ಜ್ಯೂಸ್ ಬಾಟಲ್ ಮುಚ್ಚಳ ನುಂಗಿ ಒಂದೂವರೆ ವರ್ಷದ ಮಗುವಿನ ದಾರುಣ ಸಾವು

WhatsApp
Telegram
Facebook
Twitter
LinkedIn

 

 

 

ಶಿಕಾರಿಪುರ : ಮನೆಯಲ್ಲಿ ಆಟವಾಡುವ ವೇಳೆ, ಒಂದೂವರೆ ವರ್ಷದ ಮಗುವೊಂದು ಜ್ಯೂಸ್ ಬಾಟಲಿಯ ಮುಚ್ಚಳ ನುಂಗಿ ಉಸಿರಾಟದ ತೊಂದರೆಯಿಂದ ಮೃತಪಟ್ಟ ದಾರುಣ ಘಟನೆ, ಶಿಕಾರಿಪುರ ತಾಲೂಕಿನ ಅಮಟೆಕೊಪ್ಪ ಗ್ರಾಮ ಪಂಚಾಯ್ತಿ ವ್ಯಾಪ್ತಿಯಲ್ಲಿ ನಡೆದಿದೆ.

ತಾಲೂಕಿನ ಹರಗುವಳ್ಳಿ ಗ್ರಾಮ ದಲ್ಲಿ ಈ ಘಟನೆ ನಡೆದಿದೆ. ವೇದಮೂರ್ತಿ ಗಂಗಾಧರಯ್ಯ ಶಾಸ್ತ್ರಿ ಎಂಬುವರ ಪುತ್ರ ನಂದೀಶ್ ಮೃತಪಟ್ಟ ಮಗು ಎಂದು ಗುರುತಿಸಲಾಗಿದೆ.

ಸೆ.4 ರ ಬುಧವಾರ ಬೆಳಿಗ್ಗೆ ಮನೆಯಲ್ಲಿ ಜ್ಯೂಸ್ ಬಾಟಲಿ ಹಿಡಿದುಕೊಂಡು ಮಗು ಆಟವಾಡುತ್ತಿತ್ತು. ಈ ವೇಳೆ ಆಕಸ್ಮಿಕವಾಗಿ ಮುಚ್ಚಳ ನುಂಗಿದ್ದು ಅದು ಗಂಟಲಲ್ಲಿ ಸಿಲುಕಿ ಬಿದ್ದಿದೆ. ಮುಗುವಿನ ಉಸಿರಾಟದಲ್ಲಿ ಏರುಪೇರಾಗಿದೆ.

ತಕ್ಷಣವೇ ಕುಟುಂಬದವರು ವಾಹನವೊಂದರಲ್ಲಿ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗಮಧ್ಯೆ ಮಗು ಕೊನೆಯುಸಿರೆಳೆದಿದೆ ಎಂದು ತಿಳಿದುಬಂದಿದೆ.

Nagendra Chandravalli Reporter   About Us
For Feedback - [email protected]

LATEST Post

error: Content is protected !!
WhatsApp Icon Telegram Icon