ಚಂದ್ರವಳ್ಳಿ ನ್ಯೂಸ್, ಹರಿಹರ:
ದಾವಣಗೆರೆ ಜಿಲ್ಲೆಯ ಹರಿಹರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಭಾಗೀರಥಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜನತಾದಳ-ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಹರಿಹರ ವಿಧಾನಸಭಾ ಕ್ಷೇತ್ರದ ಮಾಜಿ ಶಾಸಕರಾದ ಹೆಚ್. ಎಸ್. ಶಿವಶಂಕರ್, ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿ, ಕಾರ್ಯಕರ್ತರ ಸಭೆ ಉದ್ದೇಶಿಸಿ ಮಾತನಾಡಿದರು.
ಜೆಡಿಎಸ್ ಪಕ್ಷವನ್ನು ಹರಿಹರ ಮತ ಕ್ಷೇತ್ರದಲ್ಲಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಮುಖಂಡರಿಗೆ ಹಾಗೂ ಕಾರ್ಯಕರ್ತ ಬಂಧುಗಳಿಗೆ ನಿಖಿಲ್ ಮನವಿ ಮಾಡಿದರು.
ಇದೇ ವೇಳೆ ಕಳೆದ ಎರಡು ವರ್ಷಗಳಲ್ಲಿ ಕಾಂಗ್ರೆಸ್ ಸರ್ಕಾರದ ಸಾಧನೆ ಶೂನ್ಯ, ರೈತರಿಗೆ ರಸಗೊಬ್ಬರ ವಿತರಣೆಯಲ್ಲಿ ಮಾಡಿದ ಅನ್ಯಾಯ, ಅಭಿವೃದ್ಧಿ ಕಾಮಗಾರಿ ಹಣ ನೀಡದೆ ಬರಿ ಘೋಷಣೆಗಳಿಗೆ ಸೀಮಿತವಾದ ಸರ್ಕಾರದ ನೀತಿ ಸೇರಿದಂತೆ ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡದ ಜನರಿಗೆ ಮಾಡಿದ ಅನ್ಯಾಯ ಹೀಗೆ ಹತ್ತು ಹಲವು ವಿಷಯಗಳ ಕುರಿತು ಕಾರ್ಯಕರ್ತ ಬಂಧುಗಳಿಗೆ ನಿಖಿಲ್ ಕುಮಾರಸ್ವಾಮಿ ತಿಳಿಸಿದರು.
ತಮ್ಮ ಅಭಿಮಾನ ಫಲಿತಾಂಶವಾಗಿ ಬದಲಾಗಬೇಕಾದರೆ ತಾವೆಲ್ಲರೂ ಛಲದಿಂದ ಪಕ್ಷವನ್ನು ಸಂಘಟಿಸುವ ಮೂಲಕ ಜೆಡಿಎಸ್ ಪಕ್ಷವನ್ನು 2028ಕ್ಕೆ ಅಧಿಕಾರಕ್ಕೆ ತರಲು ಹಗಲಿರುಳು ಶ್ರಮಿಸುವಂತೆ ಕಾರ್ಯಕರ್ತರಿಗೆ, ಮುಖಂಡರಿಗೆ ನಿಖಿಲ್ ಅವರು ಮನವಿ ಮಾಡಿದರು.
ಇದೇ ಸಂದರ್ಭದಲ್ಲಿ ದಾವಣಗೆರೆ ಜಿಲ್ಲೆಯ ಹರಿಹರ ಕ್ಷೇತ್ರದಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆಜನತಾದಳ ಸದಸ್ಯತ್ವ ನೋಂದಣಿ ಅಭಿಯಾನಕ್ಕೂ ಮುನ್ನ ದಾವಣಗೆರೆಯ ಪಿ.ಜಿ ಬಡಾವಣೆಯಲ್ಲಿರುವ ಶ್ರೀ ರಾಘವೇಂದ್ರ ಸ್ವಾಮಿಗಳ ಮಠಕ್ಕೆ ಭೇಟಿ ನೀಡಿ, ಗುರು ರಾಯರ ಆಶೀರ್ವಾದ ಪಡೆದರು.
ನಂತರ ಹರಿಹರ ಪಟ್ಟಣಕ್ಕೆ ಆಗಮಿಸಿದ ವೇಳೆ ಅಭಿಮಾನಿಗಳು, ಪಕ್ಷದ ಮುಖಂಡರು, ಕಾರ್ಯಕರ್ತರು ಹಾಗೂ ಸಾರ್ವಜನಿಕರು ಆತ್ಮೀಯವಾಗಿ ನಿಖಿಲ್ ಕುಮಾರಸ್ವಾಮಿ ಅವರಿಗೆ ಸ್ವಾಗತ ಕೋರಿದರು.

ಈ ಸಂದರ್ಭದಲ್ಲಿ ಮಾಜಿ ಸಚಿವ ವೆಂಕಟರಾವ್ ನಾಡಗೌಡ, ಮಾಜಿ ಶಾಸಕರಾದ ತಿಮ್ಮರಾಯಪ್ಪ, ರಾಜಾ ವೆಂಕಟಪ್ಪ ನಾಯಕ್, ಮಾಜಿ ವಿಧಾನಪರಿಷತ್ ಸದಸ್ಯ ಆರ್. ಚೌಡರೆಡ್ಡಿ, ಜಿಲ್ಲಾಧ್ಯಕ್ಷ ಬಿ. ಚಿದಾನಂದ, ಮಹಿಳಾ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ, ಮುಖಂಡರಾದ ಡಿ. ಯಶೋಧರ್, ಆರ್.ಸಿ. ಅಂಜನಪ್ಪ, ಪರಮೇಶ್ವರ ಗೌಡ, ವೀರೇಂದ್ರ ಗೌಡ, ಪೂರ್ಣಿಮಾ ಗೌಡ, ಕವಿತಾ ಮಾರುತಿ ಅವರು ಸೇರಿದಂತೆ ಪಕ್ಷದ ಪದಾಧಿಕಾರಿಗಳು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.

