ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ದಾವಣಗೆರೆ ವಿಶ್ವವಿದ್ಯಾನಿಲಯ ರಾಷ್ಟ್ರೀಯ ಸೇವಾ ಯೋಜನಾ ಘಟಕ 1 ಮತ್ತು 2, ಚಿತ್ರದುರ್ಗ ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ಸ್ನಾತಕೋತ್ತರ ಅಧ್ಯಯನ ಕೇಂದ್ರದ ವತಿಯಿಂದ ಇದೇ ಜುಲೈ 8 ರಿಂದ 14 ರವರೆಗೆ ವಿಶೇಷ ವಾರ್ಷಿಕ ಶಿಬಿರವನ್ನು ಚಿತ್ರದುರ್ಗ ತಾಲ್ಲೂಕಿನ ಮಲ್ಲಾಪುರ ಗೊಲ್ಲರಹಟ್ಟಿಯಲ್ಲಿ ಹಮ್ಮಿಕೊಳ್ಳಲಾಗಿದೆ.
ಜುಲೈ 08ರಂದು ಮಧ್ಯಾಹ್ನ 3.30ಕ್ಕೆ ಉದ್ಘಾಟನಾ ಸಮಾರಂಭ ನಡೆಯಲಿದ್ದು, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಉದ್ಘಾಟನೆ ನೆರವೇರಿಸುವರು. ದಾವಣಗೆರೆ ವಿಶ್ವವಿದ್ಯಾಲಯ ಕುಲಪತಿ ಪ್ರೊ.ಬಿ.ಡಿ.ಕುಂಬಾರ ಅಧ್ಯಕ್ಷತೆ ವಹಿಸುವರು. ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ ಘಟಕ–2ರ ಕಾರ್ಯಕ್ರಮಾಧಿಕಾರಿ ಬಿ.ಟಿ.ನಿವೇದಿತ ಸ್ವಾಗತಿಸುವರು.
ಜಿ.ಆರ್.ಹಳ್ಳಿ ಜ್ಞಾನಗಂಗೋತ್ರಿ ರಾಷ್ಟ್ರೀಯ ಸೇವಾ ಯೋಜನೆ ಘಟಕ–1ರ ಕಾರ್ಯಕ್ರಮಾಧಿಕಾರಿ ಡಾ.ಎಂ.ಸುಂದರಂ ಪ್ರಾಸ್ತಾವಿಕ ನುಡಿಗಳನ್ನಾಡುವರು. ಮುಖ್ಯ ಅತಿಥಿಗಳಾಗಿ ದಾವಣಗೆರೆ ವಿಶ್ವವಿದ್ಯಾಲಯ ಕುಲ ಸಚಿವ ಶಬ್ಬೀರ್ ಬಾಷಾ ಗಂಟಿ, ಪರೀಕ್ಷಾಂಗ ಕುಲ ಸಚಿವ ಡಾ.ಸಿ.ಕೆ.ರಮೇಶ, ಹಣಕಾಸು ಅಧಿಕಾರಿ ದ್ಯಾಮನಗೌಡ ಮುದ್ದನಗೌಡ, ಜ್ಞಾನ ಗಂಗೋತ್ರಿ ಸ್ನಾತಕೋತ್ತರ ಕೇಂದ್ರ ನಿರ್ದೇಶಕ ಡಾ.ಸತ್ಯನಾರಾಯಣ,
ರಾಷ್ಟ್ರೀಯ ಸೇವಾ ಯೋಜನೆ ಕಾರ್ಯಕ್ರಮ ಸಂಯೋಜನಾಧಿಕಾರಿ ಡಾ.ಅಶೋಕ್ ಕುಮಾರ್ ವಿ ಪಾಳೇದ್, ಗೋನೂರು ಗ್ರಾಮ ಪಂಚಾಯಿತಿ ಅಧ್ಯಕ್ಷೆ ಗುಂಡಮ್ಮ, ಉಪಾಧ್ಯಕ್ಷೆ ಸಿ.ಜಯಮ್ಮ, ಪಿಡಿಒ ಆರ್.ಪಾತಣ್ಣ ಸೇರಿದಂತೆ ಸ್ನಾತಕೋತ್ತರ ಕೇಂದ್ರದ ವಿಷಯ ಸಂಯೋಜಕರು, ಗೋನೂರು ಗ್ರಾಮ ಪಂಚಾಯಿತಿ ಸದಸ್ಯರು, ಶಾಲಾ ಶಿಕ್ಷಣ ಇಲಾಖೆ ಅಧಿಕಾರಿಗಳು, ಶಿಕ್ಷಕರು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.