ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ನಾಲ್ಕು ದಶಕಗಳಿಗೂ ಹೆಚ್ಚು ಕಾಲ ಕರ್ನಾಟಕ ರಾಜ್ಯವನ್ನು ಆಳಿದ ಕರ್ನಾಟಕ ಕಾಂಗ್ರೆಸ್ ಪಕ್ಷ ಉತ್ತರ ಕರ್ನಾಟವನ್ನು ಸಂಪೂರ್ಣ ನಿರ್ಲಕ್ಷ್ಯವಹಿಸಿದೆ ಎಂದು ಜೆಡಿಎಸ್ ಆರೋಪಿಸಿದೆ.
ಅಧಿಕಾರಕ್ಕೆ ಬರುವ ಮುಂಚೆ ಬಣ್ಣ ಬಣ್ಣದ ಮಾತು, ಅಧಿಕಾರಕ್ಕ ಬಂದ ಬಳಿಕ ಉತ್ತರ ಕರ್ನಾಟಕದ ಜನರ ಕಡೆಗಣನೆ ಮಾಡುತ್ತಲೇ ಬಂದಿದೆ.
ಕಾಂಗ್ರೆಸ್ ನಾಯಕರು ಅಭಿವೃದ್ಧಿ ಹೊಂದುತ್ತಲೇ ಇದ್ದಾರೆ, ಹೊರತು ಉತ್ತರ ಕರ್ನಾಟಕ ಭಾಗದ ಜನರ ಅಭಿವೃದ್ಧಿ ಇಂದಿಗೂ ಮರೀಚಿಕೆಯಾಗಿದೆ ಎಂದು ಜೆಡಿಎಸ್ ಆರೋಪಿಸಿದೆ.

