ನ.08ರಂದು ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಆಚರಣೆ ಸಮಾರಂಭ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ ಹಾಗೂ ನಗರಸಭೆ ಇವರ ಸಂಯುಕ್ತಾಶ್ರಯದಲ್ಲಿ  ಸಂತಶ್ರೇಷ್ಟ ಭಕ್ತ ಕನಕದಾಸರ ಜಯಂತಿ ಆಚರಣೆ ಸಮಾರಂಭವನ್ನು ಇದೇ ನವೆಂಬರ್ 08ರಂದು ಬೆಳಿಗ್ಗೆ 10.30ಕ್ಕೆ ಚಿತ್ರದುರ್ಗ ನಗರದ ಹೊಳಲ್ಕೆರೆ ರಸ್ತೆಯ ಕನಕವೃತ್ತದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಉದ್ಘಾಟನೆ ನೆರವೇರಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಅಧ್ಯಕ್ಷತೆ ವಹಿಸುವರು. ಗೌರವಾನ್ವಿತ ಅತಿಥಿಗಳಾಗಿ ಸಂಸದ ಗೋವಿಂದ ಎಂ ಕಾರಜೋಳ, ಹೊಸದುರ್ಗ ಶಾಸಕರು ಹಾಗೂ ಆಹಾರ ಮತ್ತು ನಾಗರಿಕ ಸರಬರಾಜು ನಿಗಮ ಅಧ್ಯಕ್ಷ ಬಿ.ಜಿ.ಗೋವಿಂದಪ್ಪ, ಚಳ್ಳಕೆರೆ ಶಾಸಕರು ಹಾಗೂ ರಾಜ್ಯ ಸಣ್ಣ ಕೈಗಾರಿಕೆಗಳ ಅಭಿವೃದ್ಧಿ ನಿಗಮ ಅಧ್ಯಕ್ಷ ಟಿ.ರಘುಮೂರ್ತಿ, ಮೊಳಕಾಲ್ಮರು ಶಾಸಕ ಎನ್.ವೈ.ಗೋಪಾಲಕೃಷ್ಣ, ಹೊಳಲ್ಕೆರೆ ಶಾಸಕ ಡಾ.ಎಂ.ಚಂದ್ರಪ್ಪ, ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್ ಭಾಗವಹಿಸುವರು.

- Advertisement - 

ಮುಖ್ಯ ಅತಿಥಿಗಳಾಗಿ ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿ ಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ರಾಜ್ಯ ಸಫಾಯಿ ಕರ್ಮಚಾರಿಗಳ ಆಯೋಗದ ಅಧ್ಯಕ್ಷ ಪಿ.ರಘು, ನಗರಾಭಿವೃದ್ಧಿ ನಿಗಮದ ಅಧ್ಯಕ್ಷ ತಾಜ್‍ಪೀರ್, ನಗರಸಭೆ ಅಧ್ಯಕ್ಷೆ ಎಂ.ಪಿ.ಅನಿತಾ ರಮೇಶ್, ಜಿಲ್ಲಾ ಗ್ಯಾರಂಟಿ ಯೋಜನೆ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಗಂಜಿಗಟ್ಟೆ, ಜಿಲ್ಲಾ ಕುರುಬರ ಸಂಘದ ಅಧ್ಯಕ್ಷ ಎಸ್.ಶ್ರೀರಾಮ್, ಕಾರ್ಯದರ್ಶಿ ಬಿ.ಟಿ.ಜಗದೀಶ್, ತಾಲ್ಲೂಕು ಕುರುಬರ ಸಂಘದ ಅಧ್ಯಕ್ಷ ಕೆ.ಓಂಕಾರಪ್ಪ ಭಾಗವಹಿಸುವರು. ಕುವೆಂಪು ವಿಶ್ವವಿದ್ಯಾಲಯ ಕನ್ನಡ ಭಾರತಿ ಹಿರಿಯ ಪ್ರಾಧ್ಯಾಪಕ ಡಾ.ಜಿ.ಪ್ರಶಾಂತ ನಾಯಕ ಉಪನ್ಯಾಸ ನೀಡುವರು. ತುರುವನೂರಿನ ಕೆ.ಲಿಂಗಯ್ಯ ವಿರಚಿತ ಕನಕದಾಸರ ಚರಿತ್ರೆ ಮತ್ತು ಜ್ಞಾನಾಂಮೃತಸಾರ ಕೃತಿಗಳ ಲೋಕಾರ್ಪಣೆ ನಡೆಯಲಿದೆ.

ಜಿಲ್ಲಾ ಕುರುಬರ ಸಂಘ ನೀಡುವ ಕನಕಶ್ರೀ ಸೇವಾರತ್ನ ಪ್ರಶಸ್ತಿ ಪುರಸ್ಕøತರಾದ ಕಾಶಿವಿಶ್ವನಾಥ ಶೆಟ್ಟಿ, ಬಿ.ಎಸ್.ಸುರೇಶ್ ಬಾಬು, ಕೆ.ಟಿ.ಶಿವಕುಮಾರ್, ಈ.ಅಶೋಕ್, ಎನ್.ಅಶೋಕ್ ಹಾಗೂ ವಿವಿಧ ಕ್ಷೇತ್ರದಲ್ಲಿ ವಿಶೇಷ ಸಾಧನೆ ಮಾಡಿದ 10 ಜನ ಸಮಾಜದ ಸಾಧಕರಿಗೆ ಗೌರವ ಸಮರ್ಪಣೆ ಮಾಡಲಾಗುವುದು.

- Advertisement - 

ಕಾರ್ಯಕ್ರಮದಲ್ಲಿ ಜಿಲ್ಲೆಯ ಸಮಸ್ತ ಗೌರವಾನ್ವಿತ ಜನಪ್ರತಿನಿಧಿಗಳು, ಜಿಲ್ಲೆಯ ಕುರುಬ ಸಮಾಜದ ಗೌರವಾನ್ವಿತ ಮುಖಂಡರು ಹಾಗೂ ಗಣ್ಯರು ಭಾಗವಹಿಸುವರು. ಆಯಿತೋಳು ವಿರೂಪಾಕ್ಷಪ್ಪ ಮತ್ತು ತಂಡದವರಿಂದ ಗೀತಗಾಯನ ನಡೆಸಿಕೊಡುವರು.

ಜಯಂತಿ ಅಂಗವಾಗಿ ಮಧ್ಯಾಹ್ನ 12ಕ್ಕೆ ನಗರದ ಹೊಳಲ್ಕೆರೆ ರಸ್ತೆಯ ಕನಕ ವೃತ್ತದಿಂದ ಜಿಲ್ಲಾ ಕುರುಬರ ಸಂಘದ ಕಚೇರಿವರೆಗೆ ವಿವಿಧ ಜಾನಪದ ಕಲಾ ತಂಡಗೊಂದಿಗೆ ಮೆರವಣಿಗೆ ನಡೆಯಲಿದೆ ಎಂದು ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಹಾಯಕ ನಿರ್ದೇಶಕ ಡಾ.ಬಿ.ಎಂ.ಗುರುನಾಥ ತಿಳಿಸಿದ್ದಾರೆ.

 

 

Share This Article
error: Content is protected !!
";