102 ಕೋಟಿ ದಂಡ ಪಾವತಿಸಲು ನಟಿ ರನ್ಯಾ ರಾವ್ ಅವರಿಗೆ ನೋಟಿಸ್

News Desk

ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಕನ್ನಡದ ನಟಿ ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಲ್ಲಿ ದೃಢಪಟ್ಟಿದ್ದು ದೊಡ್ಡ ಮೊತ್ತದ ದಂಡ ಹಾಕಲಾಗಿದೆ. ಈಗಾಗಲೇ ಈ ಅಕ್ರಮವಾಗಿ ಚಿನ್ನ ಸಾಗಾಟಕ್ಕೆ ಸಂಬಂಧಪಟ್ಟಂತೆ ಅವರಿಗೆ ನೋಟಿಸ್ ನೀಡಲಾಗಿದೆ.
ಪ್ರಕರಣದ ಆರೋಪಿ ನಟಿ ರನ್ಯಾ ರಾವ್ ಅವರಿಗೆ
102.55 ಕೋಟಿ ರೂ. ದಂಡ ಪಾವತಿಸುವಂತೆ ಡಿಆರ್​ಐ ಸೂಚಿಸಿದೆ.

ನಟಿ ರನ್ಯಾ ರಾವ್ ಅವರು ಅಕ್ರಮ ಚಿನ್ನ ಸಾಗಾಣಿಕೆ ಕೇಸ್​​ನಲ್ಲಿ ಸಿಕ್ಕಿ ಬಿದ್ದಿದ್ದರು. ನೂರಾರು ಕೋಟಿ ರೂಪಾಯಿ ಬೆಲೆ ಬಾಳುವ ಚಿನ್ನವನ್ನು ಅವರು ವಿದೇಶದಿಂದ ಅಕ್ರಮವಾಗಿ ಭಾರತಕ್ಕೆ ತಂದಿದ್ದರು. ಇದರ ತನಿಖೆ ನಡೆದಿದ್ದು, ರನ್ಯಾ ರಾವ್ ಗೋಲ್ಡ್ ಸ್ಮಗ್ಲಿಂಗ್ ಮಾಡಿರುವುದು ದೃಢಪಟ್ಟಿದೆ.

- Advertisement - 

ಈ ಹಿನ್ನೆಲೆಯಲ್ಲಿ ರನ್ಯಾ ರಾವ್​ಗೆ ಡಿಆರ್​ಐ ಬರೋಬ್ಬರಿ 102.55 ಕೋಟಿ ರೂ. ದಂಡ ಪಾವತಿಸುವಂತೆ ಡಿಆರ್​ಐ ಅಧಿಕಾರಿಗಳು ಅಡ್ ಜುಡಿಕೇಷನ್ ಮಾಡಿ ನೋಟಿಸ್ ನೀಡಿದ್ದಾರೆ.

ಕಳೆದ ಮಾರ್ಚ್ 4ರಂದು ಗೋಲ್ಡ್ ಸೀಜ್ ಮಾಡಿ ರನ್ಯಾ ರಾವ್ ಅವರನ್ನು ಡಿಆರ್​ಐ ಬಂಧಿಸಿತ್ತು. ಕಳ್ಳಸಾಗಣೆ ವಸ್ತುಗಳನ್ನು 6 ತಿಂಗಳಲ್ಲಿ ಡಿಆರ್​ಐ ಅಧಿಕಾರಿಗಳು ವಸೂಲಿ ಮಾಡಬೇಕಿದೆ. ರನ್ಯಾ ರಾವ್ ಅವರು ಅಕ್ರಮವಾಗಿ 127.3 ಕೆಜಿ ಚಿನ್ನ ಸಾಗಾಟ ಮಾಡಿರುವುದು ತನಿಖೆಯಿಂದ ದೃಢಪಟ್ಟಿದೆ.

- Advertisement - 

102.55 ಕೋಟಿ ರೂ. ದಂಡ ಪಾವತಿಸುವಂತೆ DRIನಿಂದ ನೋಟಿಸ್ ಜಾರಿ ಆಗಿದೆ. ಸೆಪ್ಟೆಂಬರ್-2ರಂದು ಮಂಗಳವಾರ ಜೈಲಿಗೆ ತೆರಳಿ ರನ್ಯಾ ಸೇರಿ ನಾಲ್ವರು ಆರೋಪಿಗಳಿಗೆ ನೋಟಿಸ್ ನೀಡಲಾಗಿದೆ.

ದಂಡ ಪಾವತಿ ಮಾಡದಿದ್ದರೆ ಆಸ್ತಿ ಮುಟ್ಟುಗೋಲು ಹಾಕಲು ಅವಕಾಶವಿದೆ. ಎ2 ಆರೋಪಿ ತರುಣ್ ಕೊಂಡುರು ರಾಜು 67.6 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡವಾಗಿದ್ದು ಅವರಿಗೆ 62 ಕೋಟಿ ರೂಪಾಯಿ ದಂಡ ವಿಧಿಸಲಾಗಿದೆ. ಸಾಹಿಲ್ ಜೈಲ್ ಮತ್ತು ಭರತ್ ಜೈನ್ ತಲಾ 63.61 ಕೆಜಿ ಚಿನ್ನ ಕಳ್ಳಸಾಗಣೆ ಮಾಡಿರುವುದು ಧೃಡಪಟ್ಟಿದೆ. ಭರತ್ ಜೈನ್ ಹಾಗೂ ಸಾಹಿಲ್ ಜೈನ್ 53 ಕೋಟಿ ದಂಡ ಪಾವತಿ ಮಾಡಬೇಕು ಎಂದು ಸೂಚಿಸಲಾಗಿದೆ. ಜೊತೆಗೆ ಕ್ರಿಮಿನಲ್ ಕೇಸ್ ಕೂಡ ಮುಂದುವರಿಯುತ್ತೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಆರೋಪಿಗಳಿಗೆ ನೋಟಿಸ್ ಸೇರಿ 2,500 ಪುಟಗಳ ದಾಖಲೆಗಳನ್ನ ನೀಡಿಲಾಗಿದೆ. ಮಂಗಳವಾರ ಹೈಕೋರ್ಟ್​​ನಲ್ಲಿ ಕಾಫಿಪೋಸಾ ಅರ್ಜಿ ಕೂಡ ವಿಚಾರಣೆ ಆಗಿದೆ. ಕಾಫಿಪೋಸಾ ಅರ್ಜಿಯನ್ನು ಸೆ.11ಕ್ಕೆ ಮುಂದೂಡಲಾಗಿದೆ. ಡಿಆರ್ಐ ಅಧಿಕಾರಿಗಳು ಅತ್ಯಂತ ತ್ವರಿತ ಗತಿಯಲ್ಲಿ ತ‌ನಿಖೆ ನಡೆಸಿ ರಿಕವರಿಗೆ ಮುಂದಾಗಿದ್ದಾರೆ.

Share This Article
error: Content is protected !!
";