ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕಳೆದ ಜೂನ್ ತಿಂಗಳೊಂದರಲ್ಲಿಯೇ ವಿಶೇಷ ನ್ಯಾಯಾಲಯದ ಮುಂದೆ ಇದ್ದ ಹಲವು ಪ್ರಕರಣಗಳನ್ನು ಇತ್ಯರ್ಥ ಮಾಡುವ ಮೂಲಕ, ರಾಜ್ಯಾದ್ಯಂತ ಭೂ ಕಬಳಿಕೆಯಾಗಿದ್ದ 224.4 ಎಕರೆ ಒತ್ತುವರಿ ಜಮೀನನ್ನು ಮರಳಿ ಸರ್ಕಾರದ ಸುಪರ್ದಿಗೆ ವಹಿಸಿ ಆದೇಶ ನೀಡಲಾಗಿದೆ ಎಂದು ಕರ್ನಾಟಕ ಭೂ ಕಬಳಿಕೆ ನಿಷೇಧ ವಿಶೇಷ ನ್ಯಾಯಾಲಯದ ಅಧ್ಯಕ್ಷರಾದ ನ್ಯಾಯಮೂರ್ತಿ ಬಿ.ಎ. ಪಾಟೀಲ್ ಹೇಳಿದರು.
ನಗರದ ಜಿಲ್ಲಾ ಪಂಚಾಯತಿ ಸಭಾಂಗಣದಲ್ಲಿ ಶನಿವಾರ ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಮತ್ತು ಸಂಬಂಧಿಸಿದ ಕಾಯ್ದೆಗಳ ಕುರಿತು ಆಯೋಜಿಸಲಾದ ಒಂದು ದಿನದ ಕಾರ್ಯಾಗಾರ ಉದ್ಘಾಟಿಸಿ ಅವರು ಮಾತನಾಡಿದರು.
ಅಧಿಕಾರಿಗಳ ಪ್ರಯತ್ನದ ಫಲವಾಗಿ ಕೋಟ್ಯಾಂತರ ರೂಪಾಯಿ ಮೌಲ್ಯದ 224.4 ಎಕರೆ ಜಮೀನು ಸರ್ಕಾರಕ್ಕೆ ಮರಳಿ ದೊರಕಿದೆ. ಸದ್ಯ ಸ್ಮಶಾನ ಹಾಗೂ ಸಾರ್ವಜನಿಕ ಉಪಯೋಗಕ್ಕೆ ಜಾಗ ಬೇಕು ಎಂದರೆ, ಸರ್ಕಾರ ಹಣ ನೀಡಿ ಭೂಮಿ ಕೊಂಡುಕೊಳ್ಳಬೇಕಾದ ಪರಿಸ್ಥಿತಿ ಎದುರಾಗಿದೆ. ಕರ್ನಾಟಕ ಭೂ ಕಬಳಿಕೆ ನಿಷೇಧ ಅಧಿನಿಯಮ ಬಲಿಷ್ಠ ಹಾಗೂ ಪರಿಣಾಮಕಾರಿಯಾಗಿದೆ. ಅಧಿಕಾರಿಗಳು ಕಾಯ್ದೆ ಬಗ್ಗೆ ಸಂಪೂರ್ಣ ಮಾಹಿತಿ ತಿಳಿದುಕೊಂಡು, ಸರ್ಕಾರಿ ಭೂಮಿಯ ರಕ್ಷಣೆಗೆ ಕಾರ್ಯ ಪ್ರವೃತ್ತರಾಗಬೇಕು. ಅಧಿಕಾರಿಗಳು ಭೂ ಕಬಳಿಕೆ ಅಥವಾ ಒತ್ತುವರಿ ಗಮನಕ್ಕೆ ಬಂದರೆ, ವಿಶೇಷ ನ್ಯಾಯಾಲಯಕ್ಕೆ ಫಾರಂ 1 ರಲ್ಲಿ ಅರ್ಜಿ ಸಲ್ಲಿಸಿದರೆ ಸಾಕು, ಕಾನೂನಿನ ಪ್ರಕಾರ ಮುಂದಿನ ಕ್ರಮ ಕೈಗೊಳ್ಳಲಾಗುವುದು. ಯಾವುದೇ ಒತ್ತಡ ಹಾಗೂ ಪ್ರಭಾವಗಳಿಗೆ ಮಣಿಯುವ ಅವಶ್ಯಕತೆ ಇಲ್ಲ. ಭೂ ಕಬಳಿಕೆಯ ಬಗ್ಗೆ ಮಾಹಿತಿ ಬಂದರೂ ಸಹ, ವಿಶೇಷ ನ್ಯಾಯಾಲಯ ಸ್ವಇಚ್ಛೆಯಿಂದ ಪ್ರಕರಣ ದಾಖಲಿಸಿಕೊಂಡು ವಿಚಾರಣೆ ನಡೆಸುವುದು. ಒಂದು ವೇಳೆ ಭೂ ಒತ್ತುವರಿ ಕಂಡು ಬಂದರೂ ಸಹ ಅಧಿಕಾರಿಗಳು ಕ್ರಮ ಕೈಗೊಳ್ಳದೇ ನಿರ್ಲಕ್ಷ್ಯ ತೋರಿದರೆ, ಭೂ ಕಬಳಿಕೆ ನಿಷೇಧ ಅಧಿನಿಯಮದಡಿ, ಭೂ ಒತ್ತುವರಿಗೆ ಪ್ರೋತ್ಸಾಹ ನೀಡಿದ್ದಾರೆ ಎಂದು ಪರಿಗಣಿಸಿ ಸಂಬಂಧಪಟ್ಟ ಅಧಿಕಾರಿಗಳ ವಿರುದ್ಧವೂ ಪ್ರಕರಣ ದಾಖಲಿಸಲಾಗುವುದು ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಎಚ್ಚರಿಸಿದರು.
ವಿಶೇಷ ನ್ಯಾಯಾಲಯದಲ್ಲಿ ಮಾಧ್ಯಮ ವರದಿಗಳನ್ನು ಆಧರಿಸಿ ಸಾಕಷ್ಟು ಭೂ ಕಬಳಿಕೆ ಪ್ರಕರಣಗಳನ್ನು ದಾಖಲಿಸಿಕೊಳ್ಳಲಾಗಿದೆ. ಹೀಗೆ ದಾಖಲಾದ ಹಲವು ಪ್ರಕರಣಗಳಲ್ಲಿ ಭೂ ಒತ್ತುವರಿಯನ್ನು ಸಹ ತೆರವುಗೊಳಿಸಲಾಗಿದೆ. ಮಲಪ್ರಭಾ ನದಿ ದಂಡೆ ಒತ್ತುವರಿ ಕುರಿತು ಮಾಧ್ಯಮಗಳಲ್ಲಿ ವರದಿ ಬಿತ್ತರವಾಗಿತ್ತು. ಇದನ್ನು ಆಧರಿಸಿ ನ್ಯಾಯಾಲಯ ಸ್ವ ಇಚ್ಛೆಯಿಂದ ಪ್ರಕರಣ ಕೈಗೆತ್ತಿಕೊಂಡಿದೆ, ಈ ಬಗ್ಗೆ ಒಟ್ಟು 1800 ಹೆಚ್ಚು ಪ್ರಕರಣಗಳು ದಾಖಲಾಗಿವೆ. ಚಿಕ್ಕಮಗಳೂರು ಜಿಲ್ಲೆಯ ಹುಲಿ ಸಂರಕ್ಷಿತ ಅರಣ್ಯ ಪ್ರದೇಶ ಒತ್ತುವರಿ ಸಂಬಂಧ ಮಾಧ್ಯಮ ವರದಿ ಆಧಿರಿಸಿ 17 ಪ್ರಕರಣಗಳನ್ನು ದಾಖಲಿಸಲಾಗಿದೆ. ನ್ಯಾಯಾಂಗ, ಕಂದಾಯ, ಭೂ ಸರ್ವೇ, ಪೊಲೀಸ್ ಹಾಗೂ ಅರಣ್ಯ ಇಲಾಖೆಗಳು ಒಟ್ಟಾಗಿ ಬಿಗಿ ಮುಷ್ಠಿಯಿಂದ ಸರ್ಕಾರಿ ಭೂಮಿಯನ್ನು ರಕ್ಷಿಸಿದರೆ, ಎಂತಹುದೇ ವ್ಯಕ್ತಿ ಅಥವಾ ಸಮೂಹಗಳಿಂದಲೂ ಭೂ ಕಬಳಿಕೆ ಮಾಡಲು ಸಾಧ್ಯವಿಲ್ಲ ಎಂದು ನ್ಯಾಯಮೂರ್ತಿ ಬಿ.ಎ.ಪಾಟೀಲ್ ಅಭಿಪ್ರಾಯ ವ್ಯಕ್ತಪಡಿಸಿದರು.
