ಹರಿಯಬ್ಬೆ ಗ್ರಾಮಕ್ಕೆ ಆಗಸ್ಟ್-3 ರಂದು ನಿಖಿಲ್ ಆಗಮನ, ಬೃಹತ್ ಸಭೆ ಏರ್ಪಾಡು

News Desk

ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ಜನರೊಂದಿಗೆ ಜೆಡಿಎಸ್ ಹಾಗೂ ಸದಸ್ಯತ್ವ ಅಭಿಯಾನಕ್ಕೆ ಆಗಸ್ಟ್ 3 ರಂದು ಚಾಲನೆ ನೀಡಲು ರಾಜ್ಯ ಯುವ ಜೆಡಿಎಸ್ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ತಾಲೂಕಿನ ಹರಿಯಬ್ಬೆ ಗ್ರಾಮಕ್ಕೆ ಆಗಮಿಸುತ್ತಿದ್ದು
, ಪಕ್ಷದ ಕಾರ್ಯಕರ್ತರು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಯಶಸ್ವಿಗೊಳಿಸಬೇಕೆಂದು ಜೆಡಿಎಸ್ ಜಿಲ್ಲಾಧ್ಯಕ್ಷ ಎಂ.ಜಯಣ್ಣ ಮನವಿ ಮಾಡಿದರು.

ನಗರದ ಪ್ರವಾಸಿ ಮಂದಿರದಲ್ಲಿ ಭಾನುವಾರ ಆಯೋಜಿಸಿದ್ದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು ರಾಜ್ಯದಲ್ಲಿ ಆಡಳಿತ ನಡೆಸುತ್ತಿರುವ ಕಾಂಗ್ರೆಸ್ ಸರ್ಕಾರದ ಅವ್ಯವಹಾರ, ಭ್ರಷ್ಟಾಚಾರ ವಿರುದ್ದ ಹಾಗೂ ಜನತೆಗೆ ಜಾಗೃತಿ ಮೂಡಿಸುವ ಉದ್ದೇಶ ಮತ್ತು ಸದಸ್ಯತ್ವ ಅಭಿಯಾನ ಕಾರ್ಯಕ್ರಮ ನಡೆಸಲು ಪಕ್ಷದ ಹಲವು ಹಿರಿಯ ಮುಖಂಡರು ಹಾಗೂ ಯುವ ನಾಯಕರು ಭಾಗವಹಿಸಲಿದ್ದಾರೆ ಎಂದು ತಿಳಿಸಿದರು.

- Advertisement - 

ಹಿರಿಯೂರು ವಿಧಾನಸಭಾ ಪರಾಜಿತ ಅಭ್ಯರ್ಥಿ ಎಂ.ರವೀಂದ್ರಪ್ಪ ಮಾತನಾಡಿ ಜೆಡಿಎಸ್ ಪಕ್ಷದ ಭರವಸೆ ನಾಯಕ ನಿಖಿಲ್ ಅವರು ರಾಜ್ಯದ ಎಲ್ಲಾ ಭಾಗಗಳಿಗೂ ಸಂಚರಿಸುತ್ತಾ ಸದೃಢ ಪಕ್ಷ ಕಟ್ಟಲು ಶ್ರಮಿಸುತ್ತಾ ಜನತೆಯ ಸಮಸ್ಯೆಗಳನ್ನು ಆಲಿಸುತ್ತಿದ್ದಾರೆ. ಜನವಿರೋಧಿ ಕಾಂಗ್ರೆಸ್ ಸರ್ಕಾರದ ಬಿಟ್ಟಿ ಭಾಗ್ಯಗಳ ಮೂಲಕ ಜನತೆಗೆ ವಂಚಿಸುತ್ತಿರುವುದನ್ನು ಮನೆ ಮನೆಗೆ ಮುಟ್ಟಿಸುವ ಮೂಲಕ ಕಾರ್ಯಕರ್ತರಿಗೆ ಶಕ್ತಿ ತುಂಬುತ್ತಿದ್ದಾರೆ ಎಂದು ತಿಳಿಸಿದರು.

