ರಾಷ್ಟ್ರೀಯ ಅಧ್ಯಕ್ಷರಾಗಿ ನಿತಿನ್ ನಬಿನ್ ಅಧಿಕಾರ, ಎನ್ ಡಿಎಗೆ ಮತ್ತಷ್ಟು ಬಲ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಬಿಜೆಪಿ ರಾಷ್ಟ್ರೀಯ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಂಡ ನಿತಿನ್ ನಬಿನ್  ಅವರಿಗೆ ಕೇಂದ್ರ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವ ಹೆಚ್.ಡಿ ಕುಮಾರಸ್ವಾಮಿ ಅವರು ಹೃತ್ಪೂರ್ವಕ ಅಭಿನಂದನೆಗಳನ್ನು ತಿಳಿಸಿದ್ದಾರೆ.

ಅವರ ಸಂಘಟನಾ ಚಾತುರ್ಯ, ರಾಜಕೀಯ ಅನುಭವ ಮತ್ತು ಶುದ್ಧ ಸಾರ್ವಜನಿಕ ಜೀವನದ ಬದ್ಧತೆಯು ಎನ್ ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುತ್ತದೆ ಮತ್ತು ರಾಷ್ಟ್ರೀಯ ರಾಜಕಾರಣಕ್ಕೆ ಸಕಾರಾತ್ಮಕ ಕೊಡುಗೆ ನೀಡುತ್ತದೆ ಎಂಬುದು ನನ್ನ ದೃಢವಾದ ನಂಬಿಕೆ ಎಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ಕ್ರಿಯಾತ್ಮಕ, ದೂರದೃಷ್ಟಿ ನಾಯಕತ್ವದಲ್ಲಿ ಎನ್ ಡಿಎ ಕೂಟವು ಅಭಿವೃದ್ಧಿ, ಉತ್ತಮ ಆಡಳಿತ ಮತ್ತು ಜನರ ಆಕಾಂಕ್ಷೆಗಳಿಗೆ ಕಟಿಬದ್ಧವಾಗಿರುವ ಬಲವಾದ ಮತ್ತು ಸ್ಥಿರ ಮೈತ್ರಿಕೂಟವಾಗಿ ರಾಷ್ಟ್ರ ರಾಜಕಾರಣದಲ್ಲಿ ಹೊರಹೊಮ್ಮಿದೆ.

ಎನ್ ಡಿಎ ಮೈತ್ರಿಕೂಟವನ್ನು ಮತ್ತಷ್ಟು ಬಲಪಡಿಸುವಲ್ಲಿ, ಮಿತ್ರಪಕ್ಷಗಳ ಜೊತೆ ಹೆಚ್ಚಿನ ಸಮನ್ವಯವನ್ನು ಬೆಳೆಸುವಲ್ಲಿ ಮತ್ತು ವಿಕಸಿತ ಭಾರತ ಸಾಕಾರಕ್ಕಾಗಿ ನಮ್ಮ ಸಾಮೂಹಿಕ ದೃಷ್ಟಿಕೋನವನ್ನು ಮುಂದಕ್ಕೆ ಕೊಂಡೊಯ್ಯುವಲ್ಲಿ ನಿತಿನ್ ನಬಿನ್ ಅವರು ಪ್ರಮುಖ ಪಾತ್ರ ವಹಿಸುತ್ತಾರೆ ಎಂಬ ವಿಶ್ವಾಸ ಹೊಂದಿದ್ದೇನೆಂದು ಕುಮಾರಸ್ವಾಮಿ ತಿಳಿಸಿದ್ದಾರೆ.

- Advertisement - 

 

Share This Article
error: Content is protected !!
";