ಡಿ.13ರಂದು ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಚಿತ್ರದುರ್ಗ ನುಲೇನೂರು ಶಂಕರಪ್ಪ ಪ್ರತಿಷ್ಠಾನ ವತಿಯಿಂದ ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರ ಪ್ರಶಸ್ತಿ ಪ್ರದಾನ ಸಮಾರಂಭ ಇದೇ ಡಿಸೆಂಬರ್ 13ರಂದು ಬೆಳಿಗ್ಗೆ 11ಕ್ಕೆ ಚಿತ್ರದುರ್ಗ ನಗರದ ಪ್ರವಾಸಿ ಮಂದಿರ ಪಕ್ಕದ ಲಿಡ್ಕರ್ ಭವನದಲ್ಲಿ ಹಮ್ಮಿಕೊಳ್ಳಲಾಗಿದೆ.

ಮೇಲುಕೋಟೆ ಶಾಸಕ ದರ್ಶನ್  ಪುಟ್ಟಣ್ಣಯ್ಯ ಉದ್ಘಾಟನೆ ನೆರವೇರಿಸುವರು. ನೀರಾವರಿ ಹೋರಾಟ ಅನುಷ್ಠಾನ ಸಮಿತಿ ಕಾರ್ಯಾಧ್ಯಕ್ಷ ಬಿ.ಎ.ಲಿಂಗಾರೆಡ್ಡಿ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ರೈತ ಸಂಘ ರಾಜ್ಯಾಧ್ಯಕ್ಷ ಬಡಗಲಪುರ ನಾಗೇಂದ್ರ, ಗೌರವಾಧ್ಯಕ್ಷ ಚಾಮರಸ ಪಾಟೀಲ್, ಕಾರ್ಯನಿರತ ಪತ್ರಕರ್ತರ ಸಂಘ ಜಿಲ್ಲಾಧ್ಯಕ್ಷ ವಿನಾಯಕ ತೊಡರನಹಾಳ್, ನುಲೇನೂರು ಎಂ.ಶಂಕರಪ್ಪ ಪ್ರತಿಷ್ಠಾನ ಕಮಲಮ್ಮ ನುಲೇನೂರು ಶಂಕರಪ್ಪ, ಡಾ.ರವಿಶಂಕರ್ ನುಲೇನೂರು, ರೈತ ಸಂಘ ಕಾರ್ಯಾಧ್ಯಕ್ಷ ಜೆ.ಎಂ.ವೀರಸಂಗಯ್ಯ,

- Advertisement - 

ಎ.ಗೋವಿಂದರಾಜು, ರಾಜ್ಯ ಉಪಾಧ್ಯಕ್ಷ ಶಿವಾನಂದ ಕುಗ್ವೆ, ಸರ್ವೋದಯ ಕರ್ನಾಟಕ ಮುಖಂಡ ಜೆ.ಯಾದವರೆಡ್ಡಿ, ಸಿಪಿಐ ರಾಜ್ಯ ಕಾರ್ಯದರ್ಶಿ ಜಿ.ಸಿ.ಸುರೇಶ್ ಬಾಬು, ಸಿಐಟಿಯು ರಾಜ್ಯ ಉಪಾಧ್ಯಕ್ಷ ಸೈಯದ್ ಮುಜೀಬ್, ರೈತ ಸಂಘ ರಾಜ್ಯ ಉಪಾಧ್ಯಕ್ಷರಾದ ಕೆ.ಪಿ.ಭೂತಯ್ಯ, ಮಂಜುಳ ಅಕ್ಕಿ, ವಲಯ ಕಾರ್ಯದರ್ಶಿ ಅರುಣ್ ಕುಮಾರ್ ಕುರುಡಿ, ವಿಭಾಗೀಯ ಕಾರ್ಯದರ್ಶಿ ಎಂ.ಎಲ್.ಕೆ.ನಾಯ್ಡು, ಮಹಿಳಾ ಪ್ರಧಾನ ಕಾರ್ಯದರ್ಶಿ ನೇತ್ರಾವತಿ, ರಾಜ್ಯ ಸಂಘಟನಾ ಕಾರ್ಯದರ್ಶಿ ಬಸ್ತಿಹಳ್ಳಿ ಸುರೇಶ್ ಬಾಬು, ವಿಭಾಗೀಯ ಉಪಾಧ್ಯಕ್ಷ ಹೊರಕೇರಪ್ಪ, ಜಿಲ್ಲಾಧ್ಯಕ್ಷ ಹಂಪಯ್ಯನಮಾಳಿಗೆ ಧನಂಜಯ ಭಾಗವಹಿಸುವರು.

ಮಹಿಳಾ ಹೋರಾಟಗಾರ್ತಿ ಕೋಲಾರ ಜಿಲ್ಲೆಯ ಎಸ್.ವರಲಕ್ಷ್ಮೀ ಅವರು ನುಲೇನೂರು ಶಂಕರಪ್ಪ ಹಸಿರು ಪುರಸ್ಕಾರಪ್ರಶಸ್ತಿಗೆ ಪುರಸ್ಕøತರಾಗಿದ್ದಾರೆ ಎಂದು ನುಲೇನೂರು ಶಂಕರಪ್ಪ ಪ್ರತಿಷ್ಠಾನ ಪ್ರಕಟಣೆ ತಿಳಿಸಿದೆ.

- Advertisement - 

 

 

Share This Article
error: Content is protected !!
";