ಜಿಲ್ಲೆಯಲ್ಲಿ ಕೆರೆಗಳ ಸರಹದ್ದುಗಳನ್ನು ಗೊತ್ತುಪಡಿಸಿ ಏರಿಗಳನ್ನು ನಿರ್ಮಿಸುವ ಮೂಲಕ, ಕೆರೆಗಳ ಒತ್ತುವರಿ ತೆರವಿಗೆ ಅಧಿಕಾರಿಗಳು ಪ್ರಯತ್ನಿಸಬೇಕು. ಭೂ ಪರಿವರ್ತನೆ ನೀಡುವ ಪ್ರಾಧಿಕಾರಗಳು ಕೆರೆ ಹಾಗೂ ಸರ್ಕಾರಿ ಭೂಮಿ ಒತ್ತುವರಿ ಕುರಿತು ಪರಿಶೀಲನೆ ನಡೆಸಿ, ನಂತರ ಅನುಮತಿ ನೀಡುವಂತೆ ನ್ಯಾಯಮೂರ್ತಿ ಬಿ.ಎ.ಪಾಟೀಲ್ ಸೂಚಿಸಿದರು.
ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರು ಹಾಗೂ ಜಿಲ್ಲಾ ಕಾನೂನು ಸೇವೆಗಳ ಪ್ರಾಧಿಕಾರದ ಅಧ್ಯಕ್ಷ ರೋಣ್ ವಾಸುದೇವ್ ಮಾತನಾಡಿ, ಎಲ್ಲಾ ಇಲಾಖೆಗಳು ಸಮನ್ವಯದಿಂದ ಕಾರ್ಯ ನಿರ್ವಹಿಸುವ ಮೂಲಕ, ಕೆರೆ, ಅರಣ್ಯ ಹಾಗೂ ಕಂದಾಯ ಭೂಮಿ ಒತ್ತುವರಿ ಮಾಡಿ ದುರ್ಲಾಭ ಪಡೆಯುತ್ತಿರುವ ಪಟ್ಟಭದ್ರ ವ್ಯಕ್ತಿಗಳನ್ನು ಕಾನೂನಿನ ಚೌಕಟ್ಟಿಗೆ ತರುವ ಕೆಲಸ ಮಾಡಬೇಕು. ಅತಿಕ್ರಮಣ ತೆರವುಗೊಳಿಸಿ ಸರ್ಕಾರಕ್ಕೆ ಆಸ್ತಿ ಮರಳಿಸಬೇಕು. ಮಾಧ್ಯಮಗಳು ಸಹ ಸರ್ಕಾರಿ ಭೂ ಕಬಳಿಕೆ ಕುರಿತು ವಿಸ್ತøತ ವರದಿ ಪ್ರಕಟಿಸುವ ಮೂಲಕ ನ್ಯಾಯಾಲಯಗಳ ಗಮನ ಸೆಳೆಯಬೇಕು. ಇದನ್ನು ಆಧರಿಸಿ ನ್ಯಾಯಾಲಯಗಳು ಪ್ರಕರಣ ದಾಖಲಿಸಿ, ತನಿಖೆಗೆ ಆದೇಶಿಸಿ ಸರ್ಕಾರಿ ಭೂಮಿ ರಕ್ಷಣೆಯನ್ನು ಮಾಡಲು ಸಹಕಾರಿಯಾಗಲಿದೆ ಎಂದರು.
ಚಿತ್ರದುರ್ಗ ಜಿಲ್ಲೆ ಬರ ಪೀಡಿತ ಪ್ರದೇಶವಾಗಿದ್ದು, ಕೆರೆಗಳ ಒತ್ತುವರಿ ಮೋಜಿಣಿ ಮಾಡುವುದು ಅಗತ್ಯವಿದೆ. ಕೆರೆ ಒತ್ತುವರಿ ನಿರ್ವಹಣೆ ಸಮಿತಿ ಅಧ್ಯಕ್ಷನಾಗಿ ಸದ್ಯದಲ್ಲೇ ಕೆರೆಗಳ ಮೋಜಿಣಿ ಕ್ರಮ ಕೈಗೊಳ್ಳುವುದಾಗಿ ನ್ಯಾಯಾಧೀಶ ರೋಣ್ ವಾಸುದೇವ್ ಹೇಳಿದರು.
ಒತ್ತುವರಿ ಜಮೀನು ಸರ್ಕಾರದ ಸುಪರ್ದಿಗೆ- ನ್ಯಾ.ಬಿ.ಎ. ಪಾಟೀಲ್
WhatsApp
Telegram
Facebook
Twitter
LinkedIn
Join Our WhatsApp Channel
For Feedback - [email protected]
Join Our WhatsApp Channel
LATEST Post
5 ವರ್ಷ ಸಿಎಂ ಹುದ್ದೆಯಲ್ಲಿ ಮುಂದುವರೆಯಲಿ-ಜಿಪಂ ಮಾಜಿ ಅಧ್ಯಕ್ಷೆ ಶಶಿಕಲಾ ಸುರೇಶ್ ಬಾಬು
14/09/2024
5:36 AM
ಶಿರಾ ನಗರಸಭೆ ಆಡಳಿತ ಕಾಂಗ್ರೆಸ್ ತೆಕ್ಕೆಗೆ
14/09/2024
5:34 AM
ಹಿರಿಯ ನಾಗರಿಕರ ಬಗ್ಗೆ ಅಸಡ್ಡೆ ಅಸಹನೆ ಮನೋಭಾವ ಸಲ್ಲದು-ಅಧ್ಯಕ್ಷ ರಂಗಪ್ಪ ರೆಡ್ಡಿ
14/09/2024
5:33 AM
ವಿವಿಧ ಅಭಿವೃಧ್ಧಿ ಕಾಮಗಾರಿಗಳಿಗೆ ಇಂದು ಗೃಹ ಸಚಿವರಿಂದ ಚಾಲನೆ
14/09/2024
5:31 AM
ಮಕ್ಕಳಲ್ಲಿ ಅಪೌಷ್ಠಿಕತೆ, ರಕ್ತಹೀನತೆ ಹೋಗಲಾಡಿಸಿ-ಡಾ.ಡಿ.ಎಂ.ಅಭಿನವ್
14/09/2024
5:29 AM
ಸೆ.14ರಂದು ಸ್ವಚ್ಚತಾ ಹೀ ಸೇವಾ ಪ್ರಾಕ್ಷಿಕ ಕಾರ್ಯಕ್ರಮ
14/09/2024
5:27 AM
ಸೆ.15 ರಂದು ರಾಷ್ಟ್ರೀಯ ಹೆದ್ದಾರಿ ಎಡಭಾಗದಲ್ಲಿ ವಾಹನ ಸಂಚಾರ ನಿರ್ಬಂಧ
14/09/2024
5:25 AM
ಸಾರ್ವಜನಿಕರ ಅರ್ಜಿಗಳನ್ನು ತಡಮಾಡದೆ ವಿಲೇವಾರಿ ಮಾಡಿ : ಶುಭ ಕಲ್ಯಾಣ್
14/09/2024
5:20 AM
ವಿವಿ ಸಾಗರಕ್ಕೆ ಶುಕ್ರವಾರ ಬರುತ್ತಿರುವ ನೀರಿನ ಒಳ ಹರಿವು ಎಷ್ಟು..
13/09/2024
4:16 PM
ಬೃಹತ್ ತಮಟೆ ಚಳುವಳಿಯ ಮೂಲಕ ಪ್ರತಿಭಟನೆ
13/09/2024
6:34 AM
ದೇವರು ಮತ್ತು ಗಲಭೆಗಳು….
13/09/2024
6:30 AM
ನಕಲಿ ವೈದ್ಯರ ಹಾವಳಿ ತಡೆಗೆ ಕಟ್ಟು ನಿಟ್ಟಿನ ಕ್ರಮ
13/09/2024
6:19 AM