ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ರಿಪಬ್ಲಿಕ್ ಆಫ್ ಕಲಬುರ್ಗಿಯ ನಿಜಾಮ ಜನಾಬ್ ಪ್ರಿಯಾಂಕ್ ಖರ್ಗೆ ಅವರು ಹೊರಡಿಸಿರುವ ಫತ್ವಾ ಏನು ಅಂತ ಒಮ್ಮೆ ಕೇಳಿ: “ಖರ್ಗೆ ಕುಟುಂಬದವರು ಮನಸ್ಸು ಮಾಡಿದರೆ ಬಿಜೆಪಿ ಕಾರ್ಯಕರ್ತರು ಕಲಬುರ್ಗಿ ಜಿಲ್ಲೆಗೆ ಕಾಲು ಇಡುವುದಕ್ಕೂ ಬಿಡುವುದಿಲ್ಲವಂತೆ!” ಎಂದು ಫತ್ವಾ ಹೊರಡಿಸಿರುವ ಸಚಿವರ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಕಿಡಿಕಾರಿದ್ದಾರೆ.
ಜನಾಬ್ ಪ್ರಿಯಾಂಕ್ ಖರ್ಗೆ ಅವರೇ, ಎರಡು ಬಾರಿ ಸಚಿವರಾದ ಮಾತ್ರಕ್ಕೆ ತಾವು ಬಾಬಾಸಾಹೇಬ್ ಅಂಬೇಡ್ಕರ್ ಅವರಿಗಿಂತ ದೊಡ್ಡವರೂ ಅಂದುಕೊಂಡು ಬಿಟ್ಟಿದ್ದೀರಾ? ಅಂಬೇಡ್ಕರ್ ಅವರ ಸಂವಿಧಾನ ಕಲಬುರ್ಗಿಯಲ್ಲಿ ಅನ್ವಯ ಆಗುವುದಿಲ್ಲವೇ? ಅಲ್ಲಿ ಬಿಜೆಪಿ ಕಾರ್ಯಕರ್ತರಿಗೆ ಸಂವಿಧಾನ ನೀಡಿರುವ ಮೂಲಭೂತ ಹಕ್ಕುಗಳು ಸಿಗುವುದಿಲ್ಲವೇ? ಎಂದು ಅಶೋಕ್ ಖಾರವಾಗಿ ಪ್ರಶ್ನಿಸಿದ್ದಾರೆ.
ತಾವೂ ನಿಜಾಮರೂ ಅಲ್ಲ, ತಮ್ಮ ಹಿಂಬಾಲಕರು ರಜಾಕರರೂ ಅಲ್ಲ. ಅಧಿಕಾರದ ಮದದಲ್ಲಿ ಮೈಮರೆತು. ತಾವೂಬ್ಬ ಜನಪ್ರತಿನಿಧಿ, ಜನಸೇವಕ ಅನ್ನೋದನ್ನ ಮರೆಯಬೇಡಿ ಎಂದು ಸಚಿವ ಪ್ರಿಯಾಂಕ್ ಖರ್ಗೆಗೆ ಅಶೋಕ್ ಎಚ್ಚರಿಸಿದ್ದಾರೆ.