ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಶಿವಶರಣರಾದ ಶಿವನಾಗಮಯ್ಯ ಅವರ ಜಯಂತಿ(ಶರಣೋತ್ಸವ)ಚಿತ್ರದುರ್ಗದ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠದ ವತಿಯಿಂದ ಇದೇ ತಿಂಗಳ(12-5-2025) ಸೋಮವಾರ ಬೆಳಗಿನ 8-30ಗಂಟೆಯಿಂದ ಶ್ರೀಮಠದ ಮುರುಗಿಯ ಶಾಂತವೀರ ಮುರುಘರಾಜೇಂದ್ರ ಮಹಾಸ್ವಾಮಿಗಳವರ ಲೀಲಾ ವಿಶ್ರಾಂತಿ ತಾಣದ ಆವರಣದಲ್ಲಿ ಏರ್ಪಡಿಸಲಾಗಿದೆ.
ಅಂದಿನ ಸಮಾರಂಭದ ಅಧ್ಯಕ್ಷತೆ ಶ್ರೀ ಜಗದ್ಗುರು ಮುರುಘರಾಜೇಂದ್ರ ಬೃಹನ್ಮಠ ಹಾಗೂ ವಿದ್ಯಾಪೀಠದ ಆಡಳಿತ ಮಂಡಳಿಯ ಅಧ್ಯಕ್ಷ ಶಿವಯೋಗಿ. ಸಿ. ಕಳಸದ್ ವಹಿಸಲಿದ್ದು ,
ಆಡಳಿತ ಮಂಡಳಿಯ ಸದಸ್ಯರಾದ ಡಾ. ಬಸವಕುಮಾರ ಮಹಾಸ್ವಾಮಿ ಸಾನಿಧ್ಯದಲ್ಲಿ ನಡೆಯಲಿರುವ ನಗರದ ಶ್ರೀ ಜಗದ್ಗುರು ಮಲ್ಲಿಕಾರ್ಜುನ ಮುರುಘರಾಜೇಂದ್ರ ಔಷಧ ಮಹಾವಿದ್ಯಾಲಯ ಇವರ ನಿರ್ವಹಣೆಯಲ್ಲಿ ಸಮಾರಂಭ ಜರುಗಲಿದೆ.