ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕನ್ನಡ ರಾಜ್ಯೋತ್ಸವ ಅಂಗವಾಗಿ ನ. 01 ರಂದು ವಿವಿಧ ಕಾರ್ಯಕ್ರಮಗಳು ಜರುಗಲಿದ್ದು, ಎಲ್ಲ ಕಾರ್ಯಕ್ರಮಗಳಲ್ಲಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಭಾಗವಹಿಸುವಂತೆ ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.
ರಾಜ್ಯೋತ್ಸವದ ಅಂಗವಾಗಿ ಅಂದು ಬೆಳಿಗ್ಗೆ 07 ಗಂಟೆಗೆ ನಗರದ ನೀಲಕಂಠೇಶ್ವರ ದೇವಸ್ಥಾನದಿಂದ ಕನ್ನಡ ತಾಯಿ ಭುವನೇಶ್ವರಿ ದೇವಿ ಭಾವಚಿತ್ರದ ಮೆರವಣಿಗೆಯು ವಿವಿಧ ಕಲಾ ತಂಡಗಳು, ವಿವಿಧ ಇಲಾಖೆಗಳ ಸ್ತಬ್ಧ ಚಿತ್ರಗಳು, ಶಾಲಾ ಮಕ್ಕಳೊಂದಿಗೆ ಗಾಂಧಿ ವೃತ್ತ, ಸ್ಟೇಟ್ ಬ್ಯಾಂಕ್ ವೃತ್ತ, ಅಂಬೇಡ್ಕರ್ ವೃತ ಹಾಗೂ ಮದಕರಿ ವೃತ್ತ ಮೂಲಕ ಪೊಲಿಸ್ ಕವಾಯತು ಮೈದಾನ ತಲುಪಲಿದೆ.
ಬಳಿಕ ಇದೇ ಮೈದಾನದಲ್ಲಿ ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವರಾದ ಡಿ. ಸುಧಾಕರ್ ಅವರು ರಾಷ್ಟç ಧ್ವಜಾರೋಹಣ ನೆರವೇರಿಸುವರು. ಇದೇ ದಿನದಂದು ಸಂಜೆ 06 ಗಂಟೆಗೆ ನಗರದ ವಾಲ್ಮೀಕಿ ಭವನದಲ್ಲಿ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಹಾಗೂ ವಿವಿಧ ಶಾಲಾ ಮಕ್ಕಳ ವತಿಯಿಂದ ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.
ಎಲ್ಲ ಅಧಿಕಾರಿ, ಸಿಬ್ಬಂದಿಗಳು ತಪ್ಪದೆ ಈ ಕಾರ್ಯಕ್ರಮಗಳಲ್ಲಿ ಭಾಗವಹಿಸಬೇಕು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ. ಕುಮಾರಸ್ವಾಮಿ ತಿಳಿಸಿದ್ದಾರೆ.

