ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಯಾದಗಿರಿ ಜಿಲ್ಲೆಯ ಸಪ್ತಪದಿ ಕನ್ವೆನ್ಷನ್ ಹಾಲ್ ನಲ್ಲಿ ಹಮ್ಮಿಕೊಂಡಿದ್ದ ಜನರೊಂದಿಗೆ ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನದ ಕಾರ್ಯಕ್ರಮವನ್ನು ಪಕ್ಷದ ಮುಖಂಡರು ಹಾಗೂ ಹಿರಿಯ ಕಾರ್ಯಕರ್ತರೊಂದಿಗೆ ಉದ್ಘಾಟಿಸಿ ಸಭೆಯನ್ನ ಉದ್ದೇಶಿಸಿ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಮಾತನಾಡಿದರು.
ಜೆಡಿಎಸ್ ಪಕ್ಷವನ್ನು ಯಾದಗಿರಿ ಜಿಲ್ಲೆಯಲ್ಲಿ ಬಲಿಷ್ಠವಾಗಿ ಕಟ್ಟುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ 9964002028 ಸಂಖ್ಯೆಗೆ ಮಿಸ್ಡ್ ಕಾಲ್ ಕೊಡಿಸುವ ಮೂಲಕ ಸದಸ್ಯತ್ವ ನೋಂದಣಿಯನ್ನು ಯಶಸ್ವಿಗೊಳಿಸಲು ಮನವಿ ಮಾಡಲಾಯಿತು.
ಮಾಜಿ ಪ್ರಧಾನಮಂತ್ರಿ ಹೆಚ್.ಡಿ. ದೇವೇಗೌಡ ಅವರ ಹಾಗೂ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಅವರ ಸಾಧನೆಗಳ ಕುರಿತು ಮೆಲಕು ಹಾಕಿ, ರಾಜ್ಯ ಕಾಂಗ್ರೆಸ್ ಸರ್ಕಾರದ ದುರಾಡಳಿತವನ್ನು ಖಂಡಿಸಲಾಯಿತು.
2028ಕ್ಕೆ ಮತ್ತೊಮ್ಮೆ ಕುಮಾರಸ್ವಾಮಿ ಅವರನ್ನು ಮುಖ್ಯಮಂತ್ರಿಗಳನ್ನಾಗಿ ಆಯ್ಕೆ ಮಾಡಲು ನಾವೆಲ್ಲರೂ ಶ್ರಮಿಸೋಣ ಎಂದು ತಿಳಿಸಲಾಯಿತು.
ಈ ಸಂದರ್ಭದಲ್ಲಿ ಪಕ್ಷದ ರಾಜ್ಯ ಪ್ರಧಾನ ಕಾರ್ಯದರ್ಶಿ, ಮಾಜಿ ಸಚಿವ ವೆಂಟರಾವ್ ನಾಡಗೌಡ, ಶಾಸಕ ಶರಣಗೌಡ್ ಕಂದಕೂರ, ಮಾಜಿ ಶಾಸಕರಾದ ದೊಡ್ಡಪ್ಪಗೌಡ ಪಾಟೀಲ್ ನರಿಬೋಳ್, ರಾಜಾ ವೆಂಕಟಪ್ಪ ನಾಯಕ್, ಮಹಿಳಾ ಘಟಕದ ರಾಜ್ಯಾಧ್ಯಕ್ಷೆ ರಶ್ಮಿ ರಾಮೇಗೌಡ,
ಯಾದಗಿರಿ ಜಿಲ್ಲಾಧ್ಯಕ್ಷ ಸುಭಾಷ್ ಕಟಕಟಿ, ಕಲಬುರಗಿ ಜಿಲ್ಲಾಧ್ಯಕ್ಷ ಬಾಲರಾಜ್ ಗುತ್ತೇದಾರ್, ಮುಖಂಡರಾದ ಗುರು ಪಾಟೀಲ್, ಚೆನ್ನಪ್ಪಗೌಡ, ಎಸ್.ವಿ. ಪಾಟೀಲ್, ನಾಗರತ್ನ ಮೂರ್ತಿ, ಅನಸವುದ್ದಿನ್, ಬಂಡಪ್ಪ ಅರಳಿ, ರಾಮಣ್ಣ , ಜಯಶ್ರೀ ರೆಡ್ಡಿ ಸೇರಿದಂತೆ ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತ ಬಂಧುಗಳು ಉಪಸ್ಥಿತರಿದ್ದರು.