ನಿತಿನ್ ನಬಿನ್ ಸಂಘಟನಾ ಸಾಮರ್ಥ್ಯ ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿದೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಭಾರತೀಯ ಜನತಾ ಪಾರ್ಟಿಯ ರಾಷ್ಟ್ರೀಯ ಅಧ್ಯಕ್ಷರಾಗಿ ಚುನಾಯಿತರಾದ ಆದರಣೀಯ ನಿತಿನ್ ನಬಿನ್ ರವರಿಗೆ ಹೃತ್ಪೂರ್ವಕ ಅಭಿನಂದನೆಗಳನ್ನು ವಿಪಕ್ಷ ನಾಯಕ ಆರ್.ಅಶೋಕ್ ತಿಳಿಸಿದ್ದಾರೆ.

ತಮ್ಮ ಸೈದ್ಧಾಂತಿಕ ಬದ್ಧತೆಕ್ರಿಯಾಶೀಲ ನಾಯಕತ್ವ, ಸುದೀರ್ಘ ರಾಜಕೀಯ ಅನುಭವ ಹಾಗೂ ತಲಸ್ಪರ್ಶಿ ಸಂಘಟನಾ ಸಾಮರ್ಥ್ಯ ಪಕ್ಷವನ್ನು ಮತ್ತಷ್ಟು ಉತ್ತುಂಗಕ್ಕೆ ಕೊಂಡೊಯ್ಯಲಿದೆ ಎಂಬ ಅಚಲ ವಿಶ್ವಾಸ ಪಕ್ಷದ ಪ್ರತಿಯೊಬ್ಬ ಕಾರ್ಯಕರ್ತರಿಗೂ ಇದೆ. ತಮ್ಮ ದಕ್ಷ ನಾಯಕತ್ವದಲ್ಲಿ ಸಂಘಟನೆಗೆ ಹೊಸ ವೇಗ, ಕಾರ್ಯಕರ್ತರಿಗೆ ಹೊಸ ಉತ್ಸಾಹ ಮೂಡಿದೆ.

- Advertisement - 

ನಮ್ಮ ಎಲ್ಲ ಹಿರಿಯ ನಾಯಕರ ಬೆಂಬಲದೊಂದಿಗೆ, ದೇಶದ ಏಳಿಗೆಯ ಗುರಿಯೆಡೆಗೆ ಪಕ್ಷವನ್ನು ತಾವು ಸಮರ್ಥವಾಗಿ ಮುನ್ನಡೆಸುವ ವಿಶ್ವಾಸ ನಮ್ಮೆಲ್ಲರಿಗಿದ್ದು, ರಾಜ್ಯದ ಸಮಸ್ತ ಕಾರ್ಯಕರ್ತರ ಪರವಾಗಿ ತಮಗೆ ಹೆಮ್ಮೆಯ ಶುಭಹಾರೈಕೆಗಳು. ತಮ್ಮ ನಾಯಕತ್ವದಲ್ಲಿ ಸಂಘಟನೆಯ ವಿಜಯದ ಪಥವನ್ನು ಮತ್ತಷ್ಟು ವಿಸ್ತರಿಸಲು ನಾವು ಶಕ್ತಿಮೀರಿ ಶ್ರಮಿಸುವ ಭರವಸೆ ನೀಡುತ್ತೇವೆ ಎಂದು ಅಶೋಕ್ ತಿಳಿಸಿದ್ದಾರೆ.

 

- Advertisement - 

Share This Article
error: Content is protected !!
";