ಚಂದ್ರವಳ್ಳಿ ನ್ಯೂಸ್, ಚಿತ್ರದುರ್ಗ::
ಚಿತ್ರದುರ್ಗ ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಇದೇ ಆಗಸ್ಟ್ 23ರಂದು ಮಧ್ಯಾಹ್ನ 2ಕ್ಕೆ ನಗರದ ಗಾಯಿತ್ರಿ ಕಲ್ಯಾಣ ಮಂಟಪದಲ್ಲಿ ರಾಜ್ಯಮಟ್ಟದ ಕುಳುವ ಜನಾಂಗದ ಸಮಾವೇಶ ಹಾಗೂ ಕಾಯಕಯೋಗಿ ಶಿವಶರಣ ಶ್ರೀ ನುಲಿಯ ಚಂದಯ್ಯನವರ 918ನೇ ಜಯಂತ್ಯೋತ್ಸವ ಹಮ್ಮಿಕೊಳ್ಳಲಾಗಿದೆ.
ಜಯಂತಿ ಅಂಗವಾಗಿ ಅಂದು ಬೆಳಿಗ್ಗೆ 8.30ಕ್ಕೆ ನಗರದ ಶ್ರೀ ನೀಲಕಂಠೇಶ್ವರ ದೇವಸ್ಥಾನದ ಮುಂಭಾಗದಿಂದ ಮೆರವಣಿಗೆಗೆ ಚಾಲನೆ ನೀಡಲಾಗುವುದು. ವಾದ್ಯ, ಕಲಾ ಮತ್ತು ಸಾಂಸ್ಕೃತಿಕ ತಂಡಗಳೊಂದಿಗೆ ನಗರದ ಬಿ.ಡಿ.ರಸ್ತೆಯ ಮೂಲಕ ಡಾ.ಬಿ.ಆರ್.ಅಂಬೇಡ್ಕರ್ ಪುತ್ಥಳಿಗೆ ಪುಷ್ಪಮಾಲೆ ಅರ್ಪಿಸಿ, ಗಾಯತ್ರಿ ಕಲ್ಯಾಣ ಮಂಟಪದವರೆಗೂ ನುಲಿಯ ಚಂದಯ್ಯನವರ ಭಾವಚಿತ್ರ ಮೆರವಣಿಗೆ ನಡೆಯಲಿದೆ.
ಮಧ್ಯಾಹ್ನ 2ಕ್ಕೆ ವೇದಿಕೆ ಕಾರ್ಯಕ್ರಮ ನಡೆಯಲಿದ್ದು, ಬಸವಪ್ರಭು ಮಹಾಸ್ವಾಮೀಜಿ, ಬಸವ ಪ್ರಸಾದ ಮಹಾಸ್ವಾಮೀಜಿ ದಿವ್ಯ ಸಾನಿಧ್ಯವಹಿಸುವರು. ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಇಲಾಖೆ ಸಚಿವ ಶಿವರಾಜ ತಂಗಡಗಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಡಿ.ಸುಧಾಕರ್ ಕಾರ್ಯಕ್ರಮ ಉದ್ಘಾಟಿಸುವರು.
ಅತಿಥಿಗಳಾಗಿ ಸಂಸದ ಗೋವಿಂದ ಎಂ.ಕಾರಜೋಳ ಭಾಗವಹಿಸುವರು. ಶಾಸಕ ಕೆ.ಸಿ.ವೀರೇಂದ್ರ ಪಪ್ಪಿ ಘನ ಉಪಸ್ಥಿತಿ ವಹಿಸುವರು. ಕರ್ನಾಟಕ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ ಅಲೆಮಾರಿ ಅಭಿವೃದ್ಧಿ ನಿಗಮ ಅಧ್ಯಕ್ಷೆ ಜಿ.ಪಲ್ಲವಿ ಹಾಗೂ ಅಖಿಲ ಕರ್ನಾಟಕ ಕುಳುವ ಮಹಾಸಂಘ ರಾಜ್ಯಾಧ್ಯಕ್ಷ ಶಿವಾನಂದ ಎಂ.ಭಜಂತ್ರಿ ಕುಂಭ ಮೆರವಣಿಗೆ ಉದ್ಘಾಟನೆ ನೆರವೇರಿಸುವರು.
ನುಲಿಯ ಚಂದಯ್ಯನವರ ಭಾವಚಿತ್ರಕ್ಕೆ ಮಾಜಿ ಶಾಸಕ ಎಂ.ಚಂದ್ರಣ್ಣ, ಕೆಡಿಪಿ ಸದಸ್ಯ ಕೆ.ಸಿ.ನಾಗರಾಜ್ ಪುಷ್ಪಾರ್ಚನೆ ನೆರವೇರಿಸುವರು. ಜಿಲ್ಲಾ ಕೊರಮ ಜನಾಂಗದ ಕ್ಷೇಮಾಭಿವೃದ್ಧಿ ಅಧ್ಯಕ್ಷ ಕೆ.ಕೃಷ್ಣಪ್ಪ ಅಧ್ಯಕ್ಷತೆ ವಹಿಸುವರು. ಮುಖ್ಯ ಅತಿಥಿಗಳಾಗಿ ಶಾಸಕರಾದ ಎನ್.ವೈ.ಗೋಪಾಲಕೃಷ್ಣ, ಬಿ.ಜಿ.ಗೋವಿಂದಪ್ಪ, ಟಿ.ರಘುಮೂರ್ತಿ, ಎಂ.ಚಂದ್ರಪ್ಪ ಸೇರಿದಂತೆ ಮತ್ತಿತರೆ ಗಣ್ಯರು ಹಾಗೂ ಅಧಿಕಾರಿಗಳು ಭಾಗವಹಿಸುವರು ಎಂದು ಪ್ರಕಟಣೆ ತಿಳಿಸಿದೆ.

