2028ಕ್ಕೆ ಜೆಡಿಎಸ್ ಪಕ್ಷ ಅಧಿಕಾರಕ್ಕೆ ತರಲು ಪಣ ತೊಡಿ-ನಿಖಿಲ್

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ತುಮಕೂರು ಜಿಲ್ಲೆಯ ಮಧುಗಿರಿ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಒಕ್ಕಲಿಗರ ಸಂಘದ ಸಮುದಾಯ ಭವನದಲ್ಲಿ ಹಮ್ಮಿಕೊಂಡಿದ್ದ “ಜನರೊಂದಿಗೆ ಜನತಾದಳ” ಜೆಡಿಎಸ್ ಪಕ್ಷದ ಸದಸ್ಯತ್ವ ನೋಂದಣಿ ಅಭಿಯಾನ ಕಾರ್ಯಕ್ರಮವನ್ನು ಮುಖಂಡರು ಹಾಗೂ ಕಾರ್ಯಕರ್ತರೊಂದಿಗೆ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಉದ್ಘಾಟಿಸಿ, ಕಾರ್ಯಕರ್ತ ಬಂಧುಗಳನ್ನು ಉದ್ದೇಶಿಸಿ ಮಾತನಾಡಿದರು.

- Advertisement - 

ಮಧುಗಿರಿ ವಿಧಾನಸಭಾ ಕ್ಷೇತ್ರದಲ್ಲಿ ಪಕ್ಷವನ್ನು ಬಲಿಷ್ಠವಾಗಿ ಸಂಘಟಿಸುವ ನಿಟ್ಟಿನಲ್ಲಿ ಬೂತ್ ಮಟ್ಟದಲ್ಲಿ ಸದಸ್ಯತ್ವ ನೋಂದಣಿ ಮಾಡಿಸುವಂತೆ ಅವರು ಕರೆ ನೀಡಿದರು.

- Advertisement - 

 ನಿಖಿಲ್ ಅವರ ಮನವಿಗೆ ಸ್ಪಂದಿಸಿದ ಕಾರ್ಯಕರ್ತ ಬಂಧುಗಳು, ಮುಖಂಡರು ಬೂತ್ ಮಟ್ಟದಲ್ಲಿ ತಂಡಗಳನ್ನು ರಚಿಸಿಕೊಂಡು ಪಕ್ಷ ಸಂಘಟಿಸುವ ಭರವಸೆ ನೀಡಿದರು. ನಾವೆಲ್ಲರೂ ಜೊತೆಯಾಗಿ ಹೆಜ್ಜೆ ಹಾಕುವ ಮೂಲಕ 2028 ಕ್ಕೆ ಪಕ್ಷವನ್ನು ಅಧಿಕಾರಕ್ಕೆ ತರೋಣ ಎಂಬ ಸಂಕಲ್ಪವನ್ನು ಇದೇ ಸಂದರ್ಭದಲ್ಲಿ ಮಾಡಲಾಯಿತು.

ಈ ಸಂದರ್ಭದಲ್ಲಿ ಹಿರಿಯರು ಹಾಗೂ ಮಾಜಿ ವಿಧಾನಪರಿಷತ್ ಸದಸ್ಯರಾದ ತಿಪ್ಪೇಸ್ವಾಮಿ, ಮಾಜಿ ಶಾಸಕರಾದ ವೀರಭದ್ರಪ್ಪ, ತಿಮ್ಮರಾಯಪ್ಪ, ಜೆಡಿಎಸ್ ಜಿಲ್ಲಾಧ್ಯಕ್ಷ ಆರ್.ಸಿ ಆಂಜಿನಪ್ಪ, ತಾಲ್ಲೂಕು ಅಧ್ಯಕ್ಷ ಬಸವರಾಜ್, ಮುಖಂಡರಾದ ಗೋವಿಂದರಾಜ್, ಕೊಂಡವಾಡಿ ಚಂದ್ರಶೇಖರ್, ಗಂಗರಾಜು, ಸಿದ್ದಗಂಗಮ್ಮ ಸೇರಿದಂತೆ ಪ್ರಮುಖ ಮುಖಂಡರು ಹಾಗೂ ಪಧಾದಿಕಾರಿಗಳು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

- Advertisement - 

 

Share This Article
error: Content is protected !!
";