ನರೇಗಾ ಕಾಂಗ್ರೆಸ್ ಮಾತ್ರವಲ್ಲ- ಇಡೀ ದೇಶದ ಕಾರ್ಯಕ್ರಮ-ಡಿಸಿಎಂ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ-ಇಡೀ ದೇಶದ ಕಾರ್ಯಕ್ರಮ ಎಂದು ಡಿಸಿಎಂ ಡಿ.ಕೆ ಶಿವಕುಮಾರ್ ತಿಳಿಸಿದರು.

ವಿಬಿ-ಜಿರಾಮ್-ಜಿ ಯೋಜನೆ ಅನುಷ್ಠಾನ ಖಂಡಿಸಿ ಹಾಗೂ ಮನರೇಗಾ ಯೋಜನೆ ಪುನರ್ ಸ್ಥಾಪನೆಗೆ ಆಗ್ರಹಿಸಿ ಚಿಕ್ಕಬಳ್ಳಾಪುರದಲ್ಲಿ ಕೆಪಿಸಿಸಿ ವತಿಯಿಂದ ಆಯೋಜಿಸಿದ ನರೇಗಾ ಬಚಾವ್‌ಆಂದೋಲನ ಕಾರ್ಯಕ್ರಮದಲ್ಲಿ ರಾಜ್ಯ ಕಾಂಗ್ರೆಸ್‌ಉಸ್ತುವಾರಿ ರಣದೀಪ್‌ಸಿಂಗ್‌ಸುರ್ಜೇವಾಲಾ ಹಾಗೂ ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಭಾಗವಹಿಸಿ ಅವರು ಮಾತನಾಡಿದರು.

- Advertisement - 

ಈ ದೇಶವನ್ನು ಉಳಿಸುವುದಕ್ಕಾಗಿ ನರೇಗಾ ಬಚಾವೋ ಕಾರ್ಯಕ್ರಮ ಹಮ್ಮಿಕೊಂಡಿದ್ದೇವೆ. ನಾನು ಯಾವಾಗಲೂ ಹೇಳುತ್ತೇನೆ, ಕಾಂಗ್ರೆಸ್ ಶಕ್ತಿ ಈ ದೇಶದ ಶಕ್ತಿ, ಕಾಂಗ್ರೆಸ್ ಇತಿಹಾಸ ಈ ದೇಶದ ಇತಿಹಾಸ. ಕಾಂಗ್ರೆಸ್ ಯಾವಾಗಲೂ ಎಲ್ಲ ವರ್ಗದ ಜನರಿಗೆ ನಾವು ಕಾರ್ಯಕ್ರಮ ಕೊಟ್ಟು, ಬದುಕಿನಲ್ಲಿ ಬದಲಾವಣೆ ತರುವಂತ ಕೆಲಸ ನಾವು ಮಾಡಿಕೊಂಡು ಬರುತ್ತಿದ್ದೇವೆ.

20 ವರ್ಷದ ಹಿಂದೆ ಬಡವರಿಗೆ ಉದ್ಯೋಗವನ್ನು ಕಲ್ಪಿಸುವ, ಅವರ ಕೈಗಳಿಗೆ ಕೆಲಸ ಕೊಡುವ ಮನರೇಗಾ ಇಡೀ ದೇಶದಲ್ಲೇ ಕ್ರಾಂತಿಕಾರಕ ಕಾರ್ಯಕ್ರಮವಾಗಿತ್ತು. ಉದ್ಯೋಗ ಖಾತರಿ ಯೋಜನೆ ಕಾಂಗ್ರೆಸ್ ಕಾರ್ಯಕ್ರಮ ಮಾತ್ರವಲ್ಲ. ಇಡೀ ದೇಶದ ಕಾರ್ಯಕ್ರಮ. ದೇಶದ ಬಡ ಜನರ ಕಾರ್ಯಕ್ರಮ. 

- Advertisement - 

ಬಡವರಿಗೆ ಕೂಲಿ ಕೆಲಸಗಳನ್ನು ಕೊಟ್ಟು ಅವರಿಗೆ ಆತ್ಮಸ್ಥೈರ್ಯವನ್ನು ತುಂಬುವಂತ ಕಾರ್ಯಕ್ರಮ. ಮನರೇಗಾ ಯೋಜನೆಯನ್ನು ಉಳಿಸಿ, ಉದ್ಯೋಗ ಹಕ್ಕನ್ನು ಉಳಿಸಿ, ಗ್ರಾಮಗಳ ಸ್ವಯಂ ಆಡಳಿತದ ಹಕ್ಕನ್ನ ಮರು ಸ್ಥಾಪನೆ ಮಾಡುವ ಉದ್ದೇಶದಿಂದ ನಾವು ಈ ಹೋರಾಟ ಹಮ್ಮಿಕೊಂಡಿದ್ದೇವೆ ಎಂದು ಡಿಸಿಎಂ ತಿಳಿಸಿದರು.

ಈ ಸಂದರ್ಭದಲ್ಲಿ ಸಚಿವರಾದ ಕೆ.ಹೆಚ್.ಮುನಿಯಪ್ಪ, ಬೈರತಿ ಸುರೇಶ್‌, ಎನ್.ಎಸ್.ಬೋಸರಾಜು ಸೇರಿದಂತೆ ಹಲವಾರು ಸಚಿವರು, ಶಾಸಕರು, ಪಕ್ಷದ ಪದಾಧಿಕಾರಿಗಳು, ಮುಖಂಡರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.

 

 

Share This Article
error: Content is protected !!
";