ಜ.04 ರಂದು ವಿವಿ ಸಾಗರಕ್ಕೆ ಬಾಗಿನ, ಭದ್ರಾ ಮೇಲ್ದಂಡೆ ಕಾಮಗಾರಿ ಪರಿವೀಕ್ಷಣೆ

News Desk
- Advertisement -  - Advertisement - 

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಹಾಗೂ ಜಿಲ್ಲೆಯ ಶಾಸಕರುಗಳು ಇದೇ ಜನವರಿ 04 ರಂದು ವಾಣಿ ವಿಲಾಸ ಸಾಗರ ಜಲಾಶಯಕ್ಕೆ ಬಾಗಿನ ಅರ್ಪಿಸಿ
, ಬಳಿಕ ಭದ್ರಾ ಮೇಲ್ದಂಡೆ ಯೋಜನೆಯ ಚಿತ್ರದುರ್ಗ ಶಾಖಾ ಕಾಲುವೆಯ ಕಾಮಗಾರಿ ಪರಿವೀಕ್ಷಣೆ ಮಾಡುವರು.

      ಜ.04 ರಂದು ಬೆಳಿಗ್ಗೆ 10.30 ಕ್ಕೆ ಹಿರಿಯೂರು ತಾಲ್ಲೂಕು ವಿ.ವಿ.ಪುರ ಗ್ರಾಮದ ವಿ.ವಿ.ಸಾಗರ ಜಲಾಶಯ ಬಾಗಿನ ಅರ್ಪಣೆ, ಮಧ್ಯಾಹ್ನ 12 ರಿಂದ ಚಿಕ್ಕಸಿದ್ದವ್ವನಹಳ್ಳಿ ಕಾಲುವೆ ನಿರ್ಮಾಣ ಕಾಮಗಾರಿ,

- Advertisement - 

ಕುಂಚಿಗನಾಳ್ ಅಕ್ವಡೆಕ್ಟ್, ಸೇತುವೆ ನಿರ್ಮಾಣ ಕಾಮಗಾರಿ ಮತ್ತು ಗೋನೂರು ಸೇತುವೆ ನಿರ್ಮಾಣ ಕಾಮಗಾರಿ ಪರಿವೀಕ್ಷಣೆ ಮಾಡುವರು. ಮಧ್ಯಾಹ್ನ 2 ರಿಂದ ಚಿತ್ರದುರ್ಗ ನಗರದ ಭದ್ರಾ ಮೇಲ್ದಂಡೆ ಕಚೇರಿಯಲ್ಲಿ ಪತ್ರಿಕಾಗೋಷ್ಠಿ ನಡೆಸುವರು ಎಂದು ಅಪರ ಜಿಲ್ಲಾಧಿಕಾರಿ ಬಿ.ಟಿ.ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

- Advertisement - 
Share This Article
error: Content is protected !!
";