ಒಂದು ಕಡೆ ಅಪಸ್ವರ ಇನ್ನೊಂದು ಕಡೆ ಸೆ-24 ರಂದು ಶಿವಾಚಾರ್ಯ ಮಹಾಸ್ವಾಮಿಗಳ ಶ್ರದ್ಧಾಂಜಲಿ ಸಭೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ
ಸಿರಿಗೆರೆ ಶ್ರೀ ತರಳಬಾಳು ಜಗದ್ಗುರು ಬೃಹನ್ಮಠದ ಲಿಂಗೈಕ್ಯ ಶ್ರೀ ಶೀವಕುಮಾರ ಶಿವಾಚಾರ್ಯ ಮಹಾಸ್ವಾಮಿಗಳವರ
32 ನೇ ಶ್ರದ್ಧಾಂಜಲಿ ಸಮಾರಂಭವು ಸೆಪ್ಟೆಂಬರ್ 24 ರಂದು ಸಿರಿಗೆರೆಯಲ್ಲಿ ಆಯೋಜಿಸಲಾಗಿದೆ.

ಶ್ರದ್ಧಾಂಜಲಿ ಸಮಾರಂಭದ ಅಂಗವಾಗಿ ಭದ್ರಾವತಿ ತಾಲ್ಲೂಕಿನ ಕೂಡ್ಲಿಗೆರೆ ವಿಭಾಗದಿಂದ ನಾಗತಿಬೆಳಗಲು ಗ್ರಾಮದ ಶ್ರೀ ನಂಜುಂಡೇಶ್ವರ ದೇವಸ್ಥಾನದ ಆವರಣದಲ್ಲಿ ಹಮ್ಮಿಕೊಂಡಿದ್ದ ಭಕ್ತಿ ಸಮರ್ಪಣೆ ಕಾರ್ಯಕ್ರಮವು ಶ್ರೀ ತರಳಬಾಳು ಜಗದ್ಗುರು ಶ್ರೀ 1108 ಡಾ. ಶಿವಮೂರ್ತಿ ಶಿವಮೂರ್ತಿ ಶಿವಾಚಾರ್ಯ ಮಹಾಸ್ವಾಮೀಜಿಗಳವರ ದಿವ್ಯ ಸಾನ್ನಿಧದಲ್ಲಿ ಅದ್ಧೂರಿಯಾಗಿ ನೆರವೇರಿತು.

 ಈ ವೇಳೆ ರೈತ ಸಂಘದ ರಾಜ್ಯಾಧ್ಯಕ್ಷ ಬಸವರಾಜಪ್ಪ, ವೀರಶೈವ ಸಮಾಜದ ಮುಖಂಡ ರವಿ ಅಧ್ಯಕ್ಷತೆ ವಹಿಸಿದ್ದರು.
ಶಿವಮೊಗ್ಗ ಗ್ರಾಮಾಂತರ ಶಾಸಕಿ ಶಾರದಾ ಪೂರ್ಯಾನಾಯ್ಕ , ವಿಧಾನ ಪರಿಷತ್ ಸದಸ್ಯರಾದ ಧನಂಜಯ ಸರ್ಜಿ ಅವರು ಸೇರಿದಂತೆ ಸಮಾಜದ ವಿವಿಧ ಗಣ್ಯರು, ಮುಖಂಡರು, ಸಾವಿರಾರು ಭಕ್ತರು, ಗ್ರಾಮಸ್ಥರು ಭಾಗವಹಿಸಿದ್ದರು.

 

 

 

- Advertisement -  - Advertisement - 
Share This Article
error: Content is protected !!
";