ತೆ ಹಚ್ಚಲು ಮಹಾರಾಷ್ಟ ಪೊಲೀಸರು ಬರಬೇಕಾದರೆಕರ್ನಾಟಕದ ಪೊಲೀಸ್ ಇಲಾಖೆ ಏನು ಮಾಡುತ್ತಿದೆ? ಎಂದು ಅವರು ತೀಕ್ಷ್ಣವಾಗಿ ಪ್ರಶ್ನಿಸಿದರು.

ರಾಜ್ಯ ಗೃಹ ಇಲಾಖೆ ಸಿಎಂ ಮತ್ತು ಡಿಸಿಎಂ ಭೋಜನ ಕೂಟಕ್ಕೆ ಮಾತ್ರ ಸೀಮಿತವಾಗಿದಿಯೇ? ಸರ್ಕಾರ ಈ ಕೂಡಲೇ ಯುವ ಜನಾಂಗಕ್ಕೆ ಮಾರಕವಾಗಿರುವ ಈ ಡ್ರಗ್ಸ್  ಮಾಫಿಯವನ್ನು ಗಂಭೀರವಾಗಿ ಪರಿಗಣಿಸಿ ಕಡಿವಾಣ ಹಾಕಬೇಕು. ಇಲ್ಲದಿದ್ದರೆ  ಸರ್ಕಾರದ ವಿರುದ್ಧ ಉಗ್ರ ಹೋರಾಟ ನಡೆಸಬೇಕಾಗುತ್ತದೆ ಎಂದು ಕರ್ನಾಟಕ ಕಾಂಗ್ರೆಸ್ ಸರ್ಕಾರಕ್ಕೆ ನಿಖಿಲ್ ಕುಮಾರಸ್ವಾಮಿ ಎಚ್ಚರಿಕೆ ನೀಡಿದರು.

- Advertisement - 

 

Share This Article
error: Content is protected !!
";