ಪ್ರವೇಶ ಪತ್ರ ಪಡೆಯಲು ಸೂಚನೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
2025-26
ನೇ ಶೈಕ್ಷಣಿಕ ಸಾಲಿಗೆ ಅಲ್ಪಸಂಖ್ಯಾತರ ಮೊರಾರ್ಜಿ ದೇಸಾಯಿ ವಸತಿ ಶಾಲೆ, ಕಾಲೇಜು ಹಾಗೂ ಮೌಲಾನಾ ಆಜಾದ್ ಮಾದರಿ ಶಾಲೆಗಳಲ್ಲಿ ಖಾಲಿ ಇರುವ ಅತಿಥಿ ಶಿಕ್ಷಕರು, ಉಪನ್ಯಾಸಕರನ್ನು ತಾತ್ಕಾಲಿಕವಾಗಿ ಆಯ್ಕೆ ಮಾಡಲು ಸಾಮಾನ್ಯ ಪ್ರವೇಶ ಪರೀಕ್ಷೆಯನ್ನು ಭಾನುವಾರ ಜೂನ್ 01ರಂದು ನಿಗಧಿಗೊಳಿಸಲಾಗಿದೆ.

- Advertisement - 

ಅಭ್ಯರ್ಥಿಗಳು ಪ್ರವೇಶ ಪತ್ರವನ್ನು ಜಿಲ್ಲಾ ಕಚೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಸ್ಟೇಡಿಯಂ ರಸ್ತೆ, ಆಂಜನೇಯ ದೇವಸ್ಥಾನ ಎದುರು, ಶ್ರೀರಾಮ ಕಾಂಪ್ಲೆಕ್ಸ್, ಮೊದಲನೇ ಮಹಡಿ, ಚಿತ್ರದುರ್ಗ ಇಲ್ಲಿ ಮೇ31ರಂದು ಮಧ್ಯಾಹ್ನ 3 ಗಂಟೆ ಒಳಗಾಗಿ ಪಡೆಯಬೇಕು ಎಂದು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಜಿಲ್ಲಾ ಅಧಿಕಾರಿ ಜಿ.ರೇಖಾ ತಿಳಿಸಿದ್ದಾರೆ.

- Advertisement - 

 

- Advertisement - 
Share This Article
error: Content is protected !!
";