ಜೆಡಿಎಸ್ ಮಾಜಿ ಜಿಲ್ಲಾಧ್ಯಕ್ಷ ಡಿ.ಯಶೋಧರ್ ಮಾತನಾಡಿ ರೈತರ ಜೀವನಾಡಿ ಜೆಡಿಎಸ್ ಪಕ್ಷ ಹಾಗೂ ಗ್ರಾಮೀಣ ಭಾಗದಲ್ಲಿ ಸಾಕಷ್ಟು ಬಲಿಷ್ಠವಾಗಿರುವ ಜೆಡಿಎಸ್ ಪಕ್ಷವನ್ನು ಗ್ರಾಮೀಣ ಭಾಗದಿಂದಲೇ ಸಂಘಟಿಸಬೇಕೆಂದು ತಾಲೂಕಿನ ಹರಿಯಬ್ಬೆ ಗ್ರಾಮದಿಂದ ಪಕ್ಷದ ಸದಸ್ಯತ್ವಕ್ಕೆ ವಿದ್ಯುಕ್ತವಾಗಿ ಚಾಲನೆ ನೀಡಲಿದ್ದಾರೆ.

- Advertisement - 

ಅಲ್ಲದೇ ಸತತ ಸೋಲಿನಿಂದ ಕಂಗೆಟ್ಟಿರುವ ಕಾರ್ಯಕರ್ತರಿಗೆ ಆತ್ಮಸ್ಥೈರ್ಯ ತುಂಬುವ ಹಾಗೂ ತಾರ್ಕಿಕ ತಳಹದಿ ಮೇಲೆ ಪಕ್ಷ ಸಂಘಟಿಸಲು ಕಾರ್ಯಕ್ರಮ ಆಯೋಜಿಸಲಾಗಿದ್ದು ಇದು ಮಹತ್ವದ್ದಾಗಿದೆ ಎಂದರು.

ತಾಲೂಕು ಅಧ್ಯಕ್ಷ ಹನುಮಂತರಾಯಪ್ಪ ಮಾತನಾಡಿ ಸುಮಾರು ೫೮ ದಿನಗಳ ಕಾಲ ನೂರಕ್ಕೂ ಅಧಿಕ ಕ್ಷೇತ್ರದಲ್ಲಿ ಸಂಚರಿಸುತ್ತಾ ಪಕ್ಷ ಸಂಘಟನೆಗೆ ಹೊರಟಿರುವ ಯುವ ನಾಯಕ ನಿಖಿಲ್ ಅವರು ಈಗಾಗಲೇ ೫೦ ಕ್ಷೇತ್ರಗಳಿಗೆ ಭೇಟಿ ನೀಡಿದ್ದಾರೆ.

ಆ.೩ ರಂದು ಬೆಳಿಗ್ಗೆ ೧೧ ಗಂಟೆಗೆ ತಾಲೂಕಿನ ಹರಿಯಬ್ಬೆ ಗ್ರಾಮದ ಶಾಲಾವರಣದಲ್ಲಿ ಕಾರ್ಯಕರ್ತರ ಬೃಹತ್ ಸಭೆ ನಡೆಯಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು, ಮುಖಂಡರು ಹಾಗೂ ನಾಯಕರು ಭಾಗವಹಿಸುವಂತೆ ತಿಳಿಸಿದರು.

ಈ ಸಂದರ್ಭದಲ್ಲಿ ಮುಖಂಡರಾದ ಮಂಜಣ್ಣ, ಚಿದಾನಂದಪ್ಪ, ಶಿವಕುಮಾರ್, ತಿಪ್ಪೇಸ್ವಾಮಿ, ತಿಮ್ಮಣ್ಣ, ರಮೇಶ್ ಇತರರಿದ್ದರು.

 

Share This Article
error: Content is protected !!
";