ಚಂದ್ರವಳ್ಳಿ ನ್ಯೂಸ್, ತುಮಕೂರು:
ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿರುವ ಘಟನೆ ತುಮಕೂರಿನ ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿ ಸಂಭವಿಸಿದೆ.
ಅಂತಸರನಹಳ್ಳಿ ಕೈಗಾರಿಕಾ ಪ್ರದೇಶದಲ್ಲಿರುವ ಪರಿಮಳ ಆಗ್ರೋ ಫುಡ್ ಇಂಡಸ್ಟ್ರಿಯಲ್ಲಿ ಕೆಲಸ ಮಾಡುತ್ತಿದ್ದ ಬಿಹಾರ ಮೂಲದ ಸಂತೋಷ್ ಹಾಗೂ ಚಂದನ್ ಶರ್ಮ ಮೃತ ದುರ್ದೈವಿಗಳಾಗಿದ್ದಾರೆ. ಇತರೆ ಮೂವರಿಗೆ ಗಂಭೀರ ಗಾಯಗಳಾಗಿದ್ದು, ತುಮಕೂರು ಜಿಲ್ಲಾಸ್ಪತ್ರೆಗೆ ಶಿಫ್ಟ್ ಮಾಡಲಾಗಿದೆ.
ತುಮಕೂರು ಗ್ರಾಮಾಂತರ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ. ಬತ್ತದ ಹೊಟ್ಟಿನಿಂದ ಪರಿಮಳ ಆಗ್ರೋ ಫ್ಯಾಕ್ಟರಿಯಲ್ಲಿ ಎಣ್ಣೆ ತೆಗೆಯಲಾಗುತ್ತೆ. ಐವರು ಕಾರ್ಮಿಕರು ಆಯಿಲ್ ಟ್ಯಾಂಕ್ ಬಳಿ ಕೆಲಸ ಮಾಡುತ್ತಿದ್ದರು.
ಈ ವೇಳೆ ಆಯಿಲ್ ಟ್ಯಾಂಕ್ ಬ್ಲಾಸ್ಟ್ ಆಗಿ ಇಬ್ಬರು ಕಾರ್ಮಿಕರು ದುರ್ಮರಣ ಹೊಂದಿದ್ದಾರೆ. ಘಟನಾ ಸ್ಥಳಕ್ಕೆ ತುಮಕೂರು ಎಸ್ಪಿ ಅಶೋಕ್ ಕೆ.ವಿ ಹಾಗೂ ಜಿಲ್ಲಾ ಕಾರ್ಮಿಕ ಅಧಿಕಾರಿ ತೇಜಾವತಿ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ. ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.