ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ವತಿಯಿಂದ ಇದೇ ಡಿ.22ರಂದು ಬೆಳಿಗ್ಗೆ 10.30ಕ್ಕೆ ನಗರದ ತರಾಸು ರಂಗಮಂದಿರದಲ್ಲಿ ವಾಲ್ಮೀಕಿ ನಾಯಕ ನೌಕರರ ಸಮಾವೇಶ ಹಾಗೂ ಪ್ರತಿಭಾ ಪುರಸ್ಕಾರ ಸಮಾರಂಭ ಹಮ್ಮಿಕೊಳ್ಳಲಾಗಿದೆ.
ಲೋಕೋಪಯೋಗಿ ಸಚಿವ ಸತೀಶ್ ಜಾರಕಿಹೊಳಿ ಉದ್ಘಾಟಿಸುವರು. ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ವಾಲ್ಮೀಕಿ ಭಾವಚಿತ್ರ ಅನಾವರಣ ಮಾಡುವರು. ಶಾಸಕ ಎನ್.ವೈ.ಗೋಪಾಲಕೃಷ್ಣ ಅವರು ಜೀವಮಾನ ಸಾಧನ ಪ್ರಶಸ್ತಿ ಪ್ರಧಾನ ಮಾಡುವರು. ಶಾಸಕ ಟಿ.ರಘುಮೂರ್ತಿ ಸಮಾಜದ ಸಾಧಕರಿಗೆ ಸನ್ಮಾನ ಮಾಡುವರು.
ಸಂಸದ ಗೋವಿಂದ ಎಂ.ಕಾರಜೋಳ, ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ, ಜಿಲ್ಲಾ ಮದಕರಿ ನಾಯಕ ವಿದ್ಯಾಸಂಸ್ಥೆ ಅಧ್ಯಕ್ಷ ಎಸ್.ಸಂದೀಪ್ ಪ್ರತಿಭಾನ್ವಿತ ವಿದ್ಯಾರ್ಥಿಗಳಿಗೆ ಪ್ರತಿಭಾ ಪುರಸ್ಕಾರ ಮಾಡುವರು. ಚಿತ್ರದುರ್ಗ ವಾಲ್ಮೀಕಿ ನಾಯಕ ನೌಕರರ ಕ್ಷೇಮಾಭಿವೃದ್ಧಿ ಮತ್ತು ಸಾಂಸ್ಕøತಿಕ ಸಂಘದ ಅಧ್ಯಕ್ಷ ಡಾ.ಹೆಚ್.ಗುಡ್ಡದೇಶ್ವರಪ್ಪ ಅಧ್ಯಕ್ಷತೆ ವಹಿಸುವರು.
ಮುಖ್ಯ ಅತಿಥಿಗಳಾಗಿ ವಿಜಯನಗರ ಜಿಲ್ಲಾ ಪಂಚಾಯತ್ ಮುಖ್ಯಲೆಕ್ಕಾಧಿಕಾರಿ ಸಿ.ಜಿ.ಶ್ರೀನಿವಾಸ್, ಕಿವಿ,ಮೂಗು, ಗಂಟಲು ತಜ್ಞರು ಹಾಗೂ ಸಂಶೋಧಕ ಡಾ.ಎನ್.ಬಿ.ಪ್ರಹ್ಲಾದ್, ಆಹಾರ ಇಲಾಖೆ ಜಂಟಿ ನಿರ್ದೇಶಕ ಕೆ.ಪಿ.ಮಧುಸೂದನ್ ಸೇರಿದಂತೆ ಅಧಿಕಾರಿಗಳು, ಸಮಾಜದ ಸಾಧಕರು, ಗಣ್ಯರು, ಜನಪ್ರತಿನಿಧಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.