ಚಂದ್ರವಳ್ಳಿ ನ್ಯೂಸ್, ಹಿರಿಯೂರು:
ರಾಜ ಕಾಲುವೆ ಒತ್ತುವರಿ ಮಾಡಿದವರಿಗೆ ತಕ್ಷಣ ನೋಟಿಸ್ ಜಾರಿ ಮಾಡುವಂತೆ ಪೌರಾಯುಕ್ತ ಎ.ವಾಸೀಂ ರವರಿಗೆ ಜಿಲ್ಲಾ ಉಸ್ತುವಾರಿ ಸಚಿವ ಡಿ ಸುಧಾಕರ್ ಅವರು ಖಡಕ್ ಸೂಚನೆ ನೀಡಿದರು.
ಜಿಲ್ಲಾ ಸಚಿವರು ಸ್ಥಳಕ್ಕೆ ಭೇಟೆ ನೀಡಿ ಅಲ್ಲಿನ ಸಮಸ್ಯೆ ಬಗ್ಗೆ ಅರಿತು ಸಮಸ್ಯೆ ಬರದಂತೆ ಕ್ರಮವಹಿಸಿ ಎಂದು ಅಧಿಕಾರಿಗಳಿಗೆ ಸೂಚನೆ ನೀಡಿದರು.
ನಗರದಲ್ಲಿ ಮೂರ್ನಾಲ್ಕು ದಿನಗಳಿಂದ ಸುರಿಯುತ್ತಿರುವ ಮಳೆಯಿಂದಾಗಿ ಮಳೆ ನೀರು ರಸ್ತೆಗಳ ಮೇಲೆ ಹರಿದು ಬಂದು ಮನೆಗಳಿಗೆ ನುಗ್ಗುವ ಪರಿಸ್ಥಿತಿ ಉಂಟಾಗಿದೆ. ಕೆಲವು ಬಲಿಷ್ಠ ವ್ಯಕ್ತಿಗಳು ರಾಜ ಕಾಲುವೆ ಒತ್ತುವರಿ ಮಾಡಿಕೊಂಡಿರುವುದರಿಂದ ಮನೆಗಳಿಗೆ ರಸ್ತೆಗಳಿಗೆ ನೀರು ನುಗ್ಗುವ ಪರಿಸ್ಥಿತಿ ಕಂಡು ಬಂದಿದೆ.
ಹಾಗಾಗಿ ಅಕ್ರಮವಾಗಿ ರಾಜಕಾಲುವೆ ಒತ್ತುವರಿ ಮಾಡಿರುವುದನ್ನು ತೆರವುಗೊಳಿಸಿ ನೀರು ಸರಾಗವಾಗಿ ಹೋಗುವಂತೆ ಮಾಡಬೇಕು, ಮುಂದೆ ಇಂತಹ ದೂರುಗಳು ಬರಬಾರದು ಎಂದು ಸಚಿವ ಸುಧಾಕರ್ ಸೂಚಿಸಿದರು.
ಈ ಸಂದರ್ಭದಲ್ಲಿ ನಗರಸಭೆ ಅಧ್ಯಕ್ಷ ಬಾಲಕೃಷ್ಣ, ಉಪಾಧ್ಯಕ್ಷ ಮಂಜುಳಾ, ನಗರಸಭಾ ಸದಸ್ಯರಾದ ಈ ಮಂಜುನಾಥ್, ಈರಲಿಂಗೇಗೌಡ, ಅಂಬಿಕಾ ಆರಾಧ್ಯ, ವಿ ಶಿವಕುಮಾರ್, ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಖಾದಿ ರಮೇಶ್, ಕಂದಿಕೆರೆ ಸುರೇಶ್ ಬಾಬು,
ಮಾಜಿ ಜಿಲ್ಲಾ ಪಂಚಾಯತ್ ಸದಸ್ಯ ಆರ್ ನಾಗೇಂದ್ರ ನಾಯಕ್, ದಿಂಡಾವರ ಮಹೇಶ್, ಜ್ಞಾನೇಶ್, ತಿಮ್ಮರಾಜ್, ಕಲ್ಲಹಟ್ಟಿ ಹರೀಶ್, ತಾಲೂಕ್ ಪಂಚಾಯತಿ ಮಾಜಿ ಸದಸ್ಯ ಮುಕುಂದ್ ಸೇರಿದಂತೆ ಪಕ್ಷದ ಮುಖಂಡರು ಇದ್ದರು.

