ಚಂದ್ರವಳ್ಳಿ ನ್ಯೂಸ್, ಬೆಂಗಳೂರು:
ಒಕ್ಕಲಿಗ ವಿರೋಧಿ ಕರ್ನಾಟಕ ಕಾಂಗ್ರೆಸ್ ಸರ್ಕಾರದಿಂದ ಒಕ್ಕಲಿಗ ಸ್ವಾಮೀಜಿಗೆ ಅವಮಾನ!! ಮಾಡಲಾಗಿದೆ ಎಂದು ಬಿಜೆಪಿ ಅಸಮಾಧಾನ ವ್ಯಕ್ತಪಡಿಸಿದೆ.
ವಿಶ್ವ ಒಕ್ಕಲಿಗ ಮಹಾಸಂಸ್ಥಾನ ಮಠದ ಕುಮಾರ ಚಂದ್ರಶೇಖರನಾಥ ಸ್ವಾಮೀಜಿ ಅವರು ತಮ್ಮ ಹೇಳಿಕೆಯನ್ನು ವಾಪಸ್‌ಪಡೆದಿದ್ದರೂ, ಅವರ ವಿರುದ್ದ ಕ್ರಮ ಕೈಗೊಳ್ಳಲು ಮುಂದಾಗಿರುವುದು ಕಾಂಗ್ರೆಸ್‌ನ ಒಕ್ಕಲಿಗ ವಿರೋಧಿ ಮನಸ್ಥಿತಿಯ ಸುಸ್ಪಷ್ಟ ನಿದರ್ಶನ.
ಸಿಎಂ ಸಿದ್ದರಾಮಯ್ಯ ಅವರೆ, ನಿಮ್ಮ ಒಕ್ಕಲಿಗ ವಿರೋಧಿ ಮನಸ್ಥಿತಿಗೆ ಒಕ್ಕಲಿಗ ಸಮುದಾಯ ಒಂದಾಗಿ ಅತಿ ಶೀಘ್ರದಲ್ಲಿ ಪಾಠ ಕಲಿಸಲಿದೆ ಎಂದು ಬಿಜೆಪಿ ಎಚ್ಚರಿಸಿದೆ.