ನ. ೧೨ ರಂದು ಚಿನ್ನ, ಬೆಳ್ಳಿ ಕೆಲಸಗಾರರ ಸಂಘದ ಸಮ್ಮಿಲನ ಕಾರ್ಯಕ್ರಮ

News Desk

ಚಂದ್ರವಳ್ಳಿ ನ್ಯೂಸ್, ತುಮಕೂರು
ನಗರದ ಚಿನ್ನ, ಬೆಳ್ಳಿ ಕೆಲಸಗಾರರ ಸಂಘದ ೨೫ನೇ ವರ್ಷದ ರಜತ ಮಹೋತ್ಸವದ ಸಮ್ಮಿಲನ ಕಾರ್ಯಕ್ರಮ ನ. ೧೨ ರಂದು ಡಾ. ಗುಬ್ಬಿ ವೀರಣ್ಣ ಕಲಾ ಕ್ಷೇತ್ರದಲ್ಲಿ ನಡೆಯಲಿದೆ.

ಅಂದು ಬೆಳಿಗ್ಗೆ ೯ ಗಂಟೆಗೆ ನಗರದ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ಹಮ್ಮಿಕೊಳ್ಳಲಾಗಿದ್ದು, ಅಯೋಧ್ಯೆಯ ಶ್ರೀ ಬಾಲ ರಾಮನ ಮೂರ್ತಿಯ ಪ್ರಧಾನ ಶಿಲ್ಪಿಗಳಾದ ಡಾ. ಅರುಣ್‌ಯೋಗಿರಾಜ್ ಅವರನ್ನು ಪೂರ್ಣಕುಂಭ ಸ್ವಾಗತದೊಂದಿಗೆ ಮೆರವಣಿಗೆ ಮೂಲಕ ಕರೆ ತರಲಾಗುವುದು.

ಬೆಳಿಗ್ಗೆ ೧೧ ಗಂಟೆಗೆ ಪ್ರಧಾನ ಸಮಾರಂಭ ನಡೆಯಲಿದ್ದು, ಡಾ. ಅರುಣ್ ಯೋಗಿರಾಜ್ ಅವರನ್ನು ಸಂಘದ ವತಿಯಿಂದ ಸನ್ಮಾನಿಸಲಾಗುವುದು.

ಅರಕಲುಗೂಡು ತಾಲ್ಲೂಕು ಅರೆಮಾದನಹಳ್ಳಿಯ ಶ್ರೀ ಸುಜ್ಞಾನಪೀಠದ ಶ್ರೀ ಶಿವಸುಜ್ಞಾನ ಸ್ವಾಮೀಜಿ, ಸಿದ್ಧಗಂಗೆಯ ಶ್ರೀ ಸಿದ್ಧಲಿಂಗ ಸ್ವಾಮೀಜಿ, ನಿಟ್ಟರಹಳ್ಳಿಯ ವಿಶ್ವಕರ್ಮ ಮಠದ ಶ್ರೀ ನೀಲಕಂಠಾ ಚಾರ್ಯ ಸ್ವಾಮೀಜಿ, ಹಿರೇಮಠಾಧ್ಯಕ್ಷರಾದ ಡಾ. ಶ್ರೀ ಶಿವಾನಂದ ಶಿವಾಚಾರ್ಯ ಸ್ವಾಮೀಜಿ, ರಾಮಕೃಷ್ಣ ಆಶ್ರಮದ ಶ್ರೀ ವೀರೇಶಾನಂದ ಸ್ವಾಮೀಜಿ ದಿವ್ಯ ಸಾನ್ನಿಧ್ಯ ವಹಿಸುವರು.

ಕಾರ್ಯಕ್ರಮವನ್ನು ಗೃಹ ಸಚಿವ ಡಾ. ಜಿ.ಪರಮೇಶ್ವರ್ ಉದ್ಘಾಟಿಸುವರು. ಜಿಲ್ಲಾ ವಿಶ್ವಕರ್ಮ ಸೇವಾ ಸಮಿತಿ ಅಧ್ಯಕ್ಷ ಹೆಚ್.ವಿ. ನಾಗರಾಜಾಚಾರ್ ಅಧ್ಯಕ್ಷತೆ ವಹಿಸುವರು.

ಮುಖ್ಯ ಅತಿಥಿಗಳಾಗಿ ಕೇಂದ್ರ ಸಚಿವ ವಿ.ಸೋಮಣ್ಣ, ರಾಜ್ಯ ಸರ್ಕಾರದ ಸಚಿವರಾದ ಕೆ.ಎನ್.ರಾಜಣ್ಣ, ರಾಮಲಿಂಗಾರೆಡ್ಡಿ, ಸಂತೋಷ್ ಲಾಡ್, ಶಾಸಕರಾದ ಜಿ.ಬಿ.ಜ್ಯೋತಿಗಣೇಶ್, ಬಿ.ಸುರೇಶ್‌ಗೌಡ, ಮಾಜಿ ಸಚಿವ ಎಸ್.ಶಿವಣ್ಣ, ಪತ್ರಕರ್ತ ಎಸ್.ನಾಗಣ್ಣ  ಭಾಗವಹಿಸುವರು.

ಜಿಲ್ಲಾ ಮಟ್ಟದ ವಿವಿಧ ಇಲಾಖೆಯ ಅಧಿಕಾರಿಗಳು, ವಿಶ್ವಕರ್ಮ ಸಂಘದ ಅಂಗ ಸಂಸ್ಥೆಗಳ ವಿವಿಧ ಪದಾಧಿಕಾರಿಗಳು ವಿಶೇಷ ಆಹ್ವಾನಿತರಾಗಿ ಪಾಲ್ಗೊಳ್ಳುವರು.

ಇದೇ ಸಂದರ್ಭದಲ್ಲಿ ಸಂಘದ ಮಾಜಿ ಅಧ್ಯಕ್ಷರು, ಹಾಲಿ ಅಧ್ಯಕ್ಷರು, ಪದಾಧಿಕಾರಿಗಳಿಗೆ ಹಾಗೂ ಸದಸ್ಯರುಗಳಿಗೆ ಸನ್ಮಾನ ಕಾರ್ಯಕ್ರಮವನ್ನು ಹಮ್ಮಿಕೊಂಡಿರುವುದಾಗಿ ಪ್ರಕಟಣೆ ತಿಳಿಸಿದೆ.

 

- Advertisement -  - Advertisement -  - Advertisement - 
Share This Article
error: Content is protected !!
";