ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ಮಹಿಳಾ ಆಯೋಗದ ಅಧ್ಯಕ್ಷರಾದ ಡಾ. ನಾಗಲಕ್ಷ್ಮೀ ಚೌಧರಿ ಅವರು ಫೆ. 06 ರಂದು ಮಧ್ಯಾಹ್ನ 12 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸಲಿದ್ದಾರೆ.
ಆಯೋಗದ ಅಧ್ಯಕ್ಷರು ಫೆ. 06 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಪ್ರಗತಿ ಪರಿಶೀಲನಾ ಸಭೆ ನಡೆಸುವರು. ಬಳಿಕ ಮಧ್ಯಾಹ್ನ 12 ಗಂಟೆಗೆ ಸಾರ್ವಜನಿಕರಿಂದ ಅಹವಾಲುಗಳನ್ನು ಸ್ವೀಕರಿಸುವರು.
ಹೀಗಾಗಿ ಮಹಿಳೆಯರು ತಮ್ಮ ಅಹವಾಲುಗಳನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸಲ್ಲಿಸಬಹುದು ಎಂದು ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.