ಸಮಾಜ ಒಡೆಯುವ ಮಾತುಗಳನ್ನು ಆಡಿರೋ ಮೌಲಾನಾ ವಿರುದ್ಧ ಕ್ರಮ ಏಕಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನ್ಯಾಯಾಲಯದ ಮಾತನ್ನೂ ಕೇಳುವುದಿಲ್ಲ. ಸಂಸತ್ತು ನಿಮ್ಮದಾದರೆ, ಬೀದಿಗಳು ನಮ್ಮದುಎಂದು ಧರ್ಮದ ಹೆಸರಿನಲ್ಲಿ ಸಮಾಜ ಒಡೆಯುವ ಮಾತುಗಳನ್ನು ಆಡಿರೋ ಮೌಲಾನಾ ಅಬು ತಾಲಿಬ್ ರೆಹಮಾನಿ ಅವರ ಮೇಲೆ FIR ಯಾವಾಗ ಹಾಕುತ್ತೀರಿ ಸಿಎಂ ಸಿದ್ದರಾಮಯ್ಯ ಹಾಗೂ ಡಿಸಿಎಂ ಡಿ.ಕೆ.ಶಿವಕುಮಾರ್ ಅವರೇ? ಎಂದು ವಿರೋಧ ಪಕ್ಷದ ನಾಯಕ ಆರ್.ಅಶೋಕ್ ಪ್ರಶ್ನಿಸಿದ್ದಾರೆ.

ತೀವ್ರ ಅನಾರೋಗ್ಯದಿಂದ ಬಳಲುತ್ತಿರುವ ಒಬ್ಬ ಹಿಂದೂ ಸ್ವಾಮೀಜಿ ತಮ್ಮ ಹೇಳಿಕೆಗೆ ವಿಷಾದ ವ್ಯಕ್ತಪಡಿಸಿ, ಬಹಿರಂಗ ಕ್ಷಮೆ ಕೇಳಿದ ಮೇಲೂ ಅವರ ಮೇಲೆ FIR ಹಾಕಿ ವಿಚಾರಣೆಗೆ ಕರೆಯುವ ಕಾಂಗ್ರೆಸ್ ಸರ್ಕಾರಕ್ಕೆ, ಸಂವಿಧಾನ, ನ್ಯಾಯಾಲಯದ ಘನತೆ ಎಲ್ಲವನ್ನೂ ಗಾಳಿಗೆ ತೂರಿ ಪ್ರಚೋದನಕಾರಿ ಭಾಷಣ ಮಾಡುವ ಮುಸ್ಲಿಂ ಮತಾಂಧರು ನಿಮ್ಮ ಕಣ್ಣಿಗೆ ಕಾಣುವುದಿಲ್ಲ ಅಲ್ಲವೇ? ಎಂದು ಕಾಂಗ್ರೆಸ್ ನಾಯಕರು, ಸರ್ಕಾರದ ವಿರುದ್ಧ ಅಶೋಕ್ ಹರಿಹಾಯ್ದಿದ್ದಾರೆ.

ಕಾಂಗ್ರೆಸ್ ಪಕ್ಷದ ಓಲೈಕೆ ರಾಜಕಾರಣವೇ ಅದಕ್ಕೆ ಮುಳುವಾಗಲಿದೆ. ಈಗಾಗಲೇ ದೇಶದ ಬಹುತೇಕ ರಾಜ್ಯಗಳಲ್ಲಿ ಅಡ್ರೆಸ್ ಇಲ್ಲದಂತಾಗಿರುವ ಹಿಂದೂ ವಿರೋಧ ಕಾಂಗ್ರೆಸ್ ಪಕ್ಷ ಕರ್ನಾಟಕದಲ್ಲೂ ನಿರ್ನಾಮ ಆಗುವ ದಿನ ಬಹಳ ದೂರವಿಲ್ಲ ಎಂದು ಅಶೋಕ್ ಎಚ್ಚರಿಸಿದ್ದಾರೆ.

- Advertisement -  - Advertisement -  - Advertisement - 
Share This Article
error: Content is protected !!
";