ಸಿಎಂ ವಿರುದ್ಧ ಕಪ್ಪುಪಟ್ಟಿ ಪ್ರದರ್ಶನವಿಲ್ಲ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು:
ವಿಪಕ್ಷ ಬಿಜೆಪಿ ಮತ್ತು ಜೆಡಿಎಸ್​​​ ಶಾಸಕರಿಗೂ ಅನುದಾನ ನೀಡುವುದಾಗಿ ಡಾ.ಪರಮೇಶ್ವರ್ ಅವರು ನೀಡಿರುವ ಭರವಸೆ ಹಿನ್ನೆಲೆ ನಗರದಲ್ಲಿ ಡಿ-2 ರಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಬಿಜೆಪಿಯಿಂದ ನಡೆಯಬೇಕಿದ್ದ ಪ್ರತಿಭಟನೆ ವಾಪಸ್ ತೆಗೆದುಕೊಳ್ಳಲಾಗಿದೆ.

ಕಪ್ಪುಪಟ್ಟಿ ಪ್ರದರ್ಶನ ಹಿಂಪಡೆಯುವುದಾಗಿ ತುಮಕೂರು ಗ್ರಾಮಾಂತರ ಕ್ಷೇತ್ರದ ಬಿಜೆಪಿ ಶಾಸಕ ಸುರೇಶ್ ಗೌಡ ತಿಳಿಸಿದ್ದಾರೆ.

ಅನುದಾನ ವಿಚಾರವಾಗಿ ನಗರದ ಪ್ರವಾಸಿ ಮಂದಿರದಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಡಾ.ಪರಮೇಶ್ವರ್ ಭೇಟಿಯಾದ ಶಾಸಕ ಸುರೇಶ್​ ಗೌಡ, ಚರ್ಚೆ ಮಾಡಿದ್ದಾರೆ. ಈ ವೇಳೆ ವಿಪಕ್ಷ ಶಾಸಕರಿಗೂ ಅನುದಾನ ನೀಡುವುದಾಗಿ ಪರಮೇಶ್ವರ್ ಭರವಸೆ ನೀಡಿದ್ದಾರೆ. ಹಾಗಾಗಿ ಪ್ರತಿಭಟನೆ ವಾಪಸ್ ಪಡೆಯಲಾಗಿದೆ ಎಂದು ತಿಳಿಸಿದ್ದಾರೆ.

ಅನುದಾನ ಕೊಡಿಸುವ ಆಶ್ವಾಸನೆ ಹಿನ್ನೆಲೆ ಪ್ರತಿಭಟನೆ ವಾಪಸ್ ಪಡೆದಿದ್ದೇವೆ. ಸಮಾವೇಶದಲ್ಲಿ ಸಿಎಂ, ಪರಮೇಶ್ವರ್, ರಾಜಣ್ಣಗೆ ಸನ್ಮಾನ ಮಾಡುತ್ತೇವೆ. ಇದು ಸರ್ಕಾರಿ ಕಾರ್ಯಕ್ರಮ ಹೀಗಾಗಿ ಭಾಗಿಯಾಗುತ್ತೇವೆ ಎಂದು ಶಾಸಕ ಸುರೇಶ್ ಗೌಡ ಹೇಳಿದ್ದಾರೆ.

ಎಲ್ಲ ಪಕ್ಷದವರಿಗೂ ಅನುದಾನ: ಡಾ.ಜಿ.ಪರಮೇಶ್ವರ್
ಅನುದಾನ ವಿಚಾರವಾಗಿ ಡಿ-2 ರ ಸೋಮವಾರ ಬಿಜೆಪಿ ಶಾಸಕರ ಪ್ರತಿಭಟನೆ ವಿಚಾರವಾಗಿ ಡಾ.ಜಿ.ಪರಮೇಶ್ವರ್ ಪ್ರತಿಕ್ರಿಯಿಸಿದ್ದು
, ಅನುದಾನ ನೀಡುವುದಾಗಿ ನಾನು ಭರವಸೆ ನೀಡಿದ್ದೇನೆ. ಹೀಗಾಗಿ ಬಿಜೆಪಿ ಶಾಸಕರು ಪ್ರತಿಭಟನೆ ಹಿಂಪಡೆಯುವ ವಿಶ್ವಾಸವಿದೆ ಎಂದಿದ್ದಾರೆ.

ರಾಜ್ಯ ಕಾಂಗ್ರೆಸ್ ಸರ್ಕಾರ ಎಲ್ಲಾ ಕ್ಷೇತ್ರಗಳ ಅಭಿವೃದ್ಧಿಗೆ ಬದ್ಧವಾಗಿದೆ. ಪ್ರತಿಪಕ್ಷದ ಶಾಸಕರಿಗೂ ಅನುದಾನ ಕೊಡಬೇಕೆಂದು ಸಿಎಂ ಸಿದ್ದರಾಮಯ್ಯ ಜತೆ ಚರ್ಚೆ ಮಾಡಿದ್ದೇವೆ. ವಿಪಕ್ಷ ಶಾಸಕರಿಗೂ ಅನುದಾನ ನೀಡುತ್ತೇವೆ. ಒಂದು ವೇಳೆ ಪ್ರತಿಭಟನೆ ಮಾಡಿದರೆ ಕಾನೂನು ಕ್ರಮ ಕೈಗೊಳ್ಳುತ್ತೇವೆ. ಸಿಎಂ ಸಿದ್ದರಾಮಯ್ಯ ಬರುವ ಹಿನ್ನೆಲೆಯಲ್ಲಿ ಎಲ್ಲಾ ರೀತಿಯ ಭದ್ರತಾ ಕಾರ್ಯ ಕೈಗೊಳ್ಳಲಾಗಿದೆ ಎಂದು ಪರಮೇಶ್ವರ್ ಹೇಳಿದ್ದಾರೆ.

 

- Advertisement -  - Advertisement -  - Advertisement - 
Share This Article
error: Content is protected !!
";