ಆ.30ರಂದು ಹಿರಿಯೂರು ಬಸ್ ಡಿಪೋ ಲೋಕಾರ್ಪಣೆ

News Desk

ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ:
ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಚಿತ್ರದುರ್ಗ ವಿಭಾಗದ ಹಿರಿಯೂರು ನೂತನ ಬಸ್ ಘಟಕದ ಉದ್ಘಾಟನಾ ಸಮಾರಂಭವನ್ನು ಇದೇ ಆಗಸ್ಟ್ 30ರಂದು ಬೆಳಿಗ್ಗೆ 11ಕ್ಕೆ ಹಿರಿಯೂರು ಬಸ್ ಘಟಕದ ಆವರಣದಲ್ಲಿ ಹಮ್ಮಿಕೊಳ್ಳಲಾಗಿದೆ.

ಯೋಜನೆ ಮತ್ತು ಸಾಂಖ್ಯಿಕ ಸಚಿವರು ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಅಧ್ಯಕ್ಷತೆ ವಹಿಸುವರು. ಸಾರಿಗೆ ಹಾಗೂ  ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ಉದ್ಘಾಟನೆ ನೆರವೇರಿಸುವರು. ಸಂಸದ ಗೋವಿಂದ ಎಂ.ಕಾರಜೋಳ ಘನ ಉಪಸ್ಥಿತಿ ವಹಿಸುವರು. ಮುಖ್ಯ ಅತಿಥಿಗಳಾಗಿ ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಅಧ್ಯಕ್ಷರು ಹಾಗೂ ಗುಬ್ಬಿ ವಿಧಾನಸಭಾ ಕ್ಷೇತ್ರ ಶಾಸಕ ಎಸ್.ಆರ್.ಶ್ರೀನಿವಾಸ್ (ವಾಸು), ವಿಧಾನ ಪರಿಷತ್ ಶಾಸಕರಾದ ಚಿದಾನಂದ ಎಂ.ಗೌಡ, ಕೆ.ಎಸ್.ನವೀನ್, ಡಿ.ಟಿ.ಶ್ರೀನಿವಾಸ್,

- Advertisement - 

ಕರ್ನಾಟಕ ದ್ರಾಕ್ಷಾರಸ ಮಂಡಳಿ ಅಧ್ಯಕ್ಷ ಡಾ.ಬಿ.ಯೋಗೇಶ್ ಬಾಬು, ಆದಿಜಾಂಬವ ಅಭಿವೃದ್ಧಿ ನಿಗಮ ಅಧ್ಯಕ್ಷ ಜಿ.ಎಸ್.ಮಂಜುನಾಥ, ಹಿರಿಯೂರು ನಗರಸಭೆ ಅಧ್ಯಕ್ಷ ಆರ್.ಬಾಲಕೃಷ್ಣ, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ಉಪಾಧ್ಯಕ್ಷ ಮಹಮ್ಮದ್ ರಿಜ್ವಾನ್ ನವಾಬ್, ಜಿಲ್ಲಾ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರ ಅಧ್ಯಕ್ಷ ಆರ್.ಶಿವಣ್ಣ ಭಾಗವಹಿಸುವರು.

ವಿಶೇಷ ಆಹ್ವಾನಿತರಾಗಿ ಜಿಲ್ಲಾ ಪಂಚಾಯತ್ ಆಡಳಿತಾಧಿಕಾರಿ ಆಮ್ಲಾನ್ ಆದಿತ್ಯ ಬಿಸ್ವಾಸ್, ಸಾರಿಗೆ ಇಲಾಖೆ ಸರ್ಕಾರದ ಕಾರ್ಯದರ್ಶಿ ಡಾ.ಎನ್.ವಿ.ಪ್ರಸಾದ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ವ್ಯವಸ್ಥಾಪಕ ನಿರ್ದೇಶಕ ಅಕ್ರಂ ಪಾಷಾ, ಜಿಲ್ಲಾಧಿಕಾರಿ ಟಿ.ವೆಂಕಟೇಶ್, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನಿಗಮ ನಿರ್ದೇಶಕಿ (ಸಿಬ್ಬಂದಿ ಮತ್ತು ಜಾಗೃತ) ಡಾ.ಕೆ.ನಂದಿನಿದೇವಿ,

- Advertisement - 

ನಿರ್ದೇಶಕ (ಮಾಹಿತಿ ತಂತ್ರಜ್ಞಾನ) ಇಬ್ರಾಹಿಂ ಮೈಗೂರ, ಜಿ.ಪಂ ಸಿಇಒ ಡಾ.ಎಸ್.ಆಕಾಶ್, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ರಂಜಿತ್  ಕುಮಾರ್ ಬಂಡಾರು ಹಾಗೂ ಹಿರಿಯೂರು ನಗರಸಭೆ ಉಪಾಧ್ಯಕ್ಷರು, ಸದಸ್ಯರು ಹಾಗೂ ಹಿರಿಯೂರು ತಾಲ್ಲೂಕಿನ ಎಲ್ಲ  ಜನ ಪ್ರತಿನಿಧಿಗಳು ಭಾಗವಹಿಸುವರು ಎಂದು ಕೆಎಸ್‍ಆರ್‍ಟಿಸಿ ಚಿತ್ರದುರ್ಗ ವಿಭಾಗದ ವಿಭಾಗೀಯ ನಿಯಂತ್ರಣಾಧಿಕಾರಿ ಕೆ.ವೆಂಕಟೇಶ್ ತಿಳಿಸಿದ್ದಾರೆ.

 

 

 

Share This Article
error: Content is protected !!
";