ನೋಂದಣಿ ಪ್ರಮಾಣ ಪತ್ರ ಪಡೆಯಲು ಸೂಚನೆ

News Desk
- Advertisement -  - Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳು ಸೇವಾಸಿಂಧು ಪೋರ್ಟಲ್‍ನಲ್ಲಿ ಆನ್‍ಲೈನ್ ಮೂಲಕ ಅರ್ಜಿ ಸಲ್ಲಿಸಿ ನೋಂದಣಿ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಬೇಕು.

ಜಿಲ್ಲೆಯಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಸ್ವಯಂ ಸೇವಾ ಸಂಸ್ಥೆಗಳಿಗೆ ಈ ಹಿಂದೆ ಮ್ಯಾನ್ಯುಯಲ್ ಆಗಿ ವಿತರಿಸಲಾಗುತ್ತಿದ್ದ ನೊಂದಣೆ ಪ್ರಮಾಣ ಪತ್ರಗಳನ್ನು ರದ್ದುಗೊಳಿಸಿ ಆದೇಶಿಸಲಾಗಿದೆ.

- Advertisement - 

ವಿದ್ಯುನ್ಮಾನ ನಾಗರಿಕ ಸೇವಾ ವಿತರಣಾ ನಿರ್ದೇಶನಾಲಯ ಈ ಆಡಳಿತ ಇಲಾಖೆಯ ಸೇವಾ ಸಿಂಧು ಯೋಜನೆಯಡಿ ನೋಂದಣೆ ಮಾಡಿಸಲು ಆನ್‍ಲೈನ್ ತಂತ್ರಾಂಶ ಅಭಿವೃದ್ಧಿ ಪಡಿಸಿದ್ದು, ಈ ತಂತ್ರಾಂಶ ಬಳಸಿ ಸ್ವಯಂ ಸೇವಾ ಸಂಸ್ಥೆಗಳಿಗೆ ನೋಂದಣೆ ಪ್ರಮಾಣ ಪತ್ರ ವಿತರಿಸಲಾಗುವುದು.

ಈ ಹಿನ್ನೆಲೆಯಲ್ಲಿ ಚಿತ್ರದುರ್ಗ ಜಿಲ್ಲೆಯಲ್ಲಿ ವಿಕಲಚೇತನರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಎಲ್ಲಾ ಅನುದಾನಿತ, ಅನುದಾನರಹಿತ ಸ್ವಯಂ ಸೇವಾ ಸಂಸ್ಥೆಗಳು ಆನ್‍ಲೈನ್ ಮೂಲಕ  https://sevasindhu.karnataka.gov.in ಪೋರ್ಟಲ್‍ನಲ್ಲಿ 2026 ರ ಫೆಬ್ರವರಿ 19 ರೊಳಗಾಗಿ ನೋಂದಣೆ ಪ್ರಮಾಣ ಪತ್ರ ಕಡ್ಡಾಯವಾಗಿ ಪಡೆಯಲು ಈ ಮೂಲಕ ಕೋರಿದೆ.

- Advertisement - 

ಸ್ವಯಂ ಸೇವಾ ಸಂಸ್ಥೆಗಳು ಇಲಾಖಾ ಅನುಮತಿ ಪಡೆಯದೇ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಕ್ಷೇತ್ರದಲ್ಲಿ ಕಾರ್ಯ ನಿರ್ವಹಿಸುತ್ತಿರುವುದು ಗಮನಕ್ಕೆ ಬಂದಲ್ಲಿ ನಿಯಮಾನುಸಾರ ಸೂಕ್ತ ಕ್ರಮಕೈಗೊಳ್ಳಲಾಗುವುದು. ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಛೇರಿ, ಜಿಲ್ಲಾ ಬಾಲಭವನ ಆವರಣ, ಸ್ಟೇಡಿಯಂ ಹತ್ತಿರ, ಚಿತ್ರದುರ್ಗ ದೂರವಾಣಿ ಸಂಖ್ಯೆ 08194-235284 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿ ಜೆ.ವೈಶಾಲಿ ತಿಳಿಸಿದ್ದಾರೆ.

 

Share This Article
error: Content is protected !!
";