ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾನು ಯಾವುದೇ ಬಣದ ನಾಯಕ ಅಲ್ಲ. ನಾನು 140 ಜನ ಶಾಸಕರಿಗೂ ಅಧ್ಯಕ್ಷ. ನನ್ನ ರಕ್ತದಲ್ಲೇ ಗುಂಪುಗಾರಿಕೆ ಇಲ್ಲ ಎಂದು ಕೆಪಿಸಿಸಿ ಅಧ್ಯಕ್ಷರು, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್‌ಹೇಳಿದ್ದಾರೆ.
ಸದಾಶಿವ ನಗರದ ನಿವಾಸದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, ಕೆಲ ಶಾಸಕರು ದೆಹಲಿಗೆ ಹೋಗಿರುವ ಕುರಿತು ಪ್ರತಿಕ್ರಿಯಿಸಿದ ಅವರು ಅದರಲ್ಲಿ ತಪ್ಪೇನಿದೆ ಸಂಪುಟ ಪುನಾರಚನೆಯ ಬಗ್ಗೆ ಸಿಎಂ ಹೇಳಿದ್ದರು. ಈ ಕಾರಣಕ್ಕೆ ಅವರು ಮಂತ್ರಿ ಸ್ಥಾನ ಕೇಳಲು ದೆಹಲಿಗೆ ಹೋಗಿರಬಹುದು ಎಂದು ಡಿಸಿಎಂ ತಿಳಿಸಿದರು.
ಶಾಸಕರು ಮಂತ್ರಿ ಸ್ಥಾನಕ್ಕೆ ಬೇಡಿಕೆ ಇಡುವುದು ಸಾಮಾನ್ಯ. ಈ ಕಾರಣಕ್ಕೆ ಅವರು ದೆಹಲಿಗೆ ಹೋಗಿರಬಹುದು. ಹೈಕಮಾಂಡ್‌ನಾಯಕರನ್ನು ಭೇಟಿಯಾಗಲು ಹೋದರೆ ತಪ್ಪೇನು? ಈ ಹಿಂದೆ ಕೆಲ ಶಾಸಕರು ಮುಖ್ಯಮಂತ್ರಿ ಸಿದ್ದರಾಮಯ್ಯ ಜೊತೆ ದೆಹಲಿಗೆ ಹೋಗಿದ್ದಾರೆ. ನಾನು ಯಾರನ್ನು ದೆಹಲಿಗೆ ಕರೆದುಕೊಂಡು ಹೋಗಿಲ್ಲ ಎಂದು ತಿಳಿಸಿದರು.
ಮುಖ್ಯಮಂತ್ರಿಗಳು ಹೈಕಮಾಂಡ್‌ಹೇಳಿದಂತೆ ಕೇಳುತ್ತಾರೆ. ಮುಖ್ಯಮಂತ್ರಿಗಳು ಅವರ ವಿಚಾರಧಾರೆ ಹೇಳಿದ್ದಾರೆ. ನಾನೇ 5 ವರ್ಷ ಸಿಎಂ ಎಂದು ಸಿದ್ದರಾಮಯ್ಯ ಹೇಳಿದ್ದಾರೆ. ಅವರಿಗೆ ಆಲ್ ದಿ ಬೆಸ್ಟ್ ನಾವೆಲ್ಲರೂ ಒಗ್ಗಟ್ಟಾಗಿ ಕೆಲಸ ಮಾಡುತ್ತೇವೆ ಎಂದು ಡಿಕೆ ಶಿವಕುಮಾರ್ ಮಾರ್ಮಿಕವಾಗಿ ತಿಳಿಸಿದರು